Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
50 ರಿಂದ 60 ಲಕ್ಷ ರೂ. ಕೊಟ್ಟರೆ ವೀಸಾ: ಇ.ಡಿ.
Team Udayavani, Dec 27, 2024, 8:00 AM IST
ಹೊಸದಿಲ್ಲಿ: ಕೆನಡಾದಲ್ಲಿರುವ ಕನಿಷ್ಠ 260 ಕಾಲೇಜು ಅಂತಾರಾಷ್ಟ್ರೀಯ ಮಟ್ಟದ ಮಾನವ ಕಳ್ಳಸಾಗಣೆ ಜಾಲದಲ್ಲಿ ಭಾಗಿಯಾಗಿವೆ ಎಂಬ ಆಘಾತಕಾರಿ ಸಂಗತಿ ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆಯಿಂದ ಬಯಲಾಗಿದೆ.
ಭಾರತದಿಂದ ತೆರಳುವ ಅಕ್ರಮ ವಲಸಿಗರನ್ನು ಅಮೆರಿಕಕ್ಕೆ ಕಳುಹಿಸಲು ಈ ಕಾಲೇಜುಗಳು ಭಾಗಿಯಾಗಿವೆ ಎಂದು ತನಿಖಾ ಸಂಸ್ಥೆ ಹೇಳಿಕೊಂಡಿದೆ.
3 ವರ್ಷಗಳ ಹಿಂದೆ ಅಕ್ರಮವಾಗಿ ಕೆನಡಾ ಮೂಲಕ ಅಮೆರಿಕಕ್ಕೆ ತೆರಳಲು ಯತ್ನಿಸಿದ್ದ ಗುಜರಾತಿ ಕುಟುಂಬದ ಮೂವರು ಚಳಿಯಿಂದಾಗಿ ಗಡಿಯಲ್ಲೇ ಮೃತಪಟ್ಟಿದ್ದರು. ಆ ಬಗ್ಗೆ ತನಿಖೆ ನಡೆಸುವ ವೇಳೆ ಈ ಅಕ್ರಮ ಜಾಲದ ಬಗ್ಗೆ ಇ.ಡಿ.ಗೆ ಮಾಹಿತಿ ಲಭಿಸಿತ್ತು. ಭಾರತದಿಂದ ಕೆನಡಾಗೆ ತೆರಳಲು ಕೇವಲ 50-60 ಲಕ್ಷ ರೂ.ಗಳಲ್ಲಿ ವಿದ್ಯಾರ್ಥಿ ವೀಸಾ ದೊರೆಯುತ್ತಿದೆ.
ಏಜೆಂಟುಗಳ ಮೂಲಕ ಈ ವೀಸಾ ಪಡೆಯಲು ಕೆನಡಾದ 260 ಕಾಲೇಜುಗಳು ಸಹಾಯ ಮಾಡಿವೆ. ಅಕ್ರಮ ವಲಸಿಗರಿಗೆ ತಮ್ಮ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ವೀಸಾ ನೀಡಿವೆ. ಅಲ್ಲಿಂದ ಕಾಲೇಜಿಗೆ ತೆರಳುವ ಬದಲು ಅಮೆರಿಕಕ್ಕೆ ಅಕ್ರಮವಾಗಿ ತೆರಳುತ್ತಾರೆ ತನಿಖಾ ಸಂಸ್ಥೆ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.