Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Team Udayavani, Dec 28, 2024, 8:31 PM IST
ಹೊಸಪೇಟೆ: ವಕ್ಫ್ ಬೋಡ್೯ನಿಂದ ಹಿಂದೂ-ಮುಸ್ಲಿಂ ಸಮಾಜಕ್ಕೆ ಅನ್ಯಾಯವಾಗಿದ್ದು, ವಕ್ಫ್ ಕಾಯ್ದೆ ಸಂಪೂರ್ಣ ರದ್ಧಾಗಬೇಕು ಎಂದು ಆಗ್ರಹಿಸಿ, ಪಕ್ಷತೀತ, ಜ್ಯಾತತೀತವಾಗಿ ಹೋರಾಟಕ್ಕೆ ಅಣಿಯಾಗಿದ್ದು, ಜ.4 ರಂದು ಬಳ್ಳಾರಿ ಜಿಲ್ಲೆಯ ಕಂಪ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಗೋಗಾಕ್ ಹಾಲಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ನಮ್ಮದು ಯತ್ನಾಳ್ ಬಣವಲ್ಲ, ನಾವೆಲ್ಲರೂ ಬಿಜೆಪಿ ಬಣ. ಕೆಲ ಮಾದ್ಯಮಗಳು ಸೃಷ್ಠಿ ಮಾಡುತ್ತಿವೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಇನ್ಮುಂದೆ ಬಿಜೆಪಿ ಕಚೇರಿಯಲ್ಲಿ ಸಭೆಗಳನ್ನು ನಡೆಸಲಾಗುವುದು. ಮಾಜಿ ಸಚಿವ ಆನಂದ ಸಿಂಗ್ ಬರಲಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ ಅವರು ಬರಲಿ, ಕಾಂಗ್ರೆಸ್ ನವರು ಬರಲಿ. ಇದು ಪಕ್ಷತೀತ ಹೋರಾಟ. ಇದೊಂದು ಕರಾಳ ಕಾನೂನು ಇದು ಸಂಪೂರ್ಣವಾಗಿ ರದ್ಧಾಗಬೇಕು. ಇದಕ್ಕಾಗಿ ಜ.6ರಂದು ಸಹ ಹೋರಾಟ ಮುಂದುವರೆಯಲಿದೆ ಎಂದರು.
ವಿಜೇಂದ್ರ ಅವರ ವಿಚಾರ ಸದ್ಯ ಪ್ರಸ್ತಾಪ ಮಾಡಬೇಡಿ ಎಂದ ಅವರು, ಸಿಟಿ ರವಿ ಹಾಗೂ ಮುನಿರತ್ನ ಪ್ರಕರಣಗಳ ವಿಚಾರವಾಗಿ ರಾಜಕಾರಣದಲ್ಲಿ ಎಲ್ಲವೂ ಎದುರಿಸಬೇಕು. ರಾತ್ರಿಯೆಲ್ಲಾ ಸಿಟಿ ರವಿಯವರನ್ನು ತಿರುಗಾಡಿಸಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ನಮಗೆ ಗೊತ್ತಿಲ್ಲ. ತನಿಖೆ ನಡೆಯುತ್ತಿದೆ. ಈ ವಿಚಾರವಾಗಿ ಪಕ್ಷದ ವರಿಷ್ಠರು ಮಾತನಾಡಿದ್ದಾರೆ. ಅವರೊಂದು ನಾವೊಂದು ಮಾತನಾಡೋದು ಸರಿಯಲ್ಲ ಎಂದು ಜಾರಿಕೊಂಡರು.
ಇದನ್ನೂ ಓದಿ: Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.