Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ  ಇನ್ನೂ ಮೀನ ಮೇಷ ಎಣಿಕೆ

ಕಾವಳಪಡೂರು ಗ್ರಾ.ಪಂ.: 4 ವರ್ಷಗಳ ಹಿಂದೆ ನಿರ್ಮಿಸಲಾದ ಘಟಕ

Team Udayavani, Dec 29, 2024, 1:33 PM IST

1(1
ಪುಂಜಾಲಕಟ್ಟೆ: ಕಾವಳಪಡೂರು ಗ್ರಾ.ಪಂ.ನ ಘನ ತ್ಯಾಜ್ಯ ನಿರ್ವಹಣೆಗೆ ನಾಲ್ಕು ವರ್ಷಗಳ ಹಿಂದೆ ನಿರ್ಮಿಸಲಾದ ಘಟಕದಲ್ಲಿ ನಿರ್ವಹಣೆ ಆರಂಭಿಸದೆ ಘಟಕ ಖಾಲಿ ಉಳಿದಿದೆ. ಆದರೆ ಇಲ್ಲಿನ ಸಮಾಜ ಭವನದಲ್ಲಿ ಮಹಿಳೆಯರೇ ತ್ಯಾಜ್ಯ ನಿರ್ವಹಣೆ ನಡೆಸುತ್ತಿದ್ದಾರೆ.
ಪಂಚಾಯತ್‌ನಿಂದ ಸುಮಾರು ಏಳು ಕಿಲೋ ಮೀಟರ್‌ ದೂರದಲ್ಲಿ ಬರ್ಕಟ ಎಂಬಲ್ಲಿ ಘನತ್ಯಾಜ್ಯ ಘಟಕ ನಿರ್ಮಾಣ ಮಾಡಿದ್ದು, ವರ್ಷ ನಾಲ್ಕಾದರೂ ಇನ್ನೂ ಕಾರ್ಯಾರಂಭದ ಲಕ್ಷಣ ಕಾಣುತ್ತಿಲ್ಲ. ಎನ್‌ಆರ್‌ಇಜಿ ಮತ್ತು 15ನೇ ಹಣಕಾಸು ನಿಧಿಯಿಂದ ಘನ ತ್ಯಾಜ್ಯ ನಿರ್ವಹಣೆಗೆ ಘಟಕ ನಿರ್ಮಾಣವಾಗಿರುತ್ತದೆ. ಆದರೆ ಘಟಕಕ್ಕೆ ಸೂಕ್ತ ರಸ್ತೆ ವ್ಯವಸ್ಥೆಯೇ ಇಲ್ಲ. ಸದ್ಯ ಘಟಕ್ಕೆ ಬದಲಾಗಿ ಉಗ್ಗಬೆಟ್ಟು ಎಂಬಲ್ಲಿ ಪಂಚಾಯತ್‌ನ ಸಮಾಜ ಭವನದಲ್ಲಿ ಒಣಕಸಗಳ ವಿಂಗಡಣೆ ಮಾಡಲಾಗುತ್ತಿದೆ. ಪ್ರಸ್ತುತ ಅರುಣೋದಯ ಸಂಜೀವಿನಿ ಮಹಿಳಾ ಒಕ್ಕೂಟ ಸದಸ್ಯರಿಂದ ಘನ ತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ.
ಸುಮಾರು ಒಂಭತ್ತು ಸಾವಿರದಷ್ಟು ಜನಸಂಖ್ಯೆಯನ್ನು ಹೊಂದಿರುವ ಕಾವಳಪಡೂರು ಗ್ರಾ.ಪಂ. ಮಧ್ಯಭಾಗ ದಲ್ಲಿ ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್‌-ಕಡೂರು ರಸ್ತೆ ಹಾದುಹೋಗಿರುತ್ತದೆ. ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆಯ ವರೆಗೆ ರಸ್ತೆ ಅಭಿವೃದ್ಧಿಯಾಗಿದ್ದು, ನಿರಂತರವಾಗಿ ಪ್ರವಾಸಿಗರು ಸಂಚರಿಸುವ ರಸ್ತೆಯು ಇದಾಗಿದೆ. ಹೆಚ್ಚಾಗಿ ಕಾವಳಪಡೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ರಸ್ತೆಯ ಬದಿಯಲ್ಲೇ ಪ್ರಯಾಣಿಕರು ಎಸೆಯುವ ಒಣಕಸ, ಪ್ಲಾಸ್ಟಿಕ್‌ ರಸ್ತೆ ಬದಿಯಲ್ಲೇ ರಾಶಿ ರಾಶಿಯಾಗಿರುತ್ತದೆ.
ತ್ಯಾಜ್ಯ ನಿರ್ವಹಣೆಗೆ ಪಂಚಾಯತ್‌ ಒಂದು ವಾಹನವನ್ನೊಳಗೊಂಡಿದ್ದು, ಹೆದ್ದಾರಿ ಬದಿಯಲ್ಲಿರುವ ಅಂಗಡಿಗಳು, ವಾಣಿಜ್ಯ ಕಟ್ಟಡಗಳಿಂದ ಹಾಗೂ ಹೆದ್ದಾರಿಯಲ್ಲಿ ರಾಶಿಬಿದ್ದಿರುವ ಕಸ ಹಾಗೂ ತ್ಯಾಜ್ಯಗಳನ್ನು ಒಂಬತ್ತು ಮಂದಿ ಸದಸ್ಯರಿರುವ ಅರುಣೋದಯ ಸಂಜೀವಿನಿ ಮಹಿಳಾ ಒಕ್ಕೂಟದ ಮಹಿಳೆಯರೇ ನಿರ್ವಹಣೆ ಮಾಡುತ್ತಿದ್ದಾರೆ. ಹಸಿ ಕಸ ಮತ್ತು ಒಣ ಕಸ ಎಂದು ತಿಂಗಳಿಗೆ ಸುಮಾರು 2.5 ಟನ್‌ ಕಸಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ.
ಮುಂದೆ ಮನೆಗಳಿಂದೂ ಒಣ ತ್ಯಾಜ್ಯ ಸಂಗ್ರಹ
ಕಳೆದ ನಾಲ್ಕು ವರ್ಷಗಳ ಹಿಂದೆ ಬರ್ಕಟ ಎಂಬಲ್ಲಿ ಘನತ್ಯಾಜ್ಯ ಘಟಕ ನಿರ್ಮಾಣ ಮಾಡಿದ್ದರೂ ಸೂಕ್ತವಾದ ರಸ್ತೆ ವ್ಯವಸ್ಥೆಯಿಲ್ಲದ ಅದನ್ನು ಉಪಯೋಗಿಸಲು ಸಾಧ್ಯವಾಗಿಲ್ಲ. ಪ್ರಸ್ತುತ ಅಂಗಡಿ, ವಾಣಿಜ್ಯ ಕಟ್ಟಡಗಳಿಂದ ಒಣ ತ್ಯಾಜ್ಯ ಸಂಗ್ರಹಣೆಯನ್ನು ಆರಂಭಿಸಿದ್ದು ಹಂತ ಹಂತವಾಗಿ ಗುಂಪು ಮನೆಗಳಿಂದ ಒಣ ತ್ಯಾಜ್ಯ ಸಂಗ್ರಹಣೆ ಅರಂಭಿಸಲಾಗುತ್ತಿದೆ ಎಂದು ಕಾವಳಪಡೂರು ಗ್ರಾಮ ಪಂಚಾಯತ್‌ ಅಧ್ಯಕ್ಷ ಲಕ್ಷ್ಮೀ ನಾರಾಯಣ ಶರ್ಮ ಹೇಳಿದ್ದಾರೆ.
ಶೀಘ್ರ ಕಾರ್ಯಾರಂಭ
ಕಳೆದ ಕೆಲವು ವರ್ಷದಿಂದ ಗ್ರಾಮ ಪಂಚಾಯತ್‌ ಸಮಾಜ ಭವನದಲ್ಲೇ ತಾತ್ಕಾಲಿಕವಾಗಿ ನಿರ್ವಹಣೆ ಮಾಡಲಾಗುತ್ತಿದ್ದು. ಪೂರ್ಣ ಪ್ರಮಾಣದ ಘನತ್ಯಾಜ್ಯ ಘಟಕ ಬರ್ಕಟ ಎಂಬಲ್ಲಿ ನಿರ್ಮಾಣ ಗೊಂಡಿದ್ದು ಶೀಘ್ರ ಆರಂಭಿಸಲಾಗುವುದು. ಪಂಚಾಯತ್‌ ವತಿಯಿಂದ ತ್ಯಾಜ್ಯ ಸಾಗಾಟ ವಾಹನದ ನಿರ್ವಹಣೆ ಮಾಡಲಾಗುತ್ತಿದೆ.
-ರಚನ್‌ ಕುಮಾರ್‌, ಪಂ. ಅ. ಅಧಿಕಾರಿ

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.