ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Team Udayavani, Dec 29, 2024, 4:19 PM IST
ಬೆಂಗಳೂರು: 13 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ, 2012 (ಫೋಕ್ಸೊ) ಮತ್ತು ಐಪಿಸಿ ಕಾಯ್ದೆಗಳ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ತನ್ನ ವಿರುದ್ಧ ನಡೆಯುತ್ತಿರುವ ಕ್ರಿಮಿನಲ್ ವಿಚಾರಣೆ ರದ್ದು ಕೋರಿ ತುಮಕೂರು ಜಿಲ್ಲೆಯ 48ರ ಹರೆಯದ ಕೃಷ್ಣಪ್ಪ ಎಂಬುವರು ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು, ಮುಂದಿನ 3 ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದೆ.
ಅರ್ಜಿದಾರರು ಲೈಂಗಿಕ ವಿಕೃತಿಯಲ್ಲಿ ತೊಡಗಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ರದ್ದುಗೊಳಿಸಿದರೆ ಕಾನೂನಿನ ಉಲ್ಲಂಘನೆಯಾಗಲಿದೆ. ಮಾನಸಿಕ ಅಸ್ವಸ್ಥ ಮಗುವಿನ ಪಾಟಿ- ಸವಾಲಿನಲ್ಲಿ ತಪ್ಪಾದ ಉತ್ತರ ನೀಡಿದ್ದಾರೆಂಬ ಆಧಾರದ ಮೇಲೆ ವಿಚಾರಣೆಯನ್ನು ರದ್ದುಗೊಳಿಸಲು ಅರ್ಜಿದಾರರು ಹೇಗೆ ಕೋರುತ್ತಾರೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಪೀಠ ಹೇಳಿದೆ.
ಪ್ರಕರಣವೇನು?: 2023ರ ಡಿ.10 ರಂದು ಸಂತ್ರಸ್ತೆಯ ತಾಯಿ ಮಧ್ಯಾಹ್ನ 3.15ಕ್ಕೆ ತನ್ನ ಮನೆ ಕೆಲಸ ಮಾಡುತ್ತಿದ್ದಳು, ಅವರ ಮಗಳು(ಸಂತ್ರಸ್ತೆ) ಮನೆಯ ಮುಂದೆ ಒಬ್ಬಂಟಿಯಾಗಿ ಆಟವಾಡುತ್ತಿದ್ದಳು. 30 ನಿಮಿಷಗಳ ನಂತರ, ಅದೇ ಸ್ಥಳದಲ್ಲಿ ಆಟವಾಡುತ್ತಿದ್ದ ಮಗಳು ಕಾಣೆಯಾಗಿದ್ದಳು. ತಾಯಿ ಮಗಳನ್ನು ಹುಡುಕಲು ಹೋದಾಗ ಅರ್ಜಿದಾರನ ಮನೆಯಿಂದ ಹೊರ ಬಂದ ಸಂತ್ರಸ್ತೆಯು ಅರ್ಜಿದಾರ ಕಬ್ಬು ನೀಡುವ ನೆಪದಲ್ಲಿ ತನ್ನ ಮನೆಯ ಸ್ನಾನಗೃಹಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಘಟನೆಯಿಂದ ಕುಟುಂಬ ಮತ್ತು ಮಗಳ ಪ್ರತಿಷ್ಠೆಗೆ ಹಾನಿಯಾಗಬಹುದು ಎಂಬ ಭಯದಿಂದ ತಕ್ಷಣ ದೂರು ನೀಡಲಿಲ್ಲ. ಆದರೆ, ಮಗಳು ಗುಪ್ತಾಂಗದಲ್ಲಿ ನೋವನ್ನು ಅನುಭವಿಸುತ್ತಿದ್ದೇನೆ ಎಂದು ಪದೇ ಪದೆ ಹೇಳುತ್ತಿದ್ದಳು. ಆಗ ತಾಯಿ, 2023ರ ಡಿ.21 ರಂದು ಅಂದರೆ 11 ದಿನಗಳ ಬಳಿಕ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.