Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
ಕಾರವಾರ ಕ್ಷೇತ್ರದ ಉಪ ಚುನಾವಣೆಗೂ ಅಧಿಸೂಚನೆ ಹೊರಡಿಸುವಂತಿಲ್ಲ
Team Udayavani, Dec 25, 2024, 7:20 AM IST
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ವಿಧಿಸಿರುವ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ಸಂಬಂಧ ವಿಚಾರಣ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಸತೀಶ್ ಸೈಲ್ ಸಲ್ಲಿಸಿದ್ದ ಮಧ್ಯಾಂತರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೆ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಯ ಅಂತಿಮ ಇತ್ಯರ್ಥದ ತನಕ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 151ರ ಅನ್ವಯ ಕಾರವಾರ ಕ್ಷೇತ್ರದ ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸುವಂತಿಲ್ಲ. ಅದೇ ರೀತಿ ಸತೀಶ್ ಸೈಲ್ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಭಾಗವಹಿಸುವಂತಿಲ್ಲ, ಸದನದಲ್ಲಿ ಮತ ಚಲಾಯಿಸುವಂತಿಲ್ಲ ಮತ್ತು ಶಾಸಕನಿಗೆ ಸಿಗುವ ಯಾವುದೇ ವೇತನ-ಭತ್ಯೆಗಳು ಪಡೆಯಲು ಅರ್ಹರಾಗಿಲ್ಲ. ಮೇಲ್ಮನವಿ ಬಾಕಿ ಇರುವಾಗ ಮೇಲ್ಮನವಿದಾರರನ್ನು (ಸತೀಶ್ ಸೈಲ್) ಭವಿಷ್ಯದಲ್ಲಿ ನಡೆಯುವ ಚುನಾವಣೆಯಲ್ಲಿ ಭಾಗವಹಿಸದಂತೆ ಅನರ್ಹಗೊಳಿಸಬಾರದು ಎಂದೂ ಆದೇಶದಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.