Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ


Team Udayavani, Dec 29, 2024, 12:16 PM IST

Bengaluru: New Year celebrations allowed only till 1 am: Police Commissioner

ಬೆಂಗಳೂರು: ಬೆಂಗಳೂರು ನಗರದ ಜನತೆ ಹೊಸ ವರ್ಷಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಿದ್ದು, ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆ, ರೆಸಿಡೆನ್ಸಿ ರಸ್ತೆ ಸೇರಿ ಪ್ರಮುಖ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಹೊಸ ವರ್ಷಾಚರಣೆಯ ಬಂದೋಬಸ್ತ್‌ ಗೆ ಒಟ್ಟು 11,830 ಪೊಲೀಸರನ್ನು ನಿಯೋಜಿಸಲಾಗಿದೆ. ತಡರಾತ್ರಿ 1 ಗಂಟೆಯವರೆಗೆ ಹೊಸ ವರ್ಷಾಚರಣೆಗೆ ಅವಕಾಶ ಕಲ್ಪಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಎಚ್ಚರಿಕೆ ನೀಡಿದ್ದಾರೆ.

ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಈ ಕುರಿತು ಶನಿವಾರ ಸುದ್ದಿಗೋಷ್ಠಿ ನಡೆಸಿದ ಅವರು, ಹೊಸ ವರ್ಷಾಚರಣೆಯನ್ನು ಸಾರ್ವಜನಿಕವಾಗಿ ಆಚರಿಸುವ ಪ್ರಮುಖ ಸ್ಥಳಗಳಾದ ಎಂ.ಜಿ.ರಸ್ತೆ- ಬ್ರಿಗೇಡ್‌ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್‌ ಮಾರ್ಕ್ಸ್ ರಸ್ತೆ, ಕಬ್ಬನ್‌ಪಾರ್ಕ್‌, ಟ್ರಿನಿಟಿ ಸರ್ಕಲ್, ಫೀನಿಕ್ಸ್‌ ಮಾಲ್, ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆ, ಪ್ರಮುಖ ಸ್ಟಾರ್‌ ಹೋಟೆಲ್‌ಗ‌ಳು, ಪಬ್‌ಗಳು, ಕ್ಲಬ್‌ಗಳು ಮುಂತಾದ ಸ್ಥಳಗಳಲ್ಲಿ ಜನಸಂದಣಿಯನ್ನು ನಿಯಂತ್ರಿಸಲು ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದರು.

ಎಂ.ಜಿ. ರಸ್ತೆಯಲ್ಲಿ 2,572 ಪೊಲೀಸರು: ವಿಶೇಷವಾಗಿ ಕೇಂದ್ರ ವಿಭಾಗದ ಬ್ರಿಗೇಡ್‌ ರಸ್ತೆ-ಎಂ.ಜಿ.ರಸ್ತೆ, ಒಪೆರಾ ಜಂಕ್ಷನ್‌, ರಿಚ್ಮಂಡ್‌ ರಸ್ತೆ, ರೆಸಿಡೆನ್ಸಿ ರಸ್ತೆ ವ್ಯಾಪ್ತಿಯಲ್ಲಿ ಐವರು ಡಿಸಿಪಿ, 18 ಎಸಿಪಿಗಳು, 41 ಜನ ಪೊಲೀಸ್‌ ಇನ್‌ಸ್ಪೆಕ್ಟರ್‌ ಸೇರಿದಂತೆ ಒಟ್ಟು 2,572 ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ನಿಯೋಜಿಸಲಾಗಿದೆ. ಫೀನಿಕ್ಸ್‌ ಮಾಲ್, ಓರಾಯನ್‌ ಮಾಲ್‌, ಕೋರಮಂಗಲ, ಇಂದಿರಾನಗರ, ಮಾರತ್ತಹಳ್ಳಿ, ಎಚ್‌.ಆರ್‌.ಬಿ.ಆರ್‌.ಲೇಔಟ್‌, ಏರ್‌ ಪೋರ್ಟ್‌ ರಸ್ತೆ, ವೈಟ್‌ಫೀಲ್ಡ್‌ ಪ್ರದೇಶಗಳಲ್ಲಿ ನಡೆಯಲಿರುವ ಹೊಸ ವರ್ಷಾಚರಣೆಯ ಬಂದೋಬಸ್ತ್ ಕರ್ತವ್ಯಕ್ಕೆ ನಾಲ್ವರು ಡಿಸಿಪಿ, 6 ಮಂದಿ ಎಸಿಪಿಗಳು, 18-ಪೊಲೀಸ್‌ ಇನ್‌ಸ್ಪೆಕ್ಟರ್‌ ಸೇರಿದಂತೆ 2,414 ಪೊಲೀಸರು ಭದ್ರತೆ ಒದಗಿಸಲಿದ್ದಾರೆ.

ಮಹಿಳೆಯರ ಸುರಕ್ಷತೆಗೆ ಆದ್ಯತೆ: ಮಹಿಳೆಯರ ಸುರಕ್ಷತೆ ಗಾಗಿ ಪ್ರಮುಖ ಸ್ಥಳಗಳಲ್ಲಿ ಮಹಿಳಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿರುವ ಮಹಿಳಾ ಸುರಕ್ಷತಾ ಸ್ಥಳಗಳನ್ನು ತೆರೆಯಲಾಗಿದೆ. ಮಹಿಳೆಯರು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್‌ ಕಿಯೋಸ್ಕ್ ಗಳನ್ನು ತೆರದಿದ್ದು, ಮಕ್ಕಳು ಕಾಣೆಯಾದಲ್ಲಿ, ಯಾವುದೇ ರೀತಿಯ ಕಳುವಿನ ದೂರುಗಳಿಗೆ ಅಥವಾ ಯಾವುದೇ ತುರ್ತು ಸಂದರ್ಭಗಳಲ್ಲಿ ಅವಶ್ಯಕ ಸೇವೆಯನ್ನು ಪಡೆಯಬಹುದಾಗಿದೆ. ಹೆಚ್ಚು ಜನಸಂದಣಿ ಸೇರುವ ಸ್ಥಳಗಳಲ್ಲಿ ಸೂಕ್ತ ಕಣ್ಗಾವಲು ಏರ್ಪಡಿಸಲು ಸಿಬ್ಬಂದಿಗೆ ವೀಕ್ಷಣಾ ಗೋಪುರಗಳನ್ನು ನಿರ್ಮಿಸಿದ್ದು, ವೀಕ್ಷಣಾ ಗೋಪುರಗಳಲ್ಲಿ ಕರ್ತವ್ಯಕ್ಕೆ ನೇಮಕ ಮಾಡಲಾಗುವ ಸಿಬ್ಬಂದಿಗಳಿಗೆ ಬೈನಾಕುಲರ್‌ ಉಪಕರಣ ಒದಗಿಸಲಾಗುವುದು ಎಂದು ತಿಳಿಸಿದರು.

ಎಚ್ಚರ ವಹಿಸಿ: ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮೋದಿಸಲ್ಪಟ್ಟ ಅಧಿಕೃತ ಸ್ಥಳಗಳಲ್ಲಿ ವರ್ಷಾಚರಣೆ ಆಚರಿಸಿ. ತುರ್ತು ಸಂದರ್ಭಗಳಲ್ಲಿ 112 ಅಥವಾ ಸಮೀಪದ ಪೊಲೀಸ್‌ ಠಾಣೆಯನ್ನು/ಪೊಲೀಸ್‌ ಕಿಯೋಸ್ಕ್ ಅನ್ನು ಸಂಪರ್ಕಿಸುವುದು. ವರ್ಷಾಚರಣೆ ಯನ್ನು ಆಚರಿಸುವ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಬೆಲೆಬಾಳುವ ಆಭರಣಗಳನ್ನು ಧರಿಸದೇ ಇರುವುದು ಒಳಿತು. ಅಲ್ಲದೇ ಮೊಬೈಲ್‌ ಪೋನ್‌ ಮತ್ತು ಹಣವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಿ. ಇತರೆ ಧರ್ಮದವರಿಗೆ ಘಾಸಿಯಾಗದಂತೆ ವರ್ಷಚರಣೆಯನ್ನು ಆಚರಿಸಿ. ಆಟೋ ಮತ್ತು ಕ್ಯಾಬ್‌ಗಳಲ್ಲಿ ಪ್ರಯಾಣಿಸುವಾಗ ಅಧಿಕೃತವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ.

ಪರಿಸರ ಮಾಲಿನ್ಯ ತಡೆಯಿರಿ: ಮದ್ಯಪಾನ ಮತ್ತು ಮಾದಕ ವಸ್ತುಗಳನ್ನು ಸೇವಿಸಿ ವಾಹನ ಚಾಲನೆ ಮಾಡಬೇಡಿ. ಪಟಾಕಿಗಳನ್ನು ಸಿಡಿಸಬಾರದು. ಪರಿಸರ ಮಾಲಿನ್ಯ ಉಂಟಾಗುವುದನ್ನು ತಪ್ಪಿಸಿ. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯದೇ ಯಾವುದೇ ಸಮಾರಂಭಗಳನ್ನು ಆಯೋಜಿಸುವಂತಿಲ್ಲ. ತಮಾಷೆ ಮತ್ತು ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಡಿ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮತ್ತು ದೂಮಪಾನವನ್ನು ಮಾಡುವುದು ಕಾನೂನು ಬಾಹಿರವಾಗಿರುತ್ತದೆ.

ರಾತ್ರಿ 10ರ ಬಳಿಕ ಎಲ್ಲಾ ಫ್ಲೈಓವರ್‌ಗಳ ಮೇಲೆ ಸಂಚಾರ ನಿರ್ಬಂಧ

ಸುರಕ್ಷತೆ ದೃಷ್ಟಿಯಿಂದ ಡಿ.31ರಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಗರದ ಎಲ್ಲ ಮೇಲುಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪ್ರಮುಖ ಸ್ಥಳಗಳಲ್ಲಿ ಹೆಚ್ಚುವರಿಯಾಗಿ ಸಿಸಿ ಕ್ಯಾಮರಾ, ಡ್ರೋನ್‌ ಕ್ಯಾಮೆರಾ ಕಾರ್ಯಾಚರಣೆಗೊಳಿಸಲಾಗಿದೆ. ನಗರದ ಪ್ರಮುಖ ಸ್ಥಳಗಳನ್ನು ಶ್ವಾನದಳ ಮತ್ತು 16 ಎ.ಎಸ್‌.ಚೆಕ್‌ ತಂಡಗಳಿಂದ ತಪಾಸಣೆ ಕೈಗೊಳ್ಳಲಾಗುತ್ತದೆ ಎಂದು ಕಮಿಷನರ್‌ ತಿಳಿಸಿದರು.

ಮಫ್ತಿಯಲ್ಲಿ 600 ಪೊಲೀಸ್‌ ನಿಯೋಜನೆ

ಸಿಸಿ ಕ್ಯಾಮೆರಾ-817, ವಾಚ್‌ಟವರ್‌-63, ಮಹಿಳೆಯರ ಸುರಕ್ಷತಾ ಸ್ಥಳ-114, ಕಿಯೋಸ್ಕ್ -48 ಹಾಗೂ 54 ಹೆಲ್ತ್‌ ಸೆಂಟರ್‌ ಕಲ್ಪಿಸಲಾಗಿದೆ. ಹೆಚ್ಚುವರಿ ಪೊಲೀಸ್‌ ಆಯುಕ್ತ-2, ಡಿಸಿಪಿ-15, ಎಸಿಪಿ-44, ಪೊಲೀಸ್‌ ಇನ್‌ಸ್ಪೆಕ್ಟರ್‌ 135, ಪಿಎಸ್‌ಐ-530, ಎಎಸ್‌ಐ 655, ಹೆಡ್‌ಕಾನ್‌ ಸ್ಟೇಬಲ್‌-4,833, ಹೆಚ್ಚುವರಿ ಸಿಬ್ಬಂದಿ 1,048, ಮಫ್ತಿ ಸಿಬ್ಬಂದಿ 597, ಹೋಮ್‌ಗಾರ್ಡ್ಸ್‌ 3,170, ಸಿವಿಲ್‌ ಡಿಫೆನ್ಸ್‌-800 ಸೇರಿ ಒಟ್ಟು 11,830 ಪೊಲೀಸರನ್ನು ನಿಯೋಜಿಸಲಾಗಿದೆ. ಇದಲ್ಲದೇ ಡಿ.31ರ ರಾತ್ರಿ 72 ಕೆಎಸ್‌ಆರ್‌ಪಿ, 21 ಸಿಎಆರ್‌ ತುಕಡಿ ಹಾಗೂ ಜ.1ರಂದು ಬೆಳಗ್ಗೆ 17 ಕೆಎಸ್‌ಆರ್‌ಪಿ ನಿಯೋಜಿಸಲಾಗಿದೆ.

ಬ್ರಿಗೇಡ್‌ ರಸೆಯಲ್ಲಿ ವಾಹನ ಸಂಚಾರ ನಿರ್ಬಂಧ, ಏಕಮುಖ ನಡಿಗೆ ಅವಕಾಶ

ಡಿ.31ರಂದು ಬ್ರಿಗೇಡ್‌ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ, ಸಾರ್ವಜನಿಕರಿಗೆ ನಡಿಗೆಯ ಮೂಲಕ ಏಕ ಮುಖ ಪ್ರವೇಶಕ್ಕೆ ಮಾತ್ರ ಅವಕಾಶ ಮಾಡಿದ್ದು, ಎಂ.ಜಿ ರಸ್ತೆಗೆ ಪ್ರವೇಶಿಸುವವರಿಗೆ ಅನಿಲ್‌ ಕುಂಬ್ಳೆ ಸರ್ಕಲ್‌ನಿಂದ ಹಾಗೂ ಮೆಯೋ ಹಾಲ್‌ ಜಂಕ್ಷನ್‌ ಮೂಲಕ ಎಂ.ಜಿ.ರಸ್ತೆ ಪ್ರವೇಶಿಸಬಹುದಾಗಿದೆ. ನಂತರ ಬ್ರಿಗೇಡ್‌ ರಸ್ತೆ ಜಂಕ್ಷನ್‌ ಮೂಲಕ ಬ್ರಿಗೇಡ್‌ ರಸ್ತೆಗೆ ಪ್ರವೇಶಿಸಿ ಏಕಮುಖವಾಗಿ ಚಲಿಸಿ ಒಪೇರಾ ಜಂಕ್ಷನ್‌ ನಲ್ಲಿ ಹೊರ ಹೋಗಲು ಅವಕಾಶ ಮಾಡಲಾಗಿದೆ. ಡಿ.31ರಂದು ರಾತ್ರಿ ಬ್ರಿಗೇಡ್‌ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದಿರಾನಗರ, ಮಹದೇವಪುರದ ಕೆಲವು ರಸ್ತೆಗಳಲ್ಲಿ ಅಂದು ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಕೋರಮಂಗಲದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಮಾಲ್‌ಆಫ್ ಏಷಿಯಾ, ಓರೆಯನ್‌ ಮಾಲ್‌ ಪಕ್ಕ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.