Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Team Udayavani, Dec 26, 2024, 10:04 AM IST
ಮಂಗಳೂರು: ಜಮ್ಮುಕಾಶ್ಮೀರ ಪೂಂಛ್‌ನಲ್ಲಿ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31) ಅವರ ಪಾರ್ಥೀವ ಶರೀರವನ್ನು ಬುಧವಾರ ತಡರಾತ್ರಿ ಬಜಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು.
ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ವಿಮಾನ ನಿಲ್ದಾಣಕ್ಕೆ ಭೇಟಿ, ಸೇನಾ ವಿಮಾನದಿಂದ ಪಾರ್ಥೀವ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ಯೋಧರೂ ಆಗಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಅವರೂ ಸೇನಾ ಸಿಬಂದಿಗಳಿಗೆ ಜತೆಯಾದರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರೂ ಜತೆಗಿದ್ದರು. ಬಳಿಕ ಅಂತಿಮ ನಮನ ಸಲ್ಲಿಸಿದರು.
ತೆರೆದ ವಾಹನದಲ್ಲಿ ಮೆರವಣಿಗೆ:
ಇಂದು (ಡಿ.26)ರ ಬೆಳಗ್ಗೆ 9ಕ್ಕೆ ತೆಕ್ಕಟ್ಟೆಯಿಂದ ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಹುಟ್ಟೂರಾದ ಬೀಜಾಡಿಗೆ ತಂದು ಮನೆಯಲ್ಲಿ ಸಕಲ ವಿಧಿ ಗಳನ್ನು ನೆರವೇರಿಸಿ, ಅಂತಿಮ ಸಂಸ್ಕಾರಕ್ಕೆ ಮೊದಲು ಬೀಜಾಡಿ ಪಡು ಶಾಲೆಯ ಆವರಣದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಅನಂತರ ಬೀಜಾಡಿ ಕಡಲ ಕಿನಾರೆಯ ಸರಕಾರಿ ಜಾಗದಲ್ಲಿ ಸರಕಾರದ ಗೌರವದೊಡನೆ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ.
ಮೌನವಾದ ಬೀಜಾಡಿ ಪರಿಸರ
ಅನೂಪ್ ಪೂಜಾರಿ ಮೃತಪಟ್ಟ ಸುದ್ದಿ ಹರಡುತ್ತಿದ್ದಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಹಿತ ನೂರಾರು ಜನರು ಮೃತರ ಮನೆಗೆ ತೆರಳಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಪತ್ನಿ, ಪುಟ್ಟ ಮಗಳನ್ನು ಅಗಲಿದ ಯೋಧ:
ಪೆರ್ಡೂರು ಮುಳ್ಳುಗುಡ್ಡೆಯ ಮಂಜುಶ್ರೀಯನ್ನು ಮದುವೆಯಾಗಿದ್ದ ಅನೂಪ್ ಅವರಿಗೆ ಒಂದೂವರೆ ವರ್ಷದ ಇಶಾನಿ ಹೆಸರಿನ ಹೆಣ್ಣು ಮಗುವಿದೆ.
ದೇಶಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದ ಎಂಬ ಸಿದ್ದಾಂತವನ್ನು ಹೊಂದಿದ್ದ ಅನೂಪ್ ಅವರು ಡಿಸೆಂಬರ್‌ನಲ್ಲಿ ರಜೆ ಪಡೆದು ಊರಿಗೆ ಬಂದು ಕೋಟೇಶ್ವರದ ಕೊಡಿಹಬ್ಬದಲ್ಲಿ ಪಾಲ್ಗೊಂಡು ಮಿತ್ರರೊಡನೆ ಸಮಯ ಕಳೆದಿದ್ದರು. ಸ್ನೇಹಮಯಿಯಾಗಿದ್ದ ಅವರು ಬೀಜಾಡಿ, ಕೋಟೇಶ್ವರ ಪರಿಸರದ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು. ಕೊಡಿಹಬ್ಬಕ್ಕೆ ಬಂದವರು ಅದೇ ಸಂದರ್ಭದಲ್ಲಿ ಮಗಳ ಹುಟ್ಟುಹಬ್ಬವನ್ನು ಕೂಡ ಆಚರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.