ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Team Udayavani, Dec 27, 2024, 11:23 AM IST
ಕಟಪಾಡಿ: ಉದ್ಯಾವರ ಕುತ್ಪಾಡಿಯಲ್ಲಿ ನಡೆದ ಕೋಳಿ ಅಂಕಕ್ಕೆ ಪೊಲೀಸ್ ದಾಳಿಯನ್ನು ಖಂಡಿಸಿ, ಮುಖಂಡರು ವ್ಯಾಘ್ರ ಚಾಮುಂಡಿಗೆ ಮೊರೆ ಹೋದ ಘಟನೆಯು ಬುಧವಾರ ನಡೆದಿದೆ.ಉದ್ಯಾವರ ಕುತ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಹಾಗೂ ವ್ಯಾಘ್ರ ಚಾಮುಂಡಿ ಗರೋಡಿಯಲ್ಲಿ ಡಿ. 10ರಂದು ನೇಮೋತ್ಸವ ನಡೆದಿತ್ತು.
ಇದರ ಅಂಗವಾಗಿ ಬಳಿಕ ದೈವಕ್ಕೆ ರಕ್ತಾಹಾರ ನೀಡುವ ಸಲುವಾಗಿ ಸಾಂಪ್ರದಾಯಿಕವಾಗಿ ನಡೆದುಬಂದ ಕೋಳಿ ಅಂಕ ಡಿ. 22ರ ಮಧ್ಯಾಹ್ನ ಆರಂಭಗೊಂಡಿತ್ತು. ಅದಾಗಿ ಕೆಲವೇ ಕ್ಷಣಗಳಲ್ಲಿ ಪೊಲೀಸರು ದಾಳಿ ನಡೆಸಿ ಕೋಳಿ ಅಂಕವನ್ನು ಸ್ಥಗಿತಗೊಳಿಸಿದ್ದರು.
ಈ ನಡುವೆ, ಡಿ.25ರಂದು ಊರಿನ ಗುರಿಕಾರರು ಹಾಗೂ ಚಾಕರಿ ವರ್ಗ ಹಾಗೂ ಗ್ರಾಮಸ್ಥರು ಸೇರಿ ಪೊಲೀಸರ ಈ ದಾಳಿಯ ಬಗ್ಗೆ ವ್ಯಾಘ್ರ ಚಾಮುಂಡಿ ಮುಂದೆ ಹೇಳಿಕೊಂಡಿದ್ದಾರೆ. ರಕ್ತಾಹಾರ ಕೊಡುವ ಸಂಪ್ರದಾಯದಂತೆ ಕಾರ್ಯಕ್ರಮ ನಡೆದಿದೆ.
ಇದನ್ನು ಪೊಲೀಸರು ತಡೆದಿದ್ದಾರೆ. ಇದರಿಂದ ಇನ್ನು ಮುಂದಕ್ಕೆ ಸನ್ನಿಧಾನದಲ್ಲಿ ಆಗುವ ಕಾರ್ಯಭಾಗಕ್ಕೆ ಯಾವುದೇ ದೋಷ,
ಯಾರ ಮೇಲೂ ಅಪವಾದ ಬಾರದಂತೆ, ದ್ವೇಷ ಕಟ್ಟಿಕೊಳ್ಳದೆ ಎಲ್ಲರನ್ನೂ ರಕ್ಷಣೆ ಮಾಡು. ಮುಂದಕ್ಕೆ ಒಳ್ಳೆಯ ಕೆಲಸಗಳು ನಿರ್ವಿಘ್ನವಾಗಿ ನಡೆಯುವಂತೆ ಅನುಗ್ರಹಿಸು ಎಂದು ಬೇಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.