ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Team Udayavani, Dec 24, 2024, 6:03 PM IST
ಉದಯವಾಣಿ ಸಮಾಚಾರ
ಹೊಸಪೇಟೆ: ವಿಶ್ವವಿಖ್ಯಾತ ಹಂಪಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಡಿಸೆಂಬರ್
ತಿಂಗಳಲ್ಲಿ ಅಂದಾಜು 70 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಹಂಪಿಗೆ ಭೇಟಿ ನೀಡಿದ್ದಾರೆ. ಡಿಸೆಂಬರ್ ತಿಂಗಳಲ್ಲಿ ಹೆಚ್ಚು ಸರಣಿ ರಜೆಗಳು ಬಂದಿದ್ದರಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಹಂಪಿಗೆ ಆಗಮಿಸಿ, ಪ್ರಮುಖ ಸ್ಮಾರಕ ಕಣ್ತುಂಬಿಕೊಂಡಿದ್ದಾರೆ.
ಕರ್ನಾಟಕ, ತೆಲಂಗಾಣ, ಆಂಧ್ರ, ತಮಿಳುನಾಡು, ಕೇರಳ ಸೇರಿದಂತೆ ಮಹಾರಾಷ್ಟ್ರದಿಂದ ಅತಿ ಪ್ರವಾಸಿಗರು ಹಂಪಿಗೆ ಭೇಟಿ ನೀಡಿದ್ದಾರೆ. 69124 ದೇಶಿ ಪ್ರವಾಸಿಗರು ಭೇಟಿ ನೀಡಿದರೆ, 1636 ವಿದೇಶಿ ಪ್ರವಾಸಿಗರು ಭೇಟಿ ನೀಡಿದ್ದಾರೆ.
ಇದರಿಂದ ಹಂಪಿ ಪ್ರವಾಸೋದ್ಯಮದ ಅಭಿವೃದ್ಧಿಯಲ್ಲಿ ಚೇತರಿಕೆ ಕಂಡಿದೆ. ಪ್ರವಾಸಿಗರ ಸಂಖ್ಯೆಗೆ ಅನುಗುಣವಾಗಿ ಹಂಪಿಯಲ್ಲಿ
ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಇಲಾಖೆಗಳು ಸಂಪೂರ್ಣ ವಿಫಲವಾಗಿವೆ ಎಂಬ ದೂರುಗಳು ಕೇಳಿ ಬಂದಿವೆ.
ಕ್ರಿಸಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ಹಂಪಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಇದಕ್ಕಾಗಿ ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಸಂಬಂಧಪಟ್ಟ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಪ್ರವಾಸಿಗರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.