Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
ನನ್ನ ಕೊಲೆಯಾದರೆ ಡಿ.ಕೆ. ಬ್ರದರ್ಸ್ ಕಾರಣ, ಪೊಲೀಸರು ಇಲ್ಲದಿದ್ದರೆ, ನನ್ನ ಕೊಲೆ ನಡೆಯುತ್ತಿತ್ತು: ಬಿಜೆಪಿ ಶಾಸಕ
Team Udayavani, Dec 26, 2024, 7:35 AM IST
ಬೆಂಗಳೂರು: ನನ್ನ ಕೊಲೆಯಾದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಂಸದ ಡಿ.ಕೆ. ಸುರೇಶ್, ಆರ್.ಆರ್.ನಗರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ, ಅವರ ತಂದೆ ಹನುಮಂತರಾಯಪ್ಪ ಕಾರಣ ಎಂದು ಆರ್.ಆರ್. ನಗರ ಶಾಸಕ ಮುನಿರತ್ನ ಆರೋಪಿಸಿದ್ದಾರೆ.
ತಮ್ಮ ಮೇಲಿನ ಮೊಟ್ಟೆ ದಾಳಿ ಘಟನೆ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, ವಾಜಪೇಯಿ ಅವರ 100ನೇ ಹುಟ್ಟುಹಬ್ಬದ ಕಾರ್ಯಕ್ರಮ ಮುಗಿಸಿಕೊಂಡು ಹೋಗುವಾಗ ಮೊಟ್ಟೆ ಎಸೆದಿದ್ದಾರೆ. ಈಗಾಗಲೇ ಕೋರ್ಟ್‌ನಲ್ಲಿ ವಕೀಲರ ವೇಷದಲ್ಲಿ ಬಂದ ಇಬ್ಬರು ನೀನು ರಾಜೀನಾಮೆ ಕೊಡಬೇಕು. ಕೊಡಲಿಲ್ಲ ಅಂದರೆ ನಿನ್ನ ಕೊಲೆ ಆಗುತ್ತದೆ. ಕೊಲೆಯಾದರೆ ಡಿ.ಕೆ. ಸುರೇಶ್, ಕುಸುಮಾ ಅವರನ್ನು ಶಾಸಕರನ್ನಾಗಿ ಮಾಡಿ ಸಚಿವೆ ಮಾಡುತ್ತಾರೆ. ಅದರ ಬದಲು ನೀನೇ ರಾಜಿನಾಮೆ ಕೊಡು ಎಂದು ಬೆದರಿಸಿದ್ದರು. ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಸಿಬಿಐಗೆ ಪತ್ರ ಬರೆದಿದ್ದೇನೆ. ನನ್ನ ಕೊಲೆಯಾಗುವುದರಲ್ಲಿ ಅನುಮಾನ ಇಲ್ಲ. ನನ್ನನ್ನು ಹೆಚ್ಚು ದಿನ ಇವರು ಇರಲು ಬಿಡುವುದಿಲ್ಲ. ಈಗಾಗಲೇ ರೇಪ್ ಕೇಸ್ ಹಾಕಿದ್ದಾರೆ. ಜತೆಗೆ ಪೋಕ್ಸೋ ಕೇಸ್ ಹಾಕಿ ಜೈಲಿಗೆ ಕಳುಹಿಸಲು ಸಿದ್ಧತೆ ನಡೆಸಿದ್ದಾರೆ. ಅವರಿಗೆ ನನ್ನ ಸಾವು ಬೇಕಾಗಿದೆ. ಕುಸುಮಾ 2 ಬಾರಿ ಸೋಲಲು, ಸುರೇಶ್ ಸೋಲಲು ಮುನಿರತ್ನ ಕಾರಣ. ಈ ಕ್ಷೇತ್ರದಲ್ಲಿ 1 ಲಕ್ಷ ಮತಗಳ ಅಂತರದಲ್ಲಿ ಸುರೇಶ್ ಸೋತಿದ್ದಾರೆ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರನ್ನು ಸಚಿವೆ ಮಾಡಿದಂತೆ, ಇಲ್ಲಿ ಕುಸುಮಾರನ್ನು ಸಚಿವೆ ಮಾಡಲು ಇಷ್ಟೆಲ್ಲಾ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಸಿಸಿಬಿ ಎಸಿಪಿ ಧರ್ಮೇಂದ್ರ ವಿರುದ್ಧ ಆರೋಪ
ಇನ್ನು ಡಿಸಿಎಂ ಡಿ.ಕೆ. ಶಿವಕುಮಾರ್, ಸಿಸಿಬಿಯಲ್ಲಿರುವ ಡಿವೈಎಸ್ಪಿ (ಎಸಿಪಿ) ಧರ್ಮೇಂದ್ರ ಅವರ ಮೂಲಕ, ನನ್ನ ವಿರುದ್ಧ ಯಾವ ರೀತಿ ಕೇಸ್ ಹಾಕಬೇಕೆಂದು ನಿರ್ಧರಿಸುತ್ತಾರೆ. ನನ್ನ ವಿರುದ್ಧ ಷಡ್ಯಂತ್ರದಲ್ಲಿ ಅವರ ಪಾತ್ರವೂ ಇದೆ ಎಂದು ಆರೋಪಿಸಿದರು.
ಪೊಲೀಸರೇ ಪ್ರಾಣ ಕಾಪಾಡಿದರು
ಗುಪ್ತಚರ ವರದಿ ಪ್ರಕಾರ ನಿಮ್ಮ ಮೇಲೆ ಕೊಲೆ ಯತ್ನ ನಡೆಯಲಿದೆ. ಕಾರಿನಲ್ಲಿ ಕುಳಿತುಕೊಳ್ಳಿ ಎಂದು ಪೊಲೀಸರು ಹೇಳಿದ್ದರು. ಕೆಲವೇ ಕ್ಷಣದಲ್ಲಿ ನನ್ನ ಮೇಲೆ ಮೊಟ್ಟೆ ಎಸೆಯಲಾಗಿದೆ. ಪೊಲೀಸರು ನನ್ನನ್ನು ಕಾಪಾಡಿದರು ಎಂದು ಮುನಿರತ್ನ ಹೇಳಿದರು. ಘಟನೆ ವೇಳೆ 100ಕ್ಕೂ ಹೆಚ್ಚು ಮಂದಿ ಪೊಲೀಸರು ಇದ್ದರು. 2-3 ಪೊಲೀಸ್ ವ್ಯಾನ್‌ಗಳನ್ನು ತರಿಸಿಕೊಂಡಿದ್ದಾರೆ. 100 ಜನ ಪೊಲೀಸರು ಬರಬೇಕೆಂದರೆ, ನನ್ನ ಕೊಲೆ ಬಗ್ಗೆ ಪೊಲೀಸರಿಗೆ ಮಾಹಿತಿ ಇತ್ತು ಎಂಬುದು ಗೊತ್ತಾಗುತ್ತಿದೆ. ಪೊಲೀಸರು ಇಲ್ಲದಿದ್ದರೆ, ನನ್ನ ಕೊಲೆ ನಡೆಯುತ್ತಿತ್ತು. ಸುಮಾರು 150 ಮಂದಿ ಒಟ್ಟಿಗೆ ಬಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ದೂರು ನೀಡಿದರೆ ಕಾನೂನು ಕ್ರಮ: ಡಿಸಿಪಿ
ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಉತ್ತರ ವಿಭಾಗದ ಡಿಸಿಪಿ ಸೈದುಲ್ಲಾ ಅಡಾವತ್, ಶಾಸಕ ಮುನಿರತ್ನ ಅವರು ಕಾರ್ಯಕ್ರಮ ಮುಗಿಸಿ ವಾಪಸ್ ಹೋಗುವಾಗ ಘಟನೆ ನಡೆದಿದೆ. ಸುಮಾರು 15 ಮೀಟರ್ ದೂರದಿಂದ ಮೊಟ್ಟೆ ಎಸೆತವಾಗಿದೆ. ಶಾಸಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕಡೆಯಿಂದ ದೂರು ಬಂದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಕೃತ್ಯದಲ್ಲಿ ಭಾಗಿಯಾದ ಮೂವರನ್ನು ಮುಂಜಾಗ್ರತ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿದ್ದ ಪೊಲೀಸರು ಕೂಡ ಶಾಸಕರಿಗೆ ಮೊದಲೇ ಕಾರ್‌ನಲ್ಲಿ ಹೋಗುವಂತೆ ಸೂಚಿಸಿದ್ದರು. ಮುಖ್ಯರಸ್ತೆ ಹತ್ತಿರವಿದ್ದ ಕಾರಣ ನಡೆದುಕೊಂಡು ಹೋದರು ಎಂದರು.
ಮೊಟ್ಟೆ ಎಸೆತ: ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ?
ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ನಿವಾಸಿಗಳು ಎನ್ನಲಾದ ಕೃಷ್ಣಮೂರ್ತಿ, ಚಂದ್ರು ಹಾಗೂ ವಿಶ್ವನಾಥ್ ಅವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಮೂವರು ಕಾಂಗ್ರೆಸ್ ಮುಖಂಡರ ಆಪ್ತರಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎಂಬುದು ಗೊತ್ತಾಗಿದೆ. ಆದರೆ, ಶಾಸಕರ ಮೇಲೆ ಮೊಟ್ಟೆ ಎಸೆಯಲು ಕಾರಣಗಳೇನು? ಎಂಬುದು ಗೊತ್ತಾಗಿಲ್ಲ. ಹೀಗಾಗಿ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮುನಿರತ್ನರಿಂದ ದೂರು ದಾಖಲು
ಪ್ರಕರಣ ಸಂಬಂಧ ಆಸ್ಪತ್ರೆಯಲ್ಲಿರುವ ಶಾಸಕ ಮುನಿರತ್ನ ಅವರಿಂದ ಹೇಳಿಕೆ ಪಡೆದು ದೂರು ಸ್ವೀಕರಿಸಲಾಗಿದೆ. ಎಫ್ಐಆರ್ ಕೂಡ ದಾಖಲಿಸಿಕೊಳ್ಳಲಾಗುತ್ತದೆ. ಸದ್ಯ ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ವ್ಯಕ್ತಿಗಳ ಹಿನ್ನೆಲೆ ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.