Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Team Udayavani, Dec 29, 2024, 6:00 AM IST
ಬೆಂಗಳೂರು: ಹವ್ಯಕ ಸಮಾಜವು ಅಡಿಕೆಯಲ್ಲಿ ವಿವಿಧ ಪ್ರಯೋಗಗಳನ್ನು ಮಾಡುತ್ತ ಬರುತ್ತಿದೆ. ಅಡಿಕೆಯ ಬಣ್ಣ ಹೆಚ್ಚಾಗಲು ರೆಡ್‌ಆಕ್ಸೆ„ಡ್ ಹಾಗೂ ವಿವಿಧ ಕಲಬೆರಕೆ ಬಳಸುತ್ತಾರೆಂಬ ಕೆಟ್ಟ ಹೆಸರು ಅಂಟಿಕೊಂಡಿದೆ. ಆದ್ದರಿಂದ ಕೇಂದ್ರ ಸರಕಾರ ಅಡಿಕೆ ಕೃಷಿಕರ ಪರವಾಗಿದ್ದು, ಅಡಿಕೆಯ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭರವಸೆ ನೀಡಿದರು.
ಅಖೀಲ ಹವ್ಯಕ ಮಹಾಸಭಾದಿಂದ ಅರಮನೆ ಮೈದಾನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ “ಸಾಕ್ಷಾತ್ಕಾರ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಗುಟ್ಕಾದಲ್ಲಿ ವಿಷದ ಅಂಶ ಇರುತ್ತದೆಯೇ ಹೊರತು ಪೂರ್ಣ ಅಡಿಕೆಯಲ್ಲಿ ಅಲ್ಲ. ಈ ಬಗ್ಗೆ ಅಡಿಕೆಗೆ ಅಂಟಿರುವ ಕಳಂಕವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಬೆಂಬಲಕ್ಕೆ ನಿಲ್ಲಲಿದೆ ಎಂದು ಸ್ಪಷ್ಟಪಡಿಸಿದರು.
ಹವ್ಯಕ ಸಮಾಜ ಚಿಕ್ಕ ಸಮಾಜವಾದರೂ ದೇಶವೇ ಮೊದಲು ಎಂದು ಯೋಚಿಸುವ, ಬುದ್ಧಿವಂತ, ವಿದ್ಯಾವಂತ, ಜಾಗೃತವಾಗಿ ಮುಂದುವರಿದ ಸಮಾಜ ಎಂದು ಹೇಳಿದ ಅವರು, ರಾಮಚಂದ್ರಾಪುರ ಮಠ, ಸ್ವರ್ಣವಲ್ಲೀ ಮಠ, ನೆಲಮಾವು ಮಠಗಳ ಮಾರ್ಗದರ್ಶನದಲ್ಲಿ ಹವ್ಯಕ ಸಮುದಾಯ ಉತ್ತಮ ಕಾರ್ಯಗಳನ್ನು ಮಾಡುತ್ತಿದೆ. ಈ ಮೂರು ಪೀಠಗಳು ದೇಶಾದ್ಯಂತ ಗೋರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ದೇಶಿ ತಳಿಗಳನ್ನು ಉಳಿಸಿ-ಬೆಳೆಸುವ ಕೆಲಸ ಮಾಡುತ್ತಿವೆ ಎಂದರು. ಈ ಸಂದರ್ಭದಲ್ಲಿ 81ವೈದಿಕ ವಿದ್ವಾಂಸರಿಗೆ ಹವ್ಯಕ ವೇದರತ್ನ, 81 ಆದರ್ಶ ಶಿಕ್ಷಕರಿಗೆ ಹವ್ಯಕ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!
Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ
EPF ನಿಧಿ ವಂಚನೆ: ರಾಬಿನ್ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!
Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ
Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.