Horoscope : ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ
Team Udayavani, Dec 30, 2024, 7:28 AM IST
ಮೇಷ: ವರ್ಷಾಂತ್ಯದ ಮೊದಲ ದಿನ ಶುಭದಾಯಕ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಸೇವಾಕ್ಷೇತ್ರಗಳಿಗೆ ಪ್ರವೇಶದಿಂದ ಕೀರ್ತಿ.
ವೃಷಭ: ಜಾಣ್ಮೆಯ ವ್ಯವಹಾರದಿಂದ ಕಾರ್ಯಸಾಧನೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್ ವ್ಯವಹಾರಸ್ಥರಿಗೆ ಲಾಭ.
ಮಿಥುನ: ಉದ್ಯೋಗಸ್ಥರಿಗೆ ಸದ್ವರ್ತನೆಯಿಂದ ಶ್ಲಾಘನೆ. ಉದ್ಯಮಗಳ ಪಾಲಿಗೆ ಶುಭದಿನ.ಅಪರಿಚಿತರೊಂದಿಗೆ ಅನವಶ್ಯ ಕಲಹದ ಸಾಧ್ಯತೆ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ. ಸ್ವಾವಲಂಬಿ ಜೀವನಕ್ಕೆ ಅನುಕೂಲ ವಾತಾವರಣ.
ಕರ್ಕಾಟಕ: ಆಶ್ವಾಸನೆಗಳನ್ನು ಕೊಡುವಾಗ ಎಚ್ಚರಿಕೆ ಇರಲಿ. ಉದ್ಯಮಗಳಿಗೆ ಕಾನೂನು ತೊಂದರೆ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ.
ಸಿಂಹ: ಅನೇಕ ಶುಭಸೂಚನೆಗಳೊಂದಿಗೆ ಸಪ್ತಾಹ ಆರಂಭ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಪಾಲುದಾರಿಕೆ ಪ್ರಸ್ತಾವ ಒಪ್ಪಲು ಹಿಂಜರಿಕೆ ಬೇಡ.
ಕನ್ಯಾ: ಹವಾಮಾನಕ್ಕೆ ಸರಿಯಾದ ಆಹಾರ ಸೇವನೆ ವಿಹಿತ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ ಉದ್ಯಮದಲ್ಲಿ ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.
ತುಲಾ: ಉದ್ಯೋಗ ಕ್ಷೇತ್ರದಲ್ಲಿ ಸಂತೃಪ್ತಿಯ ದಿನ. ಗಣೇಶ, ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಭೇಟಿ. ಈಜುವ ಹವ್ಯಾಸ ಉಳ್ಳವರು ಎಚ್ಚರ.ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಪ್ರಚಾರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.
ವೃಶ್ಚಿಕ: ಅಧಿಕ ಕೆಲಸ ಮಾಡಲು ಉತ್ತೇಜನ. ಸರಕಾರಿ ಉದ್ಯೋಗಿಗಳಿಗೆ ಕಿರಿಕಿರಿಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.
ಧನು: ಸಹೋದ್ಯೋಗಿಗಳಿಂದ ಪ್ರೀತಿ,ಗೌರವದ ವರ್ತನೆ. ಕುಟುಂಬ ಕಲಹ ಪರಿಹಾರವಾಗಿ ನೆಮ್ಮದಿ. ಉದ್ಯೋಗಾಸಕ್ತ ಶಿಕ್ಷಿತರಿಗೆ ಸದವಕಾಶ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ.
ಮಕರ: ಅನ್ಯರ ಮನನೋಯುವಂತೆ ಮಾತಾಡಬೇಡಿ. ವಸ್ತ್ರ, ಆಭರಣ, ಪಾದರಕ್ಷೆ, ಶೋಕಿ ವಸ್ತು ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಹಳೆಯ ಒಡನಾಡಿಗಳ ಸಂಪರ್ಕ.
ಕುಂಭ: ಸ್ವಂತ ವ್ಯವಹಾರಸ್ಥರಿಗೆ ಸುದಿನ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು.. ಆಭರಣ ತಯಾರಿ ಕೆಲಸ ಬಲ್ಲವರಿಗೆ ಉದ್ಯೋಗಾವಕಾಶ. ದೇವತಾ ಕಾರ್ಯದಲ್ಲಿ ಭಾಗಿ.
ಮೀನ: ಉದ್ಯೋಗ ಸ್ಥಾನದಲ್ಲಿ ವಿಶಿಷ್ಟ ವಾತಾವರಣ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ರಂಗ ಸಜ್ಜಿಕೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ವ್ಯವಹಾರ ಸಂಬಂಧ ದೂರ ಪ್ರಯಾಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ
Viksit Bharat ‘ಯಂಗ್ ಲೀಡರ್ ಡೈಲಾಗ್’:ಉಡುಪಿಯ ಮನು ಶೆಟ್ಟಿ ಆಯ್ಕೆ
Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್ ಚೌಟ
ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಮಾಲೋಚನಾ ಸಭೆ
Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.