Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
ಈ ಕುತಂತ್ರಗಳಿಗೆ ಚುನಾವಣ ಕಣದಲ್ಲಿ ಸರಕಾರಿ ನೌಕರರರಿಂದ ತಕ್ಕ ಉತ್ತರ
Team Udayavani, Dec 25, 2024, 1:43 AM IST
ಬೆಂಗಳೂರು: “ನವ ಮನ್ವಂತರದ ಮುಂದಣ ಹೆಜ್ಜೆ’ ಶೀರ್ಷಿಕೆಯಡಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಸ್ಥಾನಕ್ಕೆ ಮತ್ತೆ ಸ್ಪರ್ಧಿಸಿದ್ದು ಈ ಬಾರಿ ಕೂಡ ನೌಕರರು ನನ್ನ ಕೈ ಹಿಡಿಯಲಿದ್ದಾರೆ. ನನ್ನನ್ನು ಸೋಲಿಸಲು ರಾಜಕೀಯ ಷಡ್ಯಂತ್ರ ನಡೆದಿದ್ದು, ಸರಕಾರಿ ನೌಕರರು ಈ ಕುತಂತ್ರಗಳಿಗೆ ಚುನಾವಣ ಕಣದಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಸರಕಾರಿ ನೌಕರರ ಸಂಘದ ಹಾಲಿ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಳೇ ಮೈಸೂರು ಭಾಗದಲ್ಲಿ ಜನಪ್ರತಿನಿಧಿಯೊಬ್ಬರು ನನ್ನ ವಿರುದ್ಧ ಪ್ರಚಾರ ನಡೆಸಿದ್ದಾರೆ. ಸಂಘದ ಚುನಾವಣ ಇತಿಹಾಸದಲ್ಲಿ ಎಂದೂ ಈ ರೀತಿ ನಡೆದಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸರಕಾರಿ ನೌಕರರಿಗೆ ನೀಡಿದ್ದ ಶೇ.95ರಷ್ಟು ಬೇಡಿಕೆಗಳನ್ನು ಈಡೇರಿಸಿದ್ದೇನೆ. ಸರರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಗಾಗಿ ರಾಜ್ಯ 7ನೇ ವೇತನ ಆಯೋಗವನ್ನು ಅವಧಿಯೊಳಗೆ ರಚಿಸಲು ಯಶಸ್ವಿಯಾಗಿದ್ದೇನೆ. ಅನಿರ್ದಿಷ್ಟಾ ವಧಿ ಮುಷ್ಕರಕ್ಕೆ ಕರೆ ನೀಡುವ ಮೂಲಕ ಶೇ.17ರಷ್ಟು ಮಧ್ಯಂತರ ಪರಿಹಾರದ ಭತ್ಯೆ ಪಡೆಯುವಲ್ಲಿ ಸಫಲನಾಗಿದ್ದೇನೆ ಎಂದು ತಿಳಿಸಿದರು.
ಎನ್‌ಪಿಎಸ್ ರದ್ಧತಿಗೆ ಹೋರಾಟ:
ಮತ್ತೆ ಅಧಿಕಾರಕ್ಕೆ ಬಂದರೆ ಹಳೆಪಿಂಚಣಿ ಯೋಜನೆ ಜಾರಿಗೆ ಹೋರಾಟ ನಡೆಸುತ್ತೇನೆ. ಹೈದರಾಬಾದ್-ಕರ್ನಾಟಕದ ಭಾಗದವರಿಗೆ ಮುಂಭಡ್ತಿ ಅವಕಾಶ ಕಲ್ಪಿಸಲಾಗುವುದು. ಎ,ಬಿ,ಸಿ,ಡಿ ವೃಂದಗಳ ಸರಕಾರಿ ಅಧಿಕಾರಿ-ನೌಕರರಿಗೆ ಕೌನ್ಸಿಲಿಂಗ್ ವರ್ಗಾವಣೆ ಕಾಯ್ದೆ ಜಾರಿಗೆ ಹೋರಾಟ ನಡೆಸಲಾಗುವುದು. ವೇತನ ಆಯೋಗದ ಒಂದನೇ ವರದಿಯ ಶಿಫಾರಸಿನಂತೆ ಅನಷ್ಠಾನಗೊಳ್ಳಬೇಕಾಗಿರುವ ಎಲ್ಲಾ ಇತರ ಭತ್ಯೆ ಮತ್ತು ಸೌಲಭ್ಯ ಜಾರಿಗೆ ಸೇರಿ ಹಲವು ಭರವಸೆಗಳನ್ನು ನೀಡಲಾಗಿದೆ. ಅವುಗಳ ಅನುಷ್ಠಾನಕ್ಕೆ ಹೋರಾಟ ನಡೆವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.