Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ
Team Udayavani, Dec 29, 2024, 11:29 AM IST
ಮಂಗಳೂರು: ವಿಜಯಪುರ -ಮಂಗಳೂರು ಸೆಂಟ್ರಲ್ – ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು ಸೇವೆಯನ್ನು ಮತ್ತೆ ಆರು ತಿಂಗಳು ವಿಸ್ತರಿಸಲಾಗಿದೆ.
ನಂ. 07377 ವಿಜಯಪುರ – ಮಂಗಳೂರು ಸೆಂಟ್ರಲ್ ಡೈಲಿ ಎಕ್ಸ್‌ಪ್ರೆಸ್ ವಿಶೇಷ ರೈಲು 2025ರ ಜ.1ರಿಂದ ಜೂ.30ರ ವರೆಗೆ ತನ್ನ ಸೇವೆಯನ್ನು ಮುಂದುವರಿಸಲಿದೆ. ಈ ರೈಲು ಮಧ್ಯಾಹ್ನ 3.35ರ ಬದಲಾಗಿ 3 ಗಂಟೆಗೆ ವಿಜಯಪುರದಿಂದ ಪ್ರಯಾಣ ಆರಂಭಿಸಿ, ಮರುದಿನ ಬೆಳಗ್ಗೆ 9.50ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ಹೊರಡುವ ಸಮಯ ಮಾತ್ರ ಬದಲಾಗಿದ್ದು, ಮಂಗಳೂರು ತಲುಪುವ ಸಮಯದಲ್ಲಿ ಬದಲಾವಣೆ ಆಗಿಲ್ಲ.
ನಂ. 07378 ಮಂಗಳೂರು ಸೆಂಟ್ರಲ್ -ವಿಜಯಪುರ ಡೈಲಿ ಎಕ್ಸ್‌ಪ್ರೆಸ್ ಸ್ಪೆಷಲ್ 2025ರ ಜ.2ರಿಂದ ಜುಲೈ 1ರ ವರೆಗೆ ತನ್ನ ಸೇವೆಯನ್ನು ಮುಂದುವರಿಸಲಿದೆ. ರೈಲು ಮಂಗಳೂರು ಸೆಂಟ್ರಲ್‌ನಿಂದ ಮಧ್ಯಾಹ್ನ 2.35ಕ್ಕೆ ಪ್ರಯಾಣ ಆರಂಭಿಸಲಿದ್ದು, ಮರುದಿನ ಬೆಳಗ್ಗೆ 9.35ಕ್ಕೆ ವಿಜಯಪುರ ತಲುಪಲಿದೆ. ಇಲ್ಲಿ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿಲ್ಲ.
ಈ ರೈಲನ್ನು ರೆಗ್ಯುಲರ್ ಮಾಡಬೇಕು ಎನ್ನುವ ಬೇಡಿಕೆ ಇರಿಸಲಾಗಿತ್ತು. ಆದರೆ ಮತ್ತೆ ವಿಶೇಷ ರೈಲು ಆಗಿಯೇ ವಿಸ್ತರಿಸಿರುವುದಕ್ಕೆ ರೈಲ್ವೇ ಹೋರಾಟಗಾರರು ಹಾಗೂ ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಇದು ವಿಶೇಷ ರೈಲಾಗಿಯೇ ಸಂಚರಿಸುತ್ತಿದೆ. ವಿಶೇಷ ರೈಲಿನಲ್ಲಿ ಸಾಮಾನ್ಯ ರೈಲಿಗಿಂತ ಹೆಚ್ಚಿನ ಟಿಕೆಟ್ ದರ ಇರುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.