Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Team Udayavani, Dec 26, 2024, 1:31 AM IST

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಮಂಗಳೂರು/ಉಡುಪಿ: ಜಗತ್‌ ರಕ್ಷಕ ಯೇಸು ಕ್ರಿಸ್ತರ ಜನನದ ಹಬ್ಬವಾದ ಕ್ರಿಸ್ಮಸ್‌ ಅನ್ನು ಬುಧವಾರ ಕರಾವಳಿಯಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷರು ತಮ್ಮ ಪ್ರವಚನದಲ್ಲಿ ಕ್ರಿಸ್ತರ ಜನನದ ಬಗ್ಗೆ ವಿವರಿಸಿ, ಕ್ರಿಸ್ತರ ಜನನ ಜಗತ್ತಿಗೆ ಹೊಸ ಹುರುಪು ತಂದಿದೆ. ನೊಂದ ಜೀವಗಳಿಗೆ ಭರವಸೆ ತುಂಬಿದೆ. ದೇವರು ಜಗತ್ತಿನಲ್ಲಿ ಶ್ರೀಸಾಮಾನ್ಯ ಮನುಷ್ಯರಂತೆ ಜೀವಿಸಿದರು. ನಮಗಾಗಿ ತಮ್ಮ ಅಮೂಲ್ಯವಾದ ಜೀವವನ್ನು ತ್ಯಾಗ ಮಾಡಿ, ನಮಗಾಗಿ ಸದಾ ಕಾಲ ಪ್ರಾರ್ಥಿಸಿದರು. ಇಂದು ನಾವು ದೇವರೊಂದಿಗೆ ಬದುಕಲು ಕಲಿಯಬೇಕು ಎಂದರು.

ಈ ಸಂದರ್ಭ ನಾನಾ ಧರ್ಮಗುರುಗಳು ಭಾಗವಹಿಸಿದ್ದರು.

ವಿವಿಧ ಚರ್ಚ್‌ಗಳಲ್ಲಿ ಕ್ರಿಸ್ಮಸ್‌ ಪ್ರಯುಕ್ತ ಬಲಿ ಪೂಜೆ ನೆರವೇರಿತು. ಕ್ರೆçಸ್ತ ಬಾಂಧವರು ಪರಸ್ಪರ ಸಿಹಿ ಹಂಚಿ, ಶುಭಾಶಯ ವಿನಿಮಯ ಮಾಡಿಕೊಂಡು ಹಬ್ಬವನ್ನು ಸಂಭ್ರಮಿಸಿದರು. ವಿದೇಶಗಳಲ್ಲಿರುವ ಕುಟುಂಬದ ಸದಸ್ಯರು ಹಬ್ಬಕ್ಕೂ ಮುಂಚಿತವಾಗಿಯೇ ಊರಿಗೆ ಆಗಮಿಸಿದ್ದು ಮನೆ ಮಂದಿಯೊಂದಿಗೆ ಸೇರಿ ಹಬ್ಬ ಆಚರಿಸಿದರು.

ಮನೆಗಳ ಮುಂಭಾಗದಲ್ಲಿ ನಕ್ಷತ್ರಗಳನ್ನು ತೂಗು ಹಾಕಲಾಗಿದ್ದು, ಬಣ್ಣ ಬಣ್ಣದ ವಿದ್ಯುತ್‌ ದೀಪಗಳು ಝಗಮಗಿಸುತ್ತಿದ್ದವು. ಚರ್ಚ್‌ಗಳಲ್ಲಿ ಮತ್ತು ಕ್ರೆçಸ್ತರ ಮನೆಗಳಲ್ಲಿ ಆಕರ್ಷಕ ಗೋದಲಿಗಳು ನಿರ್ಮಾಣಗೊಂಡಿದ್ದವು. ಪೂಜೆಯ ವೇಳೆ ಸಿಂಗರಿಸಿಟ್ಟ ಗೋದಲಿಯಲ್ಲಿ ಬಾಲಯೇಸು ಮೂರ್ತಿಯನ್ನು ಇಟ್ಟು ದೇವರ ಸ್ತುತಿ, ಜೋಗುಳದ ಮೂಲಕ ಆರಾ ಧಿಸಲಾಯಿತು. ಕ್ರಿಸ್ಮಸ್‌ ಸಂದರ್ಭದ ವಿಶೇಷ ಗೀತೆಗಳ ಕ್ಯಾರಲ್ಸ್‌ ಗಾಯನ ನಡೆಯಿತು.

ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಕ್ರಿಸ್ಮಸ್‌ ಈವ್‌ನ ಬಲಿಪೂಜೆಯನ್ನು ನಗರದ ರೊಸಾರಿಯೋ ಕೆಥೆಡ್ರಲ್‌ನಲ್ಲಿ ಮಂಗಳವಾರ ರಾತ್ರಿ ನೆರವೇರಿಸಿದರು. ಕ್ರಿಸ್ಮಸ್‌ ಬಲಿಪೂಜೆಯನ್ನು ನಂತೂರು ಬ್ರಿಜಿಟೈನ್ಸ್‌ ಧರ್ಮಭಗಿನಿಯರ ಕಾನ್ವೆಂಟ್‌ನಲ್ಲಿ ಮುಂಜಾನೆ ನಡೆಸಿದರು.

ಉಡುಪಿ ಧರ್ಮಾ ಧ್ಯಕ್ಷ ರೆ| ಫಾ| ಡಾ| ಜೆರಾಲ್ಡ್ ಐಸಾಕ್‌ ಲೋಬೊ ಅವರು ಮಂಗಳವಾರ ರಾತ್ರಿ ಕಲ್ಯಾಣಪುರ ಮಿಲಾಗ್ರಿಸ್‌ ಕೆಥೆಡ್ರಲ್‌ ನಲ್ಲಿ ಹಬ್ಬದ ವಿಶೇಷ ಬಲಿಪೂಜೆ ಅರ್ಪಿಸಿ, ಬುಧವಾರ ಉಡುಪಿಯ ಬಿಷಪ್‌ ಹೌಸ್‌ನಲ್ಲಿ ಪ್ರಾರ್ಥನೆ ನೆರವೇರಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.