Mulleriya: ಆಟವಾಡುವ ವೇಳೆ ವಿದ್ಯುತ್ ತಂತಿ ತಗುಲಿ ಮೂರುವರೆ ವರ್ಷದ ಮಗು ಸಾವು
Team Udayavani, Dec 30, 2024, 8:30 PM IST
ಮುಳ್ಳೇರಿಯ: ಮನೆಯ ಹೊರಗಿನ ಅರ್ತ್ ತಂತಿಯಿಂದ ವಿದ್ಯುತ್ ಶಾಕ್ ತಗುಲಿ ಮೂರೂವರೆ ವರ್ಷದ ಮಗು ಸಾವಿಗೀಡಾದ ಘಟನೆ ಗಾಳಿಮುಖದಲ್ಲಿ ನಡೆದಿದೆ.
ಗಾಳಿಮುಖ ನಿವಾಸಿ ಶಿನ್ಸಾದ್ ಅವರ ಪುತ್ರ ಮುಹಮ್ಮದ್ ಶಿನ್ಸಾದ್ ಸಾವಿಗೀಡಾದ ಬಾಲಕ. ಡಿ.29 ರಂದು ಸಂಜೆ 4 ಗಂಟೆಗೆ ಮನೆಯ ಹೊರಗೆ ಆಟ ಆಡುತ್ತಿದ್ದಾಗ ಅರ್ತ್ ತಂತಿಯನ್ನು ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದೆ. ವಿಷಯ ತಿಳಿದು ಮಗುವಿನ ಅಜ್ಜ ಮುಹಮ್ಮದ್ ಶಾಫಿ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಮಗುವನ್ನು ರಕ್ಷಿಸಲು ಯತ್ನಿಸಿದ ವೇಳೆ ಅಸ್ವಸ್ಥಗೊಂಡ ಮುಹಮ್ಮದ್ ಶಾಫಿ ಅವರನ್ನು ಚೆರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜನವರಿ 4ರಂದು ಶಿನ್ಸಾದ್ ಅವರ ಮನೆಯಲ್ಲಿ ಮದುವೆ ಕಾರ್ಯಕ್ರಮ ನಡೆಯಲಿದ್ದು, ಅದರ ಸಿದ್ಧತೆಗಳು ನಡೆಯುತ್ತಿತ್ತು. ಹೀಗಿರುವಂತೆ ಮಗು ಸಾವಿಗೀಡಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.