ಪೊಲೀಸ್ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ
ರಾಜ್ಯ ಸರಕಾರದ ಅಧಿಕಾರ ದುರ್ಬಳಕೆ ಬಗ್ಗೆ ಎಂಟು ಪುಟಗಳ ದೂರಿನಲ್ಲಿ ಹೇಳಿದ್ದೇನು?
Team Udayavani, Dec 30, 2024, 7:48 PM IST
ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಎಂಎಲ್‌ಸಿ ಸಿ.ಟಿ.ರವಿ (CT Ravi) ನಡುವಿನ ಪ್ರಕರಣ ರಾಜ್ಯಪಾಲರ ಅಂಗಳ ತಲುಪಿದ್ದು, ಸೋಮವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರನ್ನು ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಸಿ.ಟಿ.ರವಿ ಸೇರಿದಂತೆ ಬಿಜೆಪಿಯ ಸದಸ್ಯರು ಭೇಟಿಯಾಗಿ ಮಾಹಿತಿ ನೀಡಿದರು.
ಸಿ.ಟಿ.ರವಿ, ಅಂದು ಪರಿಷತ್‌ನಲ್ಲಿ ಏನೆಲ್ಲಾ ಆಯ್ತು, ತಮ್ಮ ಬಂಧನದ ಬಳಿಕ ನಡೆದ ಬೆಳವಣಿಗೆಗಳ ಬಗ್ಗೆ ರಾಜ್ಯಪಾಲರಿಗೆ ಮಾಹಿತಿ ನೀಡಿ 8 ಪುಟಗಳ ವಿವರದ ದೂರು ನೀಡಿದ್ದು, ತಮ್ಮ ಮೇಲಿನ ಪೊಲೀಸ್ ದೌರ್ಜನ್ಯದ ಕುರಿತು ಡಿಜಿ- ಐಜಿಪಿಯಿಂದ ಸ್ಪಷ್ಟನೆ ಪಡೆದುಕೊಳ್ಳಲು ಮನವಿ ಮಾಡಿದರು.
ದೂರಿನಲ್ಲಿ ಏನಿದೆ?
ಡಿ.19ರಂದು ಇಡೀ ರಾತ್ರಿ ಪೊಲೀಸರ ಅಮಾನವೀಯವಾಗಿ ವರ್ತಿಸಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಬೆಳಗಾವಿ ನಗರ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್, ಎಸ್‌ಪಿ ಗುಳೇದ್ ಮತ್ತು ಇತರೆ ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ತಮಗೆ ಪ್ರಾಣಾಪಾಯ ಇದ್ದು, ಸೂಕ್ತ ಭದ್ರತೆ ಕೊಡಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ. ರಾಷ್ಟ್ರಪತಿ, ಕೇಂದ್ರ ಗೃಹ ಇಲಾಖೆ ಗಮನಕ್ಕೂ ತರುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದು, ದೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧವೂ ಆರೋಪ ಮಾಡಿದ್ದಾರೆ.
ಬಂಧನ ಪ್ರಕರಣದಲ್ಲಿ ಸತ್ಯಶೋಧನೆ ನಡೆಸುವಂತೆ, ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿರ್ದೇಶನದಂತೆ ಸಂವಿಧಾನ ಮತ್ತು ಕಾನೂನು ಉಲ್ಲಂಘನೆ ಮಾಡಿ ಪೊಲೀಸ್ ಇಲಾಖೆ ಮೂಲಕ ಅಧಿಕಾರದ ದುರ್ಬಳಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಬೇಕು. ನಕಲಿ ಎನ್‌ಕೌಂಟರ್ ವಿಚಾರ ಪ್ರಸ್ತಾಪಿಸಿರುವ ಸಿ.ಟಿ.ರವಿ, ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ ಮೇರೆಗೆ ನಿಗೂಢ ಸ್ಥಳಗಳಿಗೆ ಕರೆದೊಯ್ದು ಫೇಕ್ ಎನ್‌ಕೌಂಟರ್ ಮಾಡಲು ಸಂಚು ರೂಪಿಸಿದ್ದರು. ಪೊಲೀಸರು ಸುವರ್ಣಸೌಧದೊಳಗೆ ಪ್ರವೇಶಿಸಿ ಬಂಧಿಸಿದ್ದು, ಅಕ್ರಮ ನನ್ನ ಹಕ್ಕು ಚ್ಯುತಿ ಆಗಿದೆ ಎಂದಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಕೊಲೆ ಮಾಡಿವುದಾಗಿ ಧಮ್ಕಿ ಹಾಕಿದ್ದು, ಅವರ ಬೆಂಬಲಿಗರಿಂದಲೂ ಫೇಕ್ ಎನ್‌ಕೌಂಟರ್ ಸಂಚು ಆರೋಪ ಮಾಡಿದ್ದಾರೆ. ಸದನದ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ತನಿಖೆ ನಡೆಸುವ ಅಧಿಕಾರ ಸಿಐಡಿಗಿಲ್ಲ. ಘಟನೆ ನಡೆದ ಸ್ಥಳ ಸಿಐಡಿ ವ್ಯಾಪ್ತಿಗೂ ಬರುವುದಿಲ್ಲ. ನನ್ನ ಬಂಧನ ಅಕ್ರಮ, ಕಾನೂನು ವಿರೋಧಿ ಅಂತ ಹೈಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ಸುದೀರ್ಘ ದೂರಿನಲ್ಲಿ ಹಲವು ಅಂಶಗಳ ಉಲ್ಲೇಖಿಸಿದ್ದಾರೆ.
ಇನ್ನುರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಸಿ.ಟಿ.ರವಿ, ನನ್ನ ಕಬ್ಬಿನ ಗದ್ದೆ, ಕ್ರಷರ್ಗೆ ಹೋಗಿ ಎನ್‌ಕೌಂಟರ್ ಮಾಡಲು ಯತ್ನಿಸಿದ್ದರು. ಒಂದೋ ಹತ್ಯೆ ಮಾಡಬೇಕು, ಇಲ್ಲವೇ ಆತ್ಮಹತ್ಯೆಗೆ ಶರಣಾಗಬೇಕು ಅನ್ನುವಂತೆ ಕಾಟ ಕೊಟ್ಟರು ಎಂದು ಆರೋಪಿಸಿದ್ದಾರೆ.
ನಮ್ಮ ಶಾಸಕರ ಹಕ್ಕುಚ್ಯುತಿಯಾಗಿದೆ. ಸರ್ಕಾರ ಶಿಷ್ಟಾಚಾರಗಳನ್ನು ಮುರಿದಿದೆ. ನಮ್ಮ ಅಹವಾಲನ್ನು ರಾಜ್ಯಪಾಲರಿಗೆ ನೀಡಿದ್ದೇವೆ, ರಾಜ್ಯಪಾಲರು ಸೂಕ್ತ ಕ್ರಮ ಅನುಸರಿಸುವ ಭರವಸೆ ನೀಡಿದ್ದಾರೆ.
– ಶ್ರೀ @NswamyChalavadi, ವಿಧಾನ ಪರಿಷತ್ ವಿಪಕ್ಷ ನಾಯಕರು#CongressFailsKarnataka pic.twitter.com/AH6aTnmDrH
— BJP Karnataka (@BJP4Karnataka) December 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Shivamogga: ಮೆಗ್ಗಾನ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.