CM Siddaramaiah ಸಂಧಾನ ಯಶಸ್ವಿ : ಬಸ್‌ ಮುಷ್ಕರ ವಾಪಸ್‌

ಸಂಕ್ರಾಂತಿ ಅನಂತರ ಸಭೆ ನಡೆಸಲು ಸರಕಾರ ಕೋರಿಕೆ..

Team Udayavani, Dec 30, 2024, 6:34 AM IST

KSRT

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗಿನ ಸಭೆಯ ಫ‌ಲಶ್ರುತಿಯಾಗಿ ಸಾರಿಗೆ ಸಚಿವರ ಲಿಖೀತ ಮನವಿ ಮೇರೆಗೆ ಡಿ. 31ರಿಂದ ಕರೆ ನೀಡ ಲಾಗಿದ್ದ ಅನಿರ್ಧಿಷ್ಟಾವಧಿ ಮುಷ್ಕರವನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಘೋಷಿಸಿದೆ.
ಸಮಿತಿಯ ಅಧ್ಯಕ್ಷ ಎಚ್‌.ವಿ. ಅನಂತ ಸುಬ್ಬರಾವ್‌ ಈ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಅನಿರ್ಧಿಷ್ಟಾ ವಧಿ ಮುಷ್ಕರ ಮುಂದೂಡಿರುವ ಹಿನ್ನೆಲೆಯಲ್ಲಿ ಸಾರಿಗೆ ನಿಗಮಗಳ ಎಲ್ಲ ನೌಕರರೂ ಡಿ. 31ರಂದು ಕೆಲಸಕ್ಕೆ ಹಾಜರಾಗಬೇಕು ಎಂದು ವಿನಂತಿಸಿದ್ದಾರೆ.

ಸಂಕ್ರಾಂತಿಯ ಅನಂತರ ಸಭೆ
ರವಿವಾರ ಸಂಜೆ ಮುಖ್ಯಮಂತ್ರಿಗಳ ಜತೆ ಸಾರಿಗೆ ಸಚಿವರು, ನಿಗಮಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳು ನಡೆಸಿದ ಸಭೆಯ ಫ‌ಲಶ್ರುತಿಯಾಗಿ ಸಾರಿಗೆ ಸಚಿವರು ಜಂಟಿ ಕ್ರಿಯಾ ಸಮಿತಿಗೆ ಲಿಖೀತವಾಗಿ ಮನವಿ ಮಾಡಿದರು. ಉದ್ದೇಶಿತ ಮುಷ್ಕರವನ್ನು ಹಿಂಪಡೆಯಬೇಕು, ಸಂಕ್ರಾಂತಿ ಹಬ್ಬದ ಅನಂತರ ಸಾರಿಗೆ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿಗಳ ಜತೆ ಸಭೆ ಏರ್ಪಡಿಸುವುದಾಗಿ ಕೋರಿದರು. ಈ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಲು ಜಂಟಿ ಕ್ರಿಯಾ ಸಮಿತಿ ಒಮ್ಮತದಿಂದ ತೀರ್ಮಾನಿಸಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಸಾರಿಗೆ ನೌಕರರ ಸಂಘಟನೆಯ ಮುಖಂಡರ ಜತೆ ಮಾತುಕತೆ ನಡೆಸಲಾಗಿದೆ. ಮುಷ್ಕರ ಕೈಬಿಡುವ ನಿರ್ಧಾರಕ್ಕೆ ಬಂದಿದ್ದಾರೆ. ಸಂಕ್ರಾಂತಿಯ ಅನಂತರ ಸಾರಿಗೆ ನೌಕರರ ಸಂಘಟನೆ ಮುಖಂಡರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಲಿದ್ದಾರೆ.
– ರಾಮಲಿಂಗಾರೆಡ್ಡಿ,ಸಾರಿಗೆ ಸಚಿವ

ಟಾಪ್ ನ್ಯೂಸ್

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

BBK11:‌ ಕೋಪದಿಂದ ಅರ್ಧದಲ್ಲೇ ಬಿಗ್‌ ಬಾಸ್‌ ವೇದಿಕೆ ಬಿಟ್ಟು ಹೋದ ಕಿಚ್ಚ; ಸ್ಪರ್ಧಿಗಳು ಶಾಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdasad

Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು

1-atul-subhash

Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Fraud case: ಸಚಿತಾ ರೈ ವಿರುದ್ಧ ಇನ್ನೊಂದು ಕೇಸು ದಾಖಲು

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ ಸಹೋದರಿಯ ಪತಿ ಪೋಕ್ಸೋ ಪ್ರಕಾರ ಬಂಧನ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Kasargod: ಹೊಳೆಯಲ್ಲಿ ನೀಲೇಶ್ವರ ನಗರಸಭಾ ಅಧ್ಯಕ್ಷೆಯ ಪತಿಯ ಮೃತದೇಹ ಪತ್ತೆ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Kundapura: ಪತಿ, ತಾಯಿಯಿಂದ ಕಿರುಕುಳ; ಪತ್ನಿ ದೂರು

Kundapura: ಪತಿ, ತಾಯಿಯಿಂದ ಕಿರುಕುಳ; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.