ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Team Udayavani, Dec 27, 2024, 1:25 PM IST

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಹಾವೇರಿ: ಮಹಾತ್ಮ ಗಾಂಧಿ ಕಾಂಗ್ರೆಸ್‌ಗೂ ಇಂದಿನ ಕಾಂಗ್ರೆಸ್‌ಗೂ ಬಹಳ ವ್ಯತ್ಯಾಸ ಇದೆ. ಅಸಲಿ ಕಾಂಗ್ರೆಸ್‌ಗೂ, ನಕಲಿ ಕಾಂಗ್ರೆಸ್‌ಗೂ ವ್ಯತ್ಯಾಸ ಇದೆ. ಮಹಾತ್ಮ ಗಾಂಧೀಜಿಯವರ ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್‌ನವರು ನಡೆದುಕೊಳ್ಳುತ್ತಿದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ತಾಪಂ ಆವರಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕಾನೂನು ರೀತಿ ಆಡಳಿತವೇ ಇಲ್ಲ. ಎಲ್ಲ ಇಲಾಖೆಗಳು, ನಿಗಮಗಳಲ್ಲಿ
ಭ್ರಷ್ಟಾಚಾರ ನಡೆದಿದೆ. ದೀನ ದಲಿತರ ಅನುದಾನದಲ್ಲೇ ಭ್ರಷ್ಟಾಚಾರ ಮಾಡಿದ್ದಾರೆ. ಗಾಂಧಿಯವರ ಸ್ವರಾಜ್ಯಕ್ಕೆ ತದ್ವಿರುದ್ಧವಾಗಿ
ನಡೆದುಕೊಳ್ಳುತ್ತಿದ್ದಾರೆ.

ಕಾಂಗ್ರೆಸ್‌ ಅಧಿವೇಶನಕ್ಕೆ ಸರ್ಕಾರದ ಹಣ ಬಳಸುತ್ತಿರುವುದು ಎಷ್ಟು ಸರಿ? ಇದು ಯಾವ ಕಾನೂನಿನಲ್ಲಿದೆ? ರಾಜಕೀಯ ಸಮ್ಮೇಳನಗಳಿಗೆ ಸರ್ಕಾರದ ಹಣ ಬಳಸುವುದು ಎಷ್ಟರ ಮಟ್ಟಿಗೆ ಸರಿ? ಗಾಂಧೀಜಿ ಅವರನ್ನು ಮುಂದಿಟ್ಟುಕೊಂಡು ತಮ್ಮ ಬ್ಯಾನರ್‌ ಹಾಕಿಕೊಂಡು ಅಧಿವೇಶನ ಮಾಡುತ್ತಿದ್ದಾರೆ. ಅಸಲಿ ಗಾಂಧಿ ಹೆಸರಲ್ಲಿ ನಕಲಿ ಕಾಂಗ್ರೆಸ್‌ ಅಧಿವೇಶನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಜಾಪ್ರಭುತ್ವ ವಿರೋಧಿ ಕ್ರಮ: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಮದದಿಂದ ಅಧಿಕಾರದ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಿರೋಧ ಪಕ್ಷಗಳನ್ನು ದಮನ ಮಾಡಲು ಪ್ರಜಾಪ್ರಭುತ್ವ ವಿರೋಧಿಕ್ರಮ ಅನುಸರಿಸುತ್ತಿದ್ದಾರೆ. ಇಂತಹ ಪ್ರಕರಣಗಳು ಸಾಕಷ್ಟು ನಡೆದಿವೆ. ಆದರೆ ಇನ್ನೂ ಕೆಲವು ಪ್ರಕರಣ ಬೆಳಕಿಗೆ ಬಂದಿಲ್ಲ. ಸರ್ಕಾರ ಪೊಲೀಸ್‌ ಸ್ಟೇಷನ್‌ಗಳಲ್ಲಿ ಡೀಲ್‌ ವ್ಯವಸ್ಥೆ ಮಾಡಿದೆ. ಗೃಹ ಸಚಿವರೇ ಏನೂ ನಡೆದಿಲ್ಲ, ಗೊತ್ತಿಲ್ಲ ಅಂತ ಮಾತಾಡುತ್ತಾರೆ.

ಸಿಎಂ ಉಡಾಫೆ ಉತ್ತರ ಕೊಡುತ್ತಾರೆ. ಈ ಘಟನೆಗಳು ತುರ್ತು ಪರಿಸ್ಥಿತಿ ನೆನಪಿಸುತ್ತಿದೆ. ಶಾಸಕ ಮುನಿರತ್ನ ಮೇಲೆ ಆರೋಪ ಇದೆ, ಅದನ್ನು ಕೋರ್ಟ್‌ನಲ್ಲಿ ಅವರು ಎದುರಿಸುತ್ತಾರೆ. ಅವರ ಮೇಲೆ ಮೊಟ್ಟೆ ಒಗೆಯುತ್ತಾರೆ ಅಂದರೆ ಯಾವ ಮಟ್ಟಕ್ಕೆ ಸರ್ಕಾರ ಇಳಿದಿದೆ? ಜನ ಪ್ರತಿನಿಧಿ ಗಳು ನಿರ್ಭೀತಿ, ನಿರ್ಭಯದಿಂದ ಕೆಲಸ ಮಾಡಲು ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಮುನಿರತ್ನ ನಾಟಕ ಮಾಡುತ್ತಿದ್ದಾರೆಂಬ ಕಾಂಗ್ರೆಸ್‌ ನಾಯಕರು ಮಾಡುತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರಾದರೂ ಉಂಟಾ? ನಮ್ಮ ಮೇಲೆ ನಾವೇ ಮೊಟ್ಟೆ ಹಾಕಿಸಿಕೊಂಡು ಅವಮಾನ
ಮಾಡಿಸಿಕೊಳ್ಳೋಕೆ ಆಗುತ್ತಾ? ಎಂದು ಮರು ಪ್ರಶ್ನಿಸಿದರು.

ಸಿಟಿ ರವಿ ದೂರಿಗೆ ಕ್ರಮವಿಲ್ಲ: ವಿಪ ಸದಸ್ಯ  ಸಿ.ಟಿ. ರವಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬರಲಿ ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸವಾಲು ಹಾಕಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಅವರವರಿಗೆ ಬಿಟ್ಟಿದ್ದು ದೇವರು ನಂಬಿಕೆ ಅವರವರ ವೈಯಕ್ತಿಕ ವಿಚಾರ. ಸಿ.ಟಿ. ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್‌ ಇಬ್ಬರೂ ದೂರು ಕೊಟ್ಟಿದ್ದಾರೆ. ಒಂದು ಕಡೆ ಕಂಪ್ಲೇಂಟ್‌
ಗೆ ಕೂಡಲೇ ಕ್ರಮ ಕೈಗೊಳ್ಳುತ್ತಾರೆ. ಆದರೆ, ಸಿ.ಟಿ.ರವಿ ದೂರು ಕೊಟ್ಟಿರುವುದನ್ನು ಎಫ್‌ ಐಆರ್‌ ಮಾಡೇ ಇಲ್ಲ. ಹೈಕೋರ್ಟ್‌
ಮಧ್ಯಪ್ರವೇಶ ಮಾಡದಿದ್ದರೆ ಸಿ.ಟಿ. ರವಿ ಅವರ ಪರಿಸ್ಥಿತಿ ಏನು ಆಗ್ತಿತ್ತೋ ಗೊತ್ತಿಲ್ಲ ಎಂದರು. ಈ ವೇಳೆ ಮಾಜಿ ಶಾಸಕರಾದ ಶಿವರಾಜ ಸಜ್ಜನರ, ವಿರೂಪಾಕ್ಷಪ್ಪ ಬಳ್ಳಾರಿ ಇದ್ದರು.

ರಾಜ್ಯ ಸರ್ಕಾರದಿಂದ ದರ ಏರಿಕೆ ಪರ್ವ. .
ರಾಜ್ಯ ಸರ್ಕಾರದಿಂದ ಬೆಲೆ ಏರಿಕೆ ಪರ್ವ ನಡೆದಿದೆ. ಸ್ಟಾಂಪ್‌ ಡ್ಯೂಟಿ, ಅಬಕಾರಿ ತೆರಿಗೆ ಸೇರಿದಂತೆ ಎಲ್ಲದರ ತೆರಿಗೆ ಹೆಚ್ಚಿಸಿದ್ದಾರೆ. 15 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿದ್ದಾರೆ. ಹಾಲಿನ ದರ, ನೀರಿನ ದರ ಎಲ್ಲದರಲ್ಲೂ ತೆರಿಗೆ ಹೆಚ್ಚಿಗೆ ಮಾಡಿದ್ದಾರೆ. ಜನ ಸಾಮಾನ್ಯರು ಬಳಕೆ ಮಾಡುವಂತ ಎಲ್ಲ ವಸ್ತುಗಳ ದರ ಹೆಚ್ಚಳ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಮರಳು, ಜಲ್ಲಿ ಕೂಡ ಇನ್ನಷ್ಟು ತುಟ್ಟಿ ಆಗಲಿದೆ. ಪ್ರತಿ ಆರ್ಥಿಕ ಚಟುವಟಿಕೆ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಮುಂದೆ ಇವರು ಗಾಳಿಗೂ ತೆರಿಗೆ ಹಾಕುವ ಕಾಲ ದೂರ ಇಲ್ಲ ಎಂದು ಹೇಳಿದರು.

ಕಾಮಗಾರಿ ಅರ್ಧಕ್ಕೆ ಬಿಟ್ಟ ಗುತ್ತಿಗೆದಾರ. .
ಹಾವೇರಿ ನಗರದ ಕುಡಿಯುವ ನೀರು ಪೂರೈಕೆಗಾಗಿ 2014ರಲ್ಲಿ 30 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಗುತ್ತಿಗೆದಾರ ಕಾಮಗಾರಿ ಅರ್ಧಕ್ಕೆ ಬಿಟ್ಟಿದ್ದಾರೆ. ಹಾವೇರಿಯಲ್ಲಿ ಯಾಕೆ ಹೀಗಾಗುತ್ತಿದೆ ಎಂಬ ಯಕ್ಷಪ್ರಶ್ನೆ ಕಾಡುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕೇಂದ್ರ ಸರ್ಕಾರದ ಅಮೃತ ಯೋಜನೆಗೆ ಹಾವೇರಿ ಆಯ್ಕೆಯಾಗಿದೆ. ಎಲ್ಲೆಲ್ಲಿ ಕೆಲಸ ಅರ್ಧ ಆಗಿದೆ? ಬಾಕಿ ಏನೇನು ಆಗಬೇಕಿದೆ ಎಂಬ ಕುರಿತು ಅಂದಾಜು ವೆಚ್ಚದ ಡಿಪಿಆರ್‌ ಸಿದ್ಧಪಡಿಸಿ ಕೆಲಸ ಪ್ರಾರಂಭಿಸಿ ಎಂದು ಹಿಂದಿನ ದಿಶಾ ಸಭೆಯಲ್ಲಿ ಅ ಧಿಕಾರಿಗಳಿಗೆ ಸೂಚಿಸಿದ್ದೆ. ಈ ಕುರಿತು ಮತ್ತೆ ಪರಿಶೀಲಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಟಾಪ್ ನ್ಯೂಸ್

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

PUNJAB

Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

puttige-6-

Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.