Udupi: ಗಾಂಜಾ ಮಾರಾಟ; ಮೂವರ ಬಂಧನ
ಮಾದಕ ವಸ್ತು ಸಹಿತ ಲಕ್ಷಾಂತರ ಸೊತ್ತು ವಶ
Team Udayavani, Dec 29, 2024, 10:00 PM IST
ಉಡುಪಿ: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸುತಿದ್ದ ಮೂರು ಮಂದಿಯನ್ನು ಸೆನ್ ಅಪರಾಧ ದಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತರಿಂದ ಬೃಹತ್ ಪ್ರಮಾಣದ ಮಾದಕ ವಸ್ತು ಸಹಿತ ಮಾರಾಟಕ್ಕೆ ಬಳಸಿದ ಅಪಾರ ಪ್ರಮಾಣದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಉಡುಪಿ-ಕಾರ್ಕಳ ಹೆದ್ದಾರಿಯ ನೀರೆ ಎಂಬಲ್ಲಿನ ಸಾರ್ವಜನಿಕ ರಸ್ತೆಯಲ್ಲಿ ಕೆಲವು ವ್ಯಕ್ತಿಗಳು ಕಾರಿನಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಹಾಗೂ ಎಂಡಿಎಂಎ ಪೌಡರ್ ಅನ್ನು ಮಾರಾಟ ಮಾಡಲು ಯತ್ನಿಸುತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಧಾಳಿ ನಡೆಸಿದ್ದರು. ಈ ವೇಳೆ ಪ್ರೇಮನಾಥ ಪ್ರೇಮ್ ರೇವುನಾಥ, ಶೈಲೇಶ, ಪ್ರಜ್ವಲ್ ಈ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಅಪಾರ ಪ್ರಮಾಣದ ಸೊತ್ತು ವಶ
37 ಗ್ರಾಂ 27 ಮಿಲಿ ಗ್ರಾಂ ತೂಕದ ಎಂಡಿಎಂಎ, 1ಕೆ.ಜಿ 112 ಗ್ರಾಂ ತೂಕದ ಗಾಂಜಾ ವಶಕ್ಕೆ ಪಡೆದಿದ್ದು, ಎಂಡಿಎಂಎ ಅಂದಾಜು ಮೌಲ್ಯ ರೂ. 2 ಲಕ್ಷ , ಗಾಂಜಾದ ಅಂದಾಜು ಮೌಲ್ಯ ರೂ. 87,500, ಆಗಿರುತ್ತದೆ. ಆರೋಪಿಗಳು ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್-5, ಅಂದಾಜು ಮೌಲ್ಯ ರೂ. 41 ಸಾವಿರ. ಗಾಂಜಾವನ್ನು ಸಾಗಾಟ ಮಾಡಲು ಬಳಸಿದ ಬ್ಯಾಗ್ ಇನ್ನಿತರ ವಸ್ತುಗಳು ಸಹಿತ ನಗದು ರೂಪಾಯಿ 7130 ಅನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ವೇಳೆ ಎಂಡಿಎಂ ಪೌಡರ್ ಅನ್ನು ಬೆಂಗಳೂರು ನಿವಾಸಿ ದಾವೂದ್ ಅವರಿಂದ ಖರೀದಿಸಿರುವುದಾಗಿ ಆರೋಪಿ ಪ್ರೇಮ್ ತಿಳಿಸಿದ್ದಾನೆ. ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
Andhra: ʼಗೇಮ್ ಚೇಂಜರ್ʼ ಈವೆಂಟ್ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
South Korea: ಅಧ್ಯಕ್ಷ ಯೂನ್ ರನ್ನು ಕೂಡಲೇ ಬಂಧಿಸಿ: ಪೊಲೀಸರಿಗೆ ದಕ್ಷಿಣ ಕೊರಿಯಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.