ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Team Udayavani, Dec 29, 2024, 4:02 PM IST
ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ರವಿವಾರ (ಡಿ.29) ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗಳನ್ನು ಪ್ರಕಟಿಸಿದೆ. ವರ್ಷದ ಪುರುಷರ ಟಿ20 ಕ್ರಿಕೆಟಿಗ ಮತ್ತು ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ರವಿವಾರ ತಲಾ ನಾಲ್ಕು ಹೆಸರುಗಳನ್ನು ನಾಮ ನಿರ್ದೇಶನ ಮಾಡಲಾಗಿದೆ.
ವರ್ಷದ ಟಿ20 ಕ್ರಿಕೆಟಿಗರ ಪಟ್ಟಿಯಲ್ಲಿ ಭಾರತದ ಎಡಗೈ ವೇಗಿ ಅರ್ಶದೀಪ್ ಸಿಂಗ್ ಸ್ಥಾನ ಪಡೆದಿದ್ದಾರೆ. ಅರ್ಶದೀಪ್ 2024 ರ ಟಿ20 ವಿಶ್ವಕಪ್ ನಲ್ಲಿ ಎಂಟು ಪಂದ್ಯಗಳಿಂದ 12.64 ರ ಸರಾಸರಿಯಲ್ಲಿ ಮತ್ತು 7.16 ರ ಎಕಾನಮಿಯಲ್ಲಿ 17 ವಿಕೆಟ್ ಗಳನ್ನು ಗಳಿಸಿದ್ದರು. ಅವರು ಜಂಟಿಯಾಗಿ ಕೂಟದ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದರು.
ಆದರೆ, ಅಚ್ಚರಿಯಾಗುವಂತೆ, 2024 ರ ಟಿ20 ವಿಶ್ವಕಪ್‌ನಲ್ಲಿ ಪಂದ್ಯಾವಳಿಯ ಆಟಗಾರ ಎಂದು ಗುರುತಿಸಲ್ಪಟ್ಟಿದ್ದರೂ ಸಹ, ಪ್ರತಿಷ್ಠಿತ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರಲ್ಲಿ ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಹೆಸರಿಲ್ಲ.
ಉಳಿದಂತೆ ವರ್ಷದ ಟಿ20 ಆಟಗಾರ ಪ್ರಶಸ್ತಿಗೆ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್, ಪಾಕಿಸ್ತಾನದ ಬಾಬರ್ ಅಜಂ ಮತ್ತು ಜಿಂಬಾಬ್ವೆಯ ಸಿಕಂದರ್ ರಾಜಾ ಹೆಸರನ್ನು ನಾಮಿನೇಟ್ ಮಾಡಲಾಗಿದೆ.
ಏಕದಿನ ವರ್ಷದ ಆಟಗಾರರ ಪಟ್ಟಿ
ಇದೇ ವೇಳೆ ಐಸಿಸಿ ಏಕದಿನ ವರ್ಷದ ಆಟಗಾರ ಪ್ರಶಸ್ತಿಗೆ ನಾಲ್ವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಆದರೆ ಇದರಲ್ಲಿ ಯಾವುದೇ ಭಾರತೀಯರ ಹೆಸರಿಲ್ಲ. ಇದರಲ್ಲಿ ಶ್ರೀಲಂಕಾದ ಇಬ್ಬರು ಸ್ಥಾನ ಪಡೆದಿದ್ದಾರೆ. ಅವರೆಂದರೆ ವಾನಿಂದು ಹಸರಂಗ ಮತ್ತು ಕುಸಾಲ್ ಮೆಂಡಿಸ್.
ಏಕದಿನ ಕ್ರಿಕೆಟ್ ಪ್ರಶಸ್ತಿ ರೇಸ್ ನಲ್ಲಿರುವ ಇತರ ಇಬ್ಬರೆಂದರೆ ವೆಸ್ಟ್ ಇಂಡೀಸ್ ನ ಶರ್ಫೇನ್ ರುದರ್ಫೋರ್ಡ್ ಮತ್ತು ಅಫ್ಘಾನಿಸ್ತಾನದ ಅಜ್ಮತುಲ್ಲಾ ಓಮರ್ ಝೈ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.