Havyaka Sammelana: ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಗೆ ಬೆಂಬಲ: ಎಚ್.ಡಿ.ಕುಮಾರಸ್ವಾಮಿ
ಅತ್ಯಂತ ವಿಶಿಷ್ಟವಾದ ಹವ್ಯಕ ಭಾಷೆ ಉಳಿಯಬೇಕು, ರವಿಶಂಕರ್ ಭಟ್ ಬೇಡಿಕೆಗೆ ಕೇಂದ್ರ ಸಚಿವರ ಬೆಂಬಲ, ಅಡಿಕೆ ಬೆಳೆಗಾರರ ಸಮಸ್ಯೆ ನಿವಾರಣೆಗೆ ಪ್ರಯತ್ನ: ಕೇಂದ್ರ ಸಚಿವ
Team Udayavani, Dec 30, 2024, 7:35 AM IST
ಬೆಂಗಳೂರು: ಅತ್ಯಂತ ವಿಶಿಷ್ಟವಾದ ಹವ್ಯಕ ಭಾಷೆ ಉಳಿಯಬೇಕು. ಆ ನಿಟ್ಟಿನಲ್ಲಿ ಹವ್ಯಕ ಭಾಷಾ ಅಭಿವೃದ್ಧಿಗೆ ಪ್ರತ್ಯೇಕ ಅಕಾಡೆಮಿ, ವಿಶ್ವವಿದ್ಯಾನಿಲಯ ಹಾಗೂ ಅಧ್ಯಯನ ಕೇಂದ್ರ ಸ್ಥಾಪನೆಯಾಗಬೇಕು ಎಂಬ ಬೇಡಿಕೆಗೆ ನನ್ನ ಬೆಂಬಲವಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ರವಿವಾರ ನಡೆದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಸಮಾರೋಪದಲ್ಲಿ ಮಾತನಾಡಿದ ಅವರು, ಹವ್ಯಕ ಸಮುದಾಯ ಗಾತ್ರದಲ್ಲಿ ಸಣ್ಣದು ಇರಬಹುದು. ಆದರೆ, ಸಾಹಿತ್ಯ, ಸಂಗೀತ, ಕಲೆ, ಮಾಧ್ಯಮ ಸೇರಿ ವಿವಿಧ ಕ್ಷೇತ್ರಗಳಲ್ಲಿನ ನಿಮ್ಮ ಸಾಧನೆ, ಬುದ್ಧಿವಂತಿಕೆ, ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.
ಅಧ್ಯಯನ ಪೀಠ ಸ್ಥಾಪನೆಗೆ ಒತ್ತಾಯಿಸಿದ್ದ ರವಿಶಂಕರ್ ಭಟ್
ವಿಶಿಷ್ಟವಾದ ಭಾಷೆ, ಆಹಾರ ಪದ್ಧತಿ, ಆಚರಣೆ ಹೊಂದಿರುವ ಹವ್ಯಕ ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಸ್ಥಾಪನೆ ಮಾಡಬೇಕು. ಈ ನಿಟ್ಟಿನಲ್ಲಿ ಸರಕಾರ ಕ್ರಮ ವಹಿಸಬೇಕು ಎಂದು “ಉದಯವಾಣಿ’ ಪ್ರಧಾನ ಸಂಪಾದಕ ರವಿಶಂಕರ್ ಕೆ.ಭಟ್ ಅವರು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರತಿಪಾದಿಸಿದ್ದರು. ಇದಕ್ಕೆ ಈಗ ಕೇಂದ್ರ ಸಚಿವ ಕುಮಾರಸ್ವಾಮಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಅಡಿಕೆ ಬೆಳೆಗಾರರ ಸಮಸ್ಯೆ ನಿವಾರಣೆಗೆ ಪ್ರಯತ್ನ: ಕೇಂದ್ರ ಸಚಿವ
ಬೆಂಗಳೂರು: ಹವ್ಯಕ ಸಮುದಾಯದಲ್ಲಿ ಬಹುತೇಕರು ಇಂದಿಗೂ ಕೃಷಿಯನ್ನು ಅವಲಂಬಿಸಿ ಬದುಕು ಸಾಗಿಸುತ್ತಿದ್ದಾರೆ. ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸಲು ಸಂಶೋಧನೆಗಾಗಿ ಕೇಂದ್ರ ಸರ್ಕಾರ 10 ಕೋಟಿ ರೂ. ಹಣ ಬಿಡುಗಡೆಗೊಳಿಸಿದೆ. ಅಪಪ್ರಚಾರದ ಕುರಿತು ಅಡಕೆ ಬೆಳೆಗಾರರು ಆತಂಕಪಡಬೇಕಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ನಾನು ಕೂಡ ಮೂಲತಃ ರೈತನಾಗಿ ಸಂಕಷ್ಟಗಳನ್ನು ಅರಿತಿದ್ದೇನೆ. ಹಾಗಾಗಿ ಕೇಂದ್ರ ಸರ್ಕಾರದ ಹಲವು ಸಚಿವರೊಂದಿಗೆ ಮಾತುಕತೆ ನಡೆಸಿದ್ದು, ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ. ಸಮಸ್ಯೆ ಬಗೆಹರಿಸಲು ಕೇಂದ್ರ ಸಚಿವರು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಗ್ರಾಮೀಣ ಸೊಗಡು ಮರೆಯಾಗುತ್ತಿದೆ. ಪೂರ್ವಜರು ಬಹಳ ಶಿಸ್ತಿನಿಂದ ಬದುಕುತ್ತಿದ್ದರು. ಈಗ ನಮ್ಮ ಹಳ್ಳಿಯ ಗ್ರಾಮೀಣ ಸೊಗಡು ಮರೆಯಾಗುತ್ತಿದೆ. ವೃದ್ಧಾಶ್ರಮಗಳಾಗುವ ಮೂಲಕ ಹಳ್ಳಿಗಳ ಅಸ್ತಿತ್ವ ನಶಿಸಿ ಹೋಗುತ್ತಿದೆ. ಈ ಬಗ್ಗೆ ನಾವು ಆಲೋಚನೆ ಮಾಡಬೇಕಿದೆ ಎಂದು ಸಚಿವರು ಒತ್ತಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.