Kasaragodu: ಹೊಳೆಯಲ್ಲಿ ಮುಳುಗಿ ಮೂವರು ಬಾಲಕರ ಸಾವು
ಕಾಸರಗೋಡಿನ ಬೋವಿಕ್ಕಾ ನ ಸಮೀಪ ಸಂಭವಿಸಿದ ದುರಂತ
Team Udayavani, Dec 29, 2024, 11:37 AM IST
ಕಾಸರಗೋಡು: ಬೋವಿಕ್ಕಾನ ಎರಿಂಞಪ್ಪುಳದಲ್ಲಿ ಶನಿವಾರ ಮಧ್ಯಾಹ್ನ 2 ಗಂಟೆಗೆ ಸಂಭವಿಸಿದ ದುರಂತದಲ್ಲಿ ಮೂವರು ಬಾಲಕರು ನೀರುಪಾಲಾಗಿದ್ದಾರೆ. ಬಾಲಕರು ಹೊಳೆಯಲ್ಲಿ ಸ್ನಾನ ಮಾಡುತ್ತಿ ದ್ದಾಗ ಮುಳುಗಿ ಸಾವನ್ನಪ್ಪಿದ್ದಾರೆ.
ಎರಿಂಞಪ್ಪುಳದಲ್ಲಿ ಕೋಳಿ ವ್ಯಾಪಾರಿಯಾಗಿರುವ ಅಶ್ರಫ್ ಅವರ ಪುತ್ರ ಮುಹಮ್ಮದ್ ಯಾಸಿನ್ (13), ಎರಿಂಞಪ್ಪುಳದ ಸಿದ್ಧಿಕ್ ಅವರ ಪುತ್ರ ರಿಯಾಸ್ (16) ಹಾಗೂ ಮಜೀದ್ ಅವರ ಪುತ್ರ ಸಮದ್ (14) ಮೃತ ಬಾಲಕರು.
ಪೊಲೀಸ್ ಎಸ್‌ಐ ಸೈಫುದ್ದೀನ್ ನೇತೃತ್ವದಲ್ಲಿ ಸ್ಕೂಬಾ ತಂಡ, ಕುತ್ತಿಕ್ಕೋಲ್‌ನ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ರಿಯಾಸ್‌ನನ್ನು ಮೇಲಕ್ಕೆತ್ತಿ ಕೂಡಲೇ ಚೆರ್ಕಳದ ಆಸ್ಪತ್ರೆಗೆ ಸಾಗಿಸಿದರು. ಆದರೂ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇನ್ನಿಬ್ಬರ ಮೃತದೇಹವನ್ನು ಆ ಬಳಿಕ ಪತ್ತೆಹಚ್ಚಿ ಮೇಲಕ್ಕೆತ್ತಲಾಯಿತು. ಅಪಾರ ಸಂಖ್ಯೆಯ ಜನರು ಸ್ಥಳದಲ್ಲಿ ನೆರೆದಿದ್ದರು.
ಸಚಿವ ಕಡನ್ನಪಳ್ಳಿ ಭೇಟಿ ಸಚಿವ ರಾಮಚಂದ್ರನ್ ಕಡನ್ನಪಳ್ಳಿ ಅವರು ವಿಷಯ ತಿಳಿದು ದುರಂತ ಸಂಭವಿಸಿದ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು. ಶಾಸಕ ಸಿ.ಎಚ್.ಕುಂಞಂಬು ಸಹಿತ ಹಲವು ಗಣ್ಯರು ಸ್ಥಳಕ್ಕೆ ಭೇಟಿ ನೀಡಿದರು. ಸಚಿವರು, ಶಾಸಕರು ಹಾಗು ಜನಪ್ರತಿನಿಧಿಗಳು ಮೃತರ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ
Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ
Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್ ಆಸ್ತಿ ಈಗ ವರ್ಗಾವಣೆ
Udupi; ಗೀತಾರ್ಥ ಚಿಂತನೆ 144: ವೇದಗಳಿಗೆ ಇನ್ನೊಂದು ಅಪೌರುಷೇಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.