ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ನಾನು ಕುಟುಂಬ ಸಹಿತ ಕ್ಷೇತ್ರಕ್ಕೆ ಬರುವೆ, ಈಗ ಹೋರಾಟ ಮಾಡಲಿಲ್ಲ ಅಂದ್ರೆ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿದಂತೆ: ಹೆಬ್ಬಾಳ್ಕರ್
Team Udayavani, Dec 24, 2024, 6:03 PM IST
ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದ್ದು, ಎಂಎಲ್‌ಸಿ ಸಿ.ಟಿ.ರವಿಯವರು ನನ್ನ ಬಗ್ಗೆ ಅವಾಚ್ಯ ಶಬ್ದ ಬಳಸಿಲ್ಲವೆಂದಾದರೆ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಗೆ ಬಂದು ಆಣೆ ಪ್ರಮಾಣ ಮಾಡಲಿ ನೋಡೋಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಮಾಧ್ಯಮಗಳಿಗೆ ನೀಡಿದ ಸಂದರ್ಶನ ವೇಳೆ ಮಾತನಾಡಿ ಬೆಳಗಾವಿ ಸುವರ್ಣಸೌಧದ ಪರಿಷತ್ ಕಲಾಪದಲ್ಲಿ ಸಿ.ಟಿ ರವಿಯವರು ಅಸಾಂವಿಧಾನಿಕ ಪದ ಬಳಸಿ ನಿಂದಿಸಿದ್ದಾರೆ ಎಂದು ನಾನು ನಾಟಕ ಮಾಡೋದಕ್ಕೆ ಆಗುತ್ತಾ? ಸದನದಲ್ಲಿ ನಿಂತು ಸುಳ್ಳು ಆರೋಪ ಮಾಡೋದಕ್ಕೆ ಆಗುತ್ತಾ? ಸುಳ್ಳು ಹೇಳೋದಕ್ಕೆ ನನಗೇನು ಹುಚ್ಚಾ? ನಾಟಕವಾಡಿ ರಾಜಕಾರಣದಲ್ಲಿ ನಾನು ಏನಾದ್ರೂ ಗಳಿಸೋದು ಇದ್ಯಾ? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.
ರಾಮಾಯಣ, ಮಹಾಭಾರತ ಆಗಿದ್ದು, ಮಹಿಳೆಯನ್ನು ಅಪಮಾನ ಮಾಡಿದ್ದಕ್ಕೆ. ಅಲ್ಲಿ ಅಪಮಾನ ಮಾಡಿದ ಎಲ್ಲರಿಗೂ ಶಿಕ್ಷೆ ಆಗಿದೆ. ಇಲ್ಲಿಯೂ ಆಗುತ್ತೆ. ಸಿ.ಟಿ ರವಿ ಅವರು ಆ ರೀತಿ ಹೇಳಿಲ್ಲ ಅನ್ನೋದಾದ್ರೆ, ಧರ್ಮಸ್ಥಳಕ್ಕೆ ಬಂದು ಆಣೆ, ಪ್ರಮಾಣ ಮಾಡಲಿ. ಆಣೆ ಮಾಡಲಿಕ್ಕೆ ನಾನೂ ನನ್ನ ಕುಟುಂಬ ಸಮೇತವಾಗಿ ನಾನು ಬರ್ತೀನಿ ಎಂದು ಆಗ್ರಹಿಸಿದರು.
ಆಡಿಯೋ, ವಿಡಿಯೋ ಎಲ್ಲವೂ ನನ್ನತ್ರ ಸಾಕ್ಷಿ ಇದೆ:
ʻಫ್ರೆಟ್ಟ್ರೇಟ್ʼ ಎಂದು ಉಚ್ಚಾರ ಮಾಡಿರುವುದಾಗಿ ಸಿ.ಟಿ ರವಿ ಹೇಳ್ತಾರಲ್ಲಾ ಎಂಬ ಪ್ರಶ್ನೆಗೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಫ್ರಸ್ಟ್ರೇಟ್ ಅನ್ನೋದಕ್ಕೂ ಆ ಪದಕ್ಕೂ ವ್ಯತ್ಯಾಸ ಇರಲ್ವಾ? ಅವರು ಹೇಳಿರೋದಕ್ಕೆ ಆಡಿಯೋ, ವಿಡಿಯೋ ಎಲ್ಲವೂ ನನ್ನತ್ರ ಸಾಕ್ಷಿ ಇದೆ. ಲಕ್ಷ್ಮೀ ಹೆಬ್ಬಾಳ್ಕರ್ ಸಂಪುಟದಲ್ಲಿರುವ ಏಕೈಕ ಮಹಿಳಾ ಸಚಿವೆ, ಸಾವಿರಾರು ಮಂದಿ ರಾಜಕಾರಣಕ್ಕೆ ಬರಲು ಮುಂದಾಗಿದ್ದಾರೆ. ಈಗ ಹೋರಾಟ ಮಾಡಲಿಲ್ಲ ಅಂದ್ರೆ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿದಂತೆ ಆಗುತ್ತದೆ. ನಾನು ಸಂಘರ್ಷ ಅಪಮಾನ ಮೆಟ್ಟಿನಿಂತು ಬೆಳೆದಿದ್ದೇನೆ. ಆದರೆ ಈ ಘಟನೆಯಿಂದ ನನ್ನ ಮನಸ್ಸಿಗೆ ಆಘಾತ ಉಂಟಾಗಿದೆ ಎಂದರು.
ʻಕೊಲೆಗಾರʼ ಎನ್ನುವಂತಹ ಪ್ರಶ್ನೆ ಯಾಕೆ ಬಂತು ಎಂದು ಕೇಳಿದಾಗ ಸಿ.ಟಿ ರವಿ ಆಕ್ಸಿಡೆಂಟ್ ಮಾಡಿರುವ ವೀಡಿಯೋ ನನ್ನ ಬಳಿಯಿದೆ. ನಾನು ʻಕೊಲೆಗಾರʼ ಅಂದಿಲ್ಲ ಅಂತ ಹೇಳ್ತಿಲ್ಲ.. ಅವರ ಹಾಗೆ ನನಗೆ ಚಪಲಾನಾ, ಪ್ರತಿಯೊಂದಕ್ಕೆ ಎದ್ದು ನಿಂತು ಮಾತಾಡೋದಕ್ಕೆ ನಾನು ಗಾಂಧಿ ಹಾಕಿಕೊಟ್ಟಂತಹ ಮಾರ್ಗದಲ್ಲಿ ನಡೆಯುತ್ತಿರುವವಳು, ಗೋಡ್ಸೆ ಮಾರ್ಗದಲ್ಲಿ ನಡೆಯುವಂತಹವರಲ್ಲ ಎಂದರು.
ಆ ರೀತಿಯ ಯಾವುದೇ ವಿಡಿಯೋ ಇಲ್ಲ, ಅದು ನಕಲಿ ಎಂಬ ಸಭಾಪತಿಗಳ ಹೇಳಿಕೆ ಕುರಿತು ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಸುಮಾರು ಸಂದರ್ಭದಲ್ಲಿ ನನಗೆ ಮಾರ್ಗದರ್ಶನ ಕೊಟ್ಟವರು ಸಭಾಪತಿಯವರು. ನನಗೆ ಫೋನ್ ಮಾಡಿ ಸಾಂತ್ವನ ಹೇಳಿದ್ದಾರೆ. ಅವರು ಯಾಕೆ ಈ ರೀತಿ ಹೇಳಿದ್ದಾರೋ ನನಗೆ ಗೊತ್ತಿಲ್ಲ, ಅವರ ರೂಲಿಂಗ್ ಬಗ್ಗೆ ಮಾತಾಡುವಷ್ಟು ಹಿರಿಯಳೂ ನಾನಲ್ಲ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.