INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Team Udayavani, Dec 29, 2024, 9:48 AM IST
ಮೆಲ್ಬೋರ್ನ್: ಟೀಂ ಇಂಡಿಯಾದ ಉಪ ನಾಯಕ, ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ಅವರು ಮೆಲ್ಬೋರ್ನ್ ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ದದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕ್ರಿಕೆಟ್ ವೃತ್ತಿಜೀವನದಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ ಬುಮ್ರಾ ಟೆಸ್ಟ್ ಕ್ರಿಕೆಟ್ ನಲ್ಲಿ 200 ವಿಕೆಟ್ ಕಿತ್ತ ಸಾಧನೆ ಮಾಡಿದ್ದಾರೆ.
ಭಾನುವಾರ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್ ನ 4 ನೇ ದಿನದಂದು ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ ವಿಕೆಟ್ ಪಡೆಯುವ ಮೂಲಕ ಬುಮ್ರಾ 200 ವಿಕೆಟ್ ಸಾಧನೆ ಮಾಡಿದರು. ಸರಣಿಯಲ್ಲಿ ಈಗಾಗಲೇ ಅತಿ ಹೆಚ್ಚು ವಿಕೆಟ್ ಪಡೆದಿರುವ ಬುಮ್ರಾ, ಮಾಲ್ಕಮ್ ಮಾರ್ಷಲ್, ಜೋಯಲ್ ಗಾರ್ನರ್ ಮತ್ತು ಕರ್ಟ್ಲಿ ಆಂಬ್ರೋಸ್ ಅವರಂತಹ ಕೆಲವು ಸಾರ್ವಕಾಲಿಕ ಶ್ರೇಷ್ಠರನ್ನು ಹಿಂದಿಕ್ಕಿ 200 ವಿಕೆಟ್ ಮೈಲಿಗಲ್ಲನ್ನು ತಲುಪಿದರು.
ಟೆಸ್ಟ್ ಕ್ರಿಕೆಟ್‌ನಲ್ಲಿ 200 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಹೊಂದಿರುವ ಎಲ್ಲಾ ಬೌಲರ್ ಗಳಲ್ಲಿ ಬುಮ್ರಾ ಅತ್ಯುತ್ತಮ ಸರಾಸರಿ ಹೊಂದಿದ್ದಾರೆ.
ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ಕ್ರಿಕೆಟ್ ನಲ್ಲಿ 19.5 ಸರಾಸರಿಯನ್ನು ಹೊಂದಿದ್ದಾರೆ. ಮಾಲ್ಕಮ್ ಮಾರ್ಷಲ್ (20.9), ಜೋಯಲ್ ಗಾರ್ನರ್ (21.0), ಮತ್ತು ಕರ್ಟ್ಲಿ ಆಂಬ್ರೋಸ್ (21.0) ಅವರಿಗಿಂತ ಉತ್ತಮ ಸರಾಸರಿಯಲ್ಲಿ 200 ವಿಕೆಟ್ ಪಡೆದ ಸಾಧನೆ ಮಾಡಿದರು.
Jasprit Bumrah takes his 200th Test wicket and follows it up with 201 just moments later!#AUSvIND | #MilestoneMoment | @nrmainsurance pic.twitter.com/NpiXDBaVDI
— cricket.com.au (@cricketcomau) December 29, 2024
ಅಲ್ಲದೆ, ಬುಮ್ರಾ ಅವರು 20 ಕ್ಕಿಂತ ಕಡಿಮೆ ಸರಾಸರಿಯನ್ನು ಕಾಯ್ದುಕೊಂಡು ಟೆಸ್ಟ್‌ನಲ್ಲಿ 200 ವಿಕೆಟ್‌ಗಳನ್ನು ಪಡೆದ ಮೊದಲ ಬೌಲರ್ ಆಗಿದ್ದಾರೆ.
ಟೆಸ್ಟ್ ಸ್ವರೂಪದಲ್ಲಿ 200 ವಿಕೆಟ್ ಗಳನ್ನು ಪಡೆದ ಬುಮ್ರಾ ಇನ್ನೂ ಕೆಲವು ದಾಖಲೆಗಳನ್ನು ಸಾಧಿಸಿದ್ದಾರೆ. ಅವರು ಟೆಸ್ಟ್ ನಲ್ಲಿ 200 ವಿಕೆಟ್ ಗಳನ್ನು ಗಳಿಸಿದ ಎರಡನೇ ವೇಗದ ಭಾರತೀಯರಾಗಿ ಜಡೇಜಾ ಅವರನ್ನು ಸೇರಿಕೊಂಡರು. ಬುಮ್ರಾ ಮತ್ತು ಜಡೇಜಾ ಇಬ್ಬರೂ ತಮ್ಮ 44 ನೇ ಟೆಸ್ಟ್‌ನಲ್ಲಿ ಈ ಸಾಧನೆಯನ್ನು ಮಾಡಿದರು. ಒಟ್ಟಾರೆಯಾಗಿ ಬುಮ್ರಾ ಈ ಮೈಲಿಗಲ್ಲನ್ನು ಪೂರ್ಣಗೊಳಿಸಿದ 12 ನೇ ಭಾರತೀಯ ಬೌಲರ್ ಆಗಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.