Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಹುತಾತ್ಮ ಯೋಧರಿಗೆ ಸಿಎಂ ಅಂತಿಮ ಗೌರವ
Team Udayavani, Dec 26, 2024, 11:46 AM IST
ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ (ಡಿ.26) ಅಂತಿಮ ಗೌರವ ಸಲ್ಲಿಸಿದರು.
ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ, ಮಹೇಶ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.
ಸರ್ಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.
ನಾಲ್ಕು ಮಂದಿ ನಮ್ಮ ಯೋಧರು ಅಪಘಾತದಲ್ಲಿ ಮರಣ ಹೊಂದಿರುತ್ತಾರೆ. ದಯಾನಂದ ತಿರುಕಣ್ಣನವರ್ ಬೆಳಗಾವಿ, ಧರ್ಮರಾಜ ಸುಭಾಷ ಚಿಕ್ಕೋಡಿ, ಮಹೇಶ್ ನಾಗಪ್ಪ ಬಾಗಲಕೋಟೆ ಹಾಗೂ ಅನೂಪ್ ಪೂಜಾರಿ ಕುಂದಾಪುರ ಇವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ಸರ್ಕಾರದಿಂದ ಕುಟುಂಬ ವರ್ಗಕ್ಕೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಎಚ್.ಸಿ.ಮಹದೇವಪ್ಪ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಎಸ್ ಪಿ ಡಾ. ಭೀಮಾಶಂಕರ ಗುಳೇದ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.