Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿದ್ದರಾಮಯ್ಯ ಸರ್ಕಾರದಿಂದ ಸೇಡಿನ ರಾಜಕಾರಣ: ಸಂಸದ ಆರೋಪ
Team Udayavani, Dec 29, 2024, 9:12 PM IST
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರಕಾರ ಅರಾಜಕತೆಯ ಮತ್ತೊಂದು ಮುಖ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ್ ಶೆಟ್ಟರ್ ಹರಿಹಾಯ್ದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ದಿನದಿನಕ್ಕೂ ಅರಾಜಕತೆ ಸೃಷ್ಟಿಯಾಗುತ್ತಿದೆ. ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್ ಪಂಚಾಳ ಆತ್ಮಹತ್ಯೆ ಸೇರಿದಂತೆ ರಾಜ್ಯದ ಬೆಳವಣಿಗೆಗಳು ದಿನದಿನಕ್ಕೂ ಅರಾಜಕತೆ ಸೃಷ್ಟಿಯಾಗುತ್ತಿರುವುದಕ್ಕೆ ಸಾಕ್ಷಿ ಎಂದು ದೂರಿದರು.
ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕನ ಪ್ರಚೋದನೆ, ಹೆಚ್ಚಿನ ರೀತಿಯ ಒತ್ತಡ ತಾಳಲಾಗದೆ ಒಬ್ಬ ಎಸ್‌ಡಿಎ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತನಿಖೆ ನಡೆದಿದೆ. ಆದರೆ, ಪೊಲೀಸರು ಈ ವರೆಗೆ ಯಾರನ್ನೂ ಬಂಧಿಸಲಿಲ್ಲ. ಎಸ್‌ಡಿಐ ಆತ್ಮಹತ್ಯೆಗೆ ಕಾರಣರಾದವರು ಬೇಲ್ ತಂದು, ಕೆಲಸ ಮಾಡುತ್ತಿದ್ದಾರೆ. ಇಂತದ್ದೆಲ್ಲ ಕಾಂಗ್ರೆಸ್ ಸರಕಾರದಲ್ಲಿ ನಡೆಯುತ್ತಿದೆ ಎಂದು ದೂರಿದರು.
ಸದಾ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹದಗೆಡುತ್ತಿದ್ದು, ಎಲ್ಲ ಕಡೆಯಲ್ಲೂ ಭ್ರಷ್ಟಾಚಾರ ಮಿತಿ ಮೀರುತ್ತಿದೆ. ಕಲಬುರಗಿಯಲ್ಲಿ ಗುತ್ತಿಗೆದಾರ ಸಚಿನ್ ಪಂಚಾಳ ಡೆತ್ ನೋಟ್ ಬರೆದಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇರವಾಗಿ ಸಚಿವ ಪ್ರಿಯಾಂಕ ಖರ್ಗೆ ಆಪ್ತ ಸಹಾಯಕನ ಒತ್ತಡದಿಂದಲೇ ತಾನು ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವಾರು ಶಾಸಕರಿಂದಲೂ ಬೆದರಿಕೆ ಇದೆ ಎಂದು ಡೆತ್‌ನೋಟ್ ಬರೆದಿದ್ದರೂ ಪೊಲೀಸರು ಎಫ್‌ಐಆರ್ ದಾಖಲಿಸಿರಲಿಲ್ಲ. ಬಿಜೆಪಿ ಹೋರಾಟ ನಡೆಸಿ ನ್ಯಾಯಾಲಯದ ಮೆಟ್ಟಿಲೇರಿದ ನಂತರವಷ್ಟೇ ಕೋರ್ಟ್ ನಿರ್ದೇಶನ ನಂತರ ಎಫ್‌ಐಆರ್ ದಾಖಲಿಸಿದರು ಎಂದರು.
ಭ್ರಷ್ಟಾಚಾರ ಮಿತಿ ಮೀರುತ್ತಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ. ಮುಡಾ ಹಗರಣ ಹೊರ ಬಂದ ನಂತರ, ಮಹರ್ಷಿ ವಾಲ್ಮೀಕಿ ನಿಗಮದ ನೂರಾರು ಕೋಟಿ ಹಗರಣ ಬಯಲಿಗೆ ಬಂದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವಂತಹ ಪ್ರಸಂಗ ಸೃಷ್ಟಿಯಾದ ನಂತರ ಅದನ್ನೆಲ್ಲಾ ಡೈವರ್ಟ್ ಮಾಡುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎಂದು ದೂರಿದರು.
ಬಿಜೆಪಿ ನಾಯಕತ್ವ ಗುರಿಯಾಗಿಸಿಕೊಂಡು, ಕೇಸ್ ಮಾಡುವುದು, ಎಸ್‌ಐಟಿ ರಚಿಸುವುದು, ನ್ಯಾಯಾಂಗ ತನಿಖೆ ನಡೆಯುತ್ತಿರುವಾಗಲೇ ಮಧ್ಯಂತರ ವರದಿ ಆಧಾರದಲ್ಲಿ ಎಫ್‌ಐಆರ್ ದಾಖಲಿಸುವುದನ್ನು ಸಿದ್ದರಾಮಯ್ಯ ಸರಕಾರ ಮಾಡುತ್ತಿದೆ. ಬಹುಶಃ ನನ್ನ ರಾಜಕೀಯ ಜೀವನದಲ್ಲೇ ಇಂತಹ ಸೇಡಿನ ರಾಜಕಾರಣವನ್ನು ನಾನೆಂದಿಗೂ ನೋಡಿರಲಿಲ್ಲ. ಸಿದ್ದರಾಮಯ್ಯ ಸರ್ಕಾರ ಸೇಡಿನ ರಾಜಕಾರಣವನ್ನೇ ಮಾಡುತ್ತಿದೆ ಎಂದು ದೂರಿದರು.
ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ, ಸಮಸ್ಯೆಗಳು ಆದಷ್ಟು ಬೇಗನೆ ಬಗೆಹರಿಯಲಿವೆ. ರಾಜಕೀಯ ಪಕ್ಷ ಎಂದ ಮೇಲೆ ಎಲ್ಲಾ ಸಮಸ್ಯೆಗೂ ಇತ್ಯರ್ಥ ಅನ್ನುವುದು ಇದ್ದೇ ಇರುತ್ತದೆ. ಆದಷ್ಟು ಬೇಗ ಹೈಕಮಾಂಡ್ ಸರಿಯಾದ ಸಮಯಕ್ಕೆ, ಸೂಕ್ತ ನಿರ್ಧಾರ ಕೈಗೊಂಡು, ಎಲ್ಲವನ್ನೂ ಸರಿಪಡಿಸುತ್ತದೆಂಬ ವಿಶ್ವಾಸವಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಒಂದು ಸಮಾಧಾನಕರ ರೀತಿ ಎಲ್ಲವನ್ನೂ ಸರಿಪಡಿಸುತ್ತದೆಂಬ ವಿಶ್ವಾಸ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Singh: ಈ ಸಿಇಒ ಪ್ರತಿದಿನ ಪಡೆಯುವ ಸಂಬಳ 48 ಕೋಟಿ ರೂ!…ಯಾರೀತ ಜಗದೀಪ್ ಸಿಂಗ್?
Punjalakatte: ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Anandapura: ಅಪರಿಚಿತ ವ್ಯಕ್ತಿಯ ಶವ ಪತ್ತೆ
India- China border: ಭಾರತದ ಗಡಿಯಲ್ಲಿ ಚೀನ ದುಸ್ಸಾಹಸ !
Chhattisgarh: ಗುತ್ತಿಗೆದಾರನ ಭ್ರಷ್ಟಾಚಾರ ಬಯಲಿಗೆಳೆದ ಯೂಟ್ಯೂಬರ್ ಶವವಾಗಿ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.