Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
ಬ್ರೇಕ್ ಮಾಡುವ ಭರದಲ್ಲಿ ಹಾಲಿ ಪ್ರಧಾನಿ ಹೆಸರು.. ನೆಟ್ಟಿಗರಿಂದ ಭಾರೀ ಟ್ರೋಲ್...
Team Udayavani, Dec 27, 2024, 6:56 PM IST
ಮುಂಬಯಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನ ಹೊಂದಿದ ಸುದ್ದಿಯನ್ನು ಓದುವ ಭರದಲಿ ಹಾಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು ಹೇಳಿ ನ್ಯೂಸ್ ಆ್ಯಂಕರ್ ಒಬ್ಬರು ಎಡವಟ್ಟು ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ʼಆಜ್ ತಕ್ʼ ಸುದ್ದಿವಾಹಿನಿಯ ಮಹಿಳಾ ನ್ಯೂಸ್ ಆ್ಯಂಕರ್ ಗುರುವಾರ ರಾತ್ರಿ (ಡಿ.26 ರಂದು) ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿಯನ್ನು ಬ್ರೇಕ್ ಮಾಡುವ ಭರದಲ್ಲಿ ಹಾಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಹೇಳಿದ್ದಾರೆ.
ಸುದ್ದಿ ವಾಚಕಿ ಹೇಳಿದ್ದೇನು?: “ಇದು ಏಮ್ಸ್ ದಿಲ್ಲಿʼ ಆಸ್ಪತ್ರೆಯ ಪ್ರತಿಕಾ ಪ್ರಕಟಣೆಯನ್ನು ನಾವು ತೋರಿಸುತ್ತಿದ್ದೇವೆ. ಇದರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 92ರ ವರ್ಷದಲ್ಲಿ.. ಎಂದು ಹೇಳುತ್ತಲ್ಲೇ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು 92ರ ವರ್ಷದಲ್ಲಿ ನಿಧನ ಹೊಂದಿದ್ದಾರೆ ಎಂದು ತಪ್ಪನ್ನು ಕೂಡಲೇ ತಿದ್ದಿಕೊಂಡಿದ್ದಾರೆ.
ಆದರೆ ನೆಟ್ಟಿಗರು ಈ ಕೆಲ ಸೆಕೆಂಡ್‌ಗಳ ವಿಡಿಯೋವನ್ನು ಟ್ರೋಲ್ ಮಾಡಿದ್ದಾರೆ.
AajTak is on Weed Energy 🤦
#ManmohanSingh की खबर में भी मोदीकारिता. pic.twitter.com/x7m6U98DGa— Baba MaChuvera 💫 Parody of Parody (@indian_armada) December 26, 2024
ಚಾನೆಲ್ ಅವರು ಅಧಿಕಾರದಲ್ಲಿರುವ ಕೇಂದ್ರ ಸರ್ಕಾರದ ವಿರುದ್ಧ ಗುಲಾಮಗಿರಿ ತೋರುತ್ತಿದೆ ಎಂದು ಕೆಲವರು ಅಪಹಾಸ್ಯ ಮಾಡಿದ್ದಾರೆ. “ಚಾನೆಲ್ ಧೂಮಪಾನ ಮಾಡುತ್ತಿದೆ” ಎಂದು ತಮಾಷೆಯಾಗಿ ಕೆಲವರು ಕಮೆಂಟ್ ಮಾಡಿದ್ದಾರೆ. ಇನ್ನು ಕೆಲವರು ಚಾನೆಲ್ ಅವರಿಗೆ ಛೀಮಾರಿ ಹಾಕಿದ್ದಾರೆ.
People asking AajTak – What are you smoking?
AajTak – Everything.
–#ManMohanSinghJi #ManmohamSingh #Aajtak pic.twitter.com/g4DvVLrykF
— Ankit Uttam (@ankituttam) December 26, 2024
ನಿರೂಪಕಿ ಹೇಳಿದ ತಪ್ಪನ್ನು ವಿವಿಧ ವಿಡಿಯೋಗಳನ್ನು ಹಾಕಿ ಟ್ರೋಲ್ ಮಾಡಲಾಗುತ್ತಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.