Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಠಾಣೆಯಲ್ಲಿ ಬಿಜೆಪಿಯವರು ಬಂದು ಸಭೆ ಮಾಡಬಹುದಾ?: ಸಿದ್ದರಾಮಯ್ಯ ಪ್ರಶ್ನೆ
Team Udayavani, Dec 25, 2024, 11:37 PM IST
ಬೆಳಗಾವಿ: ಪೊಲೀಸ್ ಠಾಣೆಯಲ್ಲಿ ಬಿಜೆಪಿ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಸಂಬಂಧಪಟ್ಟ ಖಾನಾಪುರ ಠಾಣೆಯ ಅಧಿಕಾರಿಯ ಅಮಾನತುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರು ಸಿಪಿಐ ಮಂಜುನಾಥ್ ನಾಯಕ್ ಅಮಾನತು ಕುರಿತು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು. ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೆದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮಿಷನರ್ ಕೂಡ ಸ್ಪಷ್ಟಪಡಿಸಿದ್ದಾರೆ.
ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಇನ್ಸ್ಪೆಕ್ಟರ್ ಸಭೆ ಮಾಡಲು ಅವಕಾಶ ಕೊಟ್ಟರು. ಠಾಣೆಯಲ್ಲಿ ಬಿಜೆಪಿಯವರು ಬಂದು ಸಭೆ ಮಾಡಬಹುದಾ? ಹಾಗಾಗಿ ಸಿಪಿಐ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಮೊಟ್ಟೆ ದಾಳಿ ತನಿಖೆ:
ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವುದು ಯಾರು ಅಂತ ಗೊತ್ತಿಲ್ಲ. ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಪಾರ್ಟಿಗೆ ಸೇರಿದವರಾ ಅಥವಾ ಬೇರೆಯವರು ಎನ್ನುವುದು ಗೊತ್ತಿಲ್ಲ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಿಎಂ ಹೇಳಿದರು.
ಸಿ.ಟಿ.ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೆದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್… pic.twitter.com/qytZGN3knE
— Siddaramaiah (@siddaramaiah) December 25, 2024
ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ:
ಕಾಂಗ್ರೆಸ್ ಅಧಿವೇಶನ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಗಾಂಧೀಜಿಯವರ ವಿಚಾರಧಾರೆ ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ್ದು, ಆ ಪ್ರಯುಕ್ತ ಶತಮಾನೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳ ಮಾಡಿಕೊಂಡಿದೆ. ಡಿ. 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಸುವರ್ಣಸೌಧದ ಪಕ್ಕದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣದ ಕಾರ್ಯಕ್ರಮವಿದ್ದು, 27ರಂದು ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
Padubidri: ಕಾರು ಢಿಕ್ಕಿ; ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.