ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Team Udayavani, Dec 27, 2024, 3:16 PM IST
ಮಡಿಕೇರಿ: ಅಪರಾಧ ಪ್ರಕರಣಗಳ ಪತ್ತೆಯಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚು ಪರಿಣಾಮಕಾರಿಯಾಗಿ ಸಹಾಯ ಮಾಡಬಲ್ಲ ವಿಭಾಗಗಳಲ್ಲಿ ಶ್ವಾನದಳವೂ ಒಂದು. ಕ್ಲಿಷ್ಟಕರ ಪ್ರಕರಣಗಳನ್ನು ಸುಲಭವಾಗಿ ಬೇಧಿಸಲು ಕೊಡಗು ಜಿಲ್ಲೆಯ ದಕ್ಷ ಪೊಲೀಸ್ ಅಧಿಕಾರಿಗಳಿಗೆ ಶ್ವಾನದಳದ ಕಾಪರ್ ಹಾಗೂ ಬ್ರೂನೊ ಶ್ವಾನಗಳು ಹೆಚ್ಚು ಸಹಕಾರಿಯಾಗಿವೆ.
ಮಾದಕ ವಸ್ತುಗಳ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಕಾಪರ್ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಪೊಲೀಸ್ ಇಲಾಖೆಯಿಂದ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ. ಅಪರಾಧ ಪತ್ತೆಯಲ್ಲಿ ಬ್ರೂನೊ ಶ್ವಾನ ರಾಜ್ಯದಲ್ಲಿಯೇ ಅತ್ಯುತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿ ಕಂಚಿನ ಪದಕಕ್ಕೆ ಭಾಜನವಾಗಿದೆ.
ಕೊಡಗು ಜಿಲ್ಲಾ ಪೊಲೀಸ್ ನ ಜಿಲ್ಲಾ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಎರಡು ಶ್ವಾನಗಳಿಗೆ ಪದಕ ಮತ್ತು ಪ್ರಶಂಸನಾ ಪತ್ರ ಪ್ರದಾನ ಮಾಡಿದರು. ಸ್ವತ: ಕಾಪರ್ ಹಾಗೂ ಬ್ರೂನೊ ಪದಕ ಪಡೆದುಕೊಳ್ಳುವ ಮೂಲಕ ನೆರೆದಿದ್ದವರ ಚಪ್ಪಾಳೆ ಗಿಟ್ಟಿಸಿಕೊಂಡವು.
ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಜಾರ್ಕಂಡ್ ರಾಜ್ಯದ ರಾಂಚಿಯಲ್ಲಿ ನಡೆಯುವ ಆಲ್ ಇಂಡಿಯಾ ಪೊಲೀಸ್ ಮೀಟ್ ನಲ್ಲಿ ಕಾಪರ್ ಪಾಲ್ಗೊಳ್ಳುತ್ತಿರುವುದು ವಿಶೇಷ.
ಜಿಲ್ಲಾ ಸಶಸ್ತ್ರ ದಳದ ಸಹಾಯಕ ಪೊಲೀಸ್ ನಿರೀಕ್ಷಕ ಜಿತೇಂದ್ರ ಅವರ ಉಸ್ತುವಾರಿಯಲ್ಲಿ ಕಾಪರ್ ಹಾಗೂ ಬ್ರೂನೊ ಶ್ವಾನಗಳನ್ನು ಪೊಲೀಸ್ ಸಿಬ್ಬಂದಿಗಳಾದ ಮನಮೋಹನ್ ಬಿ.ಪಿ, ಸಿದ್ದನಗೌಡ ಪಾಟೀಲ್, ವಿಜಯ ಹಾಗೂ ಪ್ರದೀಪ್ ಕುರುವತ್ತಿ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.