Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Team Udayavani, Dec 25, 2024, 6:20 AM IST

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

ಮಂಗಳೂರು: ಎರಡು ಸೈಬರ್‌ ವಂಚನೆಗಳಿಗೆ ಸಂಬಂಧಿಸಿದಂತೆ ಮಂಗಳೂರು ಸೆನ್‌ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ನೆಪದಲ್ಲಿ ವಂಚಿಸಿರುವ ಆರೋಪದಲ್ಲಿ ಕೇರಳದ ಜಾಫ‌ರ್‌ ಕೆ. (49) ಮತ್ತು ಟ್ರಾಯ್‌ ಪ್ರತಿನಿಧಿ ಎಂದು ನಂಬಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಆಕಾಶ್‌ ಎ.(22)ನನ್ನು ಬಂಧಿಸಲಾಗಿದೆ.

10.84 ಲ.ರೂ. ವಂಚನೆ
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಗಳಿಸಬಹುದೆಂದು ವ್ಯಕ್ತಿಯೋರ್ವನನ್ನು ನಂಬಿಸಿ ಅವರಿಂದ ಹಂತ ಹಂತವಾಗಿ 10,84,017 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಹಣ ಕೇರಳ ಪಾಲಕ್ಕಾಡ್‌ನ‌ ಜಾಫ‌ರ್‌ ಕೆ. ಈತನ ಬ್ಯಾಂಕ್‌ ಖಾತೆಗೆ ವರ್ಗಾವಣೆಯಾಗಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.

ಕರೆ ಮಾಡಿ 1.71 ಕೋ.ರೂ. ವಂಚನೆ ಮಾಡಿದ್ದ ಪ್ರಕರಣ ಇನ್ನೊಂದು ಪ್ರಕರಣದಲ್ಲಿ ವ್ಯಕ್ತಿ ಯೋರ್ವರಿಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ ಆತನನ್ನು ಟ್ರಾಯ್‌ ಪ್ರತಿನಿಧಿ ಎಂಬುದಾಗಿ ಪರಿಚಯಿಸಿಕೊಂಡಿದ್ದ. “ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ಸಂಖ್ಯೆ ನೋಂದಣಿ ಆಗಿದ್ದು ಮುಂಬಯಿಯ ಅಂಧೇರಿಯಲ್ಲಿ ಅದನ್ನು ಹಲವಾರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಬಳಸಲಾಗಿದೆ. ಹಾಗಾಗಿ ಕೂಡಲೇ ಪೊಲೀಸ್‌ ಠಾಣೆ ಸಂಪರ್ಕಿಸಬೇಕು’ ಎಂಬುದಾಗಿ ದೂರುದಾರರಿಗೆ ತಿಳಿಸಿದ್ದ. “ಡಿಜಿಟಲ್‌ ಅರೆಸ್ಟ್‌’ ಮಾಡುವುದಾಗಿ ಬಿಂಬಿಸಿ, ಹೆದರಿಸಿ ಹಂತ ಹಂತವಾಗಿ 1.71 ಕೋ.ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದ. ಪೊಲೀಸರು ಕೇರಳಕ್ಕೆ ತೆರಳಿ ಆರೋಪಿ ಆಕಾಶ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈತ ಸೈಬರ್‌ ಅಪರಾಧಕ್ಕೆ ತನ್ನ ಬ್ಯಾಂಕ್‌ ಖಾತೆಯನ್ನು ಉಪಯೋಗಿಸಿಕೊಂಡಿರುವುದು ತನಿಖೆಯಿಂದ ಗೊತ್ತಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ವಾಲ್‌, ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್‌ ಮತ್ತು ರವಿಶಂಕರ್‌ ಮಾರ್ಗದರ್ಶನದಲ್ಲಿ ಸೆನ್‌ ಠಾಣೆಯ ಎಸಿಪಿ ರವೀಶ್‌ ನಾಯಕ್‌ ಮತ್ತು ಸೆನ್‌ ಠಾಣಾ ನಿರೀಕ್ಷಕ ಸತೀಶ್‌ ಎಂ.ಪಿ. ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

Mangaluru ಮಾದಕವಸ್ತು ಸೇವನೆ: ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.