Rahul Gandhi; ಬಿಜೆಪಿ-ಕಾಂಗ್ರೆಸ್‌ ವಾಕ್ಸಮರಕ್ಕೆ ಕಾರಣವಾದ ರಾಹುಲ್‌ ವಿಯೇಟ್ನಾಂ ಪ್ರವಾಸ


Team Udayavani, Dec 30, 2024, 5:09 PM IST

Rahul Gandhi’s foreign trip sparks BJP-Congress war of words

ಹೊಸದಿಲ್ಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್‌ (Dr Manmohan Singh) ಅವರು ನಿಧನರಾದ ಕೆಲ ದಿನಗಳಲ್ಲೇ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ವಿದೇಶ ಪ್ರವಾಸಕ್ಕೆ ಹೊರಟಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಸಿಂಗ್ ಅವರ ಅಂತ್ಯಕ್ರಿಯೆಯ ವ್ಯವಸ್ಥೆಯಲ್ಲಿ ಕೇಂದ್ರದ ಕಳಪೆ ನಿರ್ವಹಣೆಯ ವಿಚಾರಕ್ಕಿಂತ ಗಮನವನ್ನು ಬೇರೆಡೆ ಸೆಳೆಯುವ ಪ್ರಯತ್ನ ಎಂದು ಕಾಂಗ್ರೆಸ್ ಆರೋಪಗಳನ್ನು ತಳ್ಳಿಹಾಕಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಎಕ್ಸ್ ಪೋಸ್ಟ್‌ ನಲ್ಲಿ ರಾಹುಲ್ ಗಾಂಧಿ‌ ಅವರನ್ನು ಸಂವೇದನಾ ರಹಿತರು ಎಂದು ಆರೋಪಿಸಿದಾಗ ವಿವಾದ ಪ್ರಾರಂಭವಾಯಿತು. “ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ದೇಶವು ಶೋಕಿಸುತ್ತಿರುವಾಗ, ರಾಹುಲ್ ಗಾಂಧಿ ಹೊಸ ವರ್ಷವನ್ನು ಆಚರಿಸಲು ವಿಯೆಟ್ನಾಂಗೆ ಹಾರಿದ್ದಾರೆ” ಎಂದು ಮಾಳವಿಯಾ ಹೇಳಿದರು.

ಆಪರೇಷನ್ ಬ್ಲೂ ಸ್ಟಾರ್ ಅನ್ನು ತರಾಟೆಗೆ ತೆಗೆದುಕೊಂಡ ಅವರು, “ಗಾಂಧಿಗಳು ಮತ್ತು ಕಾಂಗ್ರೆಸ್ ಸಿಖ್ಖರನ್ನು ದ್ವೇಷಿಸುತ್ತಾರೆ. ಇಂದಿರಾ ಗಾಂಧಿಯವರು ದರ್ಬಾರ್ ಸಾಹಿಬ್ ಅನ್ನು ಅಪವಿತ್ರಗೊಳಿಸಿದ್ದಾರೆ ಎಂಬುದನ್ನು ಎಂದಿಗೂ ಮರೆಯಬೇಡಿ.” ಎಂದರು.

ಕಾಂಗ್ರೆಸ್‌ ಇದಕ್ಕೆ ತಿರುಗೇಟು ನೀಡಿದೆ. ಹಿರಿಯ ನಾಯಕ ಮಣಿಕಮ್‌ ಟಾಗೋರ್‌ ಅವರು ತಿರುಗೇಟು ನೀಡಿದ್ದು, “ಈ ಸಂಘಿಗಳು ಯಾವಾಗ ಈ ತಿರುಚುವ ರಾಜಕೀಯ ನಿಲ್ಲಿಸುತ್ತಾರೆ. ಯಮುನಾ ದಡದಲ್ಲಿ ಡಾ ಮನಮೋಹನ್‌ ಸಿಂಗ್ ಸಾಹೇಬರಿಗೆ ಶವಸಂಸ್ಕಾರಕ್ಕೆ ಸ್ಥಳವನ್ನು ಮೋದಿ ನಿರಾಕರಿಸಿದ ರೀತಿ ಮತ್ತು ಅವರ ಮಂತ್ರಿಗಳು ಡಾ ಸಾಹೇಬ್ ಅವರ ಕುಟುಂಬವನ್ನು ಹೇಗೆ ಮೂಲೆಗುಂಪು ಮಾಡಿದರು ಎನ್ನುವುದು ನಾಚಿಕೆಗೇಡಿನ ವಿಚಾರ ಎಂದು ಟಾಗೋರ್ ಹೇಳಿದರು.

“ಒಂದು ವೇಳೆ ರಾಹುಲ್‌ ಗಾಂಧಿ ಅವರು ಖಾಸಗಿಯಾಗಿ ಪ್ರವಾಸ ಮಾಡಿದರೆ, ಅದು ನಿಮಗೆ ಯಾಕೆ ತೊಂದರೆ?” ಎಂದು ಕಟುವಾಗಿ ಪ್ರಶ್ನಿಸಿದರು.

ಡಾ ಮನಮೋಹನ್‌ ಸಿಂಗ್‌ ಅವರ ನಿಧನದ ಬಳಿಕ ಎರಡು ಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯುತ್ತಿದೆ. ಸಿಂಗ್ ಅವರ ಬೂದಿ ವಿಸರ್ಜನೆ ಸಮಾರಂಭದಲ್ಲಿ ಗಾಂಧಿ ಕುಟುಂಬ ಏಕೆ ಹಾಜರಾಗಲಿಲ್ಲ ಎಂದು ಭಾನುವಾರ ಬಿಜೆಪಿ ಪ್ರಶ್ನಿಸಿತ್ತು, ಇದಕ್ಕೆ ಕಾಂಗ್ರೆಸ್ ಅವರು ಕುಟುಂಬದ ಖಾಸಗಿತನವನ್ನು ಗೌರವಿಸುತ್ತಾರೆ ಎಂದು ಉತ್ತರಿಸಿದೆ.

ಟಾಪ್ ನ್ಯೂಸ್

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-army

Jammu and Kashmir; ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

1-mc

Twist; ಛತ್ತೀಸ್‌ ಗಢ ಪತ್ರಕರ್ತನ ಹ*ತ್ಯೆ: ಸೋದರ ಸಂಬಂಧಿಯೇ ಪ್ರಮುಖ ಆರೋಪಿ!

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್‌ ವಿರುದ್ಧ ವರ್ಮಾ

New Delhi; Argument with classmates;

New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ

Thane; Businessman, key witness in criminal case,

Thane; ಕ್ರಿಮಿನಲ್‌ ಕೇಸ್‌ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.