Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Team Udayavani, Dec 29, 2024, 3:25 PM IST
ಧಾರವಾಡ: ವಿಜಯಪುರದಲ್ಲಿ ದಲಿತ ಮುಖಂಡನೊಬ್ಬ ಅಮಿತ್ ಶಾ ನಾಲಿಗೆ ಕತ್ತರಿಸಿದವರಿಗೆ ಬಹುಮಾನ ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಪ್ರತಿಕ್ರಿಯೆ ನೀಡಿದ್ದಾರೆ.
ಧಾರವಾಡದಲ್ಲಿ ರವಿವಾರ (ಡಿ.29) ಮಾಧ್ಯಮಮಗಳೊಂದಿಗೆ ಮಾತನಾಡಿದ ಅವರು, ಆ ರೀತಿ ಬಹುಮಾನ ಘೋಷಣೆ ಮಾಡಿದವರೆಲ್ಲ ಕಾಂಗ್ರೆಸ್ ಕಾರ್ಯಕರ್ತರೇ ಆಗಿರುತ್ತಾರೆ. ಕಾಂಗ್ರೆಸ್ ಬದಲಿಗೆ ದಲಿತ ನಾಯಕರ ಹೆಸರು ಹೇಳುತ್ತಾರೆ. ಕಾಂಗ್ರೆಸ್ ಜೊತೆಗೆ ಇರುವ ದಲಿತ ನಾಯಕರೇ ಹೀಗೆ ಮಾತನಾಡುತ್ತಾರೆ. ದಲಿತರಿಗೆ ಹೆಚ್ಚು ನ್ಯಾಯ ಸಿಕ್ಕಿದ್ದೆ ಬಿಜೆಪಿ ಅವಧಿಯಲ್ಲಿ. ಇದು ಉಳಿದೆಲ್ಲ ದಲಿತ ನಾಯಕರಿಗೆ ಗೊತ್ತಿದೆ. ಐವತ್ತು ವರ್ಷದ ಮೀಸಲಾತಿ ಮುಂದುವರಿಕೆ ಆಗುವ ವಿಚಾರ ಇತ್ತು. ಇದನ್ನು ಮುಂದುವರೆಸಿದ್ದು ವಾಜಪೇಯಿ ಹಾಗೂ ಮೋದಿ ಸರ್ಕಾರ. ಒಳ ಮೀಸಲಾತಿ ಚಿಂತನೆ ಕೊಟ್ಟಿದ್ದೆ ಬಿಜೆಪಿ. ಅಂಬೇಡ್ಕರರ ಪಂಚಕ್ಷೇತ್ರ ಪುನರುಜ್ಜೀವನ ಮಾಡಿದ್ದು ಬಿಜೆಪಿ. ಅವರಿಗೆ ಭಾರತ ರತ್ನ ಕೊಟ್ಟಿದ್ದು ಕಾಂಗ್ರೆಸೇತರ ಸರ್ಕಾರ. ದಲಿತರಿಗೆ ಒಳ್ಳೆಯದು ಮಾಡಿದ್ದು ಬಿಜೆಪಿ ಎಂದರು.
ಹೀಗಿರುವಾಗ ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು. ಆದರೆ, ಈಗಿನ ಸರ್ಕಾರ ಕ್ರಮ ಕೈಗೊಳ್ಳುವುದಿಲ್ಲ ಎನಿಸುತ್ತದೆ. ಸಮಾಜ ವಿರೋಧಿ, ದೇಶ ವಿರೋಧಿಗಳ ಮೇಲೆ ಕ್ರಮ ಕೈಗೊಳ್ಳುವುದಿಲ್ಲ. ಪಾಕ್ ಪರ ಘೋಷಣೆ ಕೂಗಿದ ನಾಸೀರ್ ಹುಸೇನ್ ವಿಚಾರಣೆ ಆಗಲಿಲ್ಲ. ಹೀಗಾಗಿ ಕಾಂಗ್ರೆಸ್‌ನಿಂದ ಕ್ರಮದ ಅಪೇಕ್ಷೆ ಮಾಡಲಾಗದು. ಆದರೆ, ಇಂತವರ ಮೇಲೆ ಕ್ರಮ ಆಗಬೇಕು ಎಂದು ಬೆಲ್ಲದ ಆಗ್ರಹಿಸಿದರು.
ವಕ್ಫ ವಿಚಾರವಾಗಿ ಬಳ್ಳಾರಿಯಿಂದ ಯತ್ನಾಳ ಪಾದಯಾತ್ರೆ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಕ್ಫನಿಂದ ಬಹಳ ಜನರಿಗೆ ತೊಂದರೆಯಾಗಿದೆ. ಒಂದಿಬ್ಬರು ಹೋರಾಟ ಮಾಡಿದರೆ ಸಾಲದು. ಎಲ್ಲರೂ ಹೋರಾಟ ಮಾಡಬೇಕಾಗುತ್ತದೆ. ಬೇರೆ ಬೇರೆ ರೀತಿಯ ಹೋರಾಟದ ಅಗತ್ಯವಿದೆ. ಅದಕ್ಕೆ ಎಲ್ಲರೂ ಸಹಕಾರ ಕೊಡಬೇಕು. ವಿಜಯೇಂದ್ರ ಈ ಹೋರಾಟದಲ್ಲಿ ಭಾಗಿಯಾಗುತ್ತಾರಾ ಕಾದು ನೋಡಬೇಕು. ಪಕ್ಷದ ಆದೇಶದಂತೆ ವಿಚಾರ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!
“ನಿಮ್ಹಾನ್ಸ್ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು
10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ
Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!
Mangaluru; ಸದ್ಯ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಇಲ್ಲ
Kasaragod:ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ
Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.