Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
ರಾಜ್ಯ ಸರಕಾರಕ್ಕೆ ಮನವಿ, ನಮ್ಮ ದೂರಿಗೆ ಸ್ಪಂದಿಸಿದ್ದರೆ ಸಹೋದರ ಉಳಿಯುತ್ತಿದ್ದ, ರೈಲ್ವೇ ಪೊಲೀಸರಿಂದ ತನಿಖೆ ಆರಂಭ
Team Udayavani, Dec 30, 2024, 9:54 PM IST
ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರಕಾರದ ತೀರ್ಮಾನವನ್ನು ವಿರೋಧಿಸಿರುವ ಸಚಿನ್ ಸಹೋದರಿಯರು, ಪೊಲೀಸ್ ಮತ್ತು ಸಿಐಡಿ ತನಿಖೆ ಮೇಲೆ ನಮಗೆ ವಿಶ್ವಾಸವಿಲ್ಲ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ನಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಸಚಿನ್ ಸಹೋದರಿ ಸುರೇಖಾ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಸಚಿನ್ ಆತ್ಮಹತ್ಯೆ ಮಾಡಿಕೊಂಡು ಐದು ದಿನ ಕಳೆದಿವೆ. ಆದರೆ, ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ರಾಜ್ಯ ಸರಕಾರದಿಂದ ನ್ಯಾಯ ಸಿಗುವ ಭರವಸೆ ನಮಗೆ ಇಲ್ಲ. ಹೀಗಾಗಿ ಸಿಬಿಐ ತನಿಖೆಗೆ ವಹಿಸಿದರೆ ಮಾತ್ರ ಸತ್ಯಾಂಶ ಹೊರಬರಲಿದೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್ ಬರೆದು ಸಾಮಾಜಿಕ ಜಾಲತಾಣದಲ್ಲಿ ಸಚಿನ್ ಹಾಕಿದ್ದನ್ನು ಗಮನಿಸಿ ನಾವು ಠಾಣೆಗೆ ದೂರು ನೀಡಿದರೂ ಸ್ವೀಕರಿಸಲಿಲ್ಲ. ನಮ್ಮ ದೂರಿಗೆ ಸ್ಪಂದಿಸಿದ್ದರೆ ಇಂದು ನಮ್ಮ ಸಹೋದರನ ಸಾವು ಆಗುತ್ತಿರಲಿಲ್ಲ. ಪೊಲೀಸರ ಮೇಲೆ ನಂಬಿಕೆ ಉಳಿದಿಲ್ಲ ಎಂದರು.
ರೈಲ್ವೇ ಪೊಲೀಸರಿಂದ ತನಿಖೆ ಆರಂಭ
ಯುವ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ರೈಲ್ವೇ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು ಎಲ್ಲ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ. ರೈಲ್ವೇ ಪೊಲೀಸ್ ಇಲಾಖೆಯ ಎಸ್‌ಪಿ ಸೌಮ್ಯಲತಾ ಖುದ್ದು 2 ದಿನಗಳಿಂದ ಬೀದರ್‌ನಲ್ಲಿ ಮೊಕ್ಕಾಂ ಹೂಡಿದ್ದಾರೆ. 3 ತಂಡಗಳಿಂದ ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಎಸ್‌ಪಿ ಸೌಮ್ಯಲತಾ ಸಚಿನ್ ಸ್ವಗ್ರಾಮ ಕಟ್ಟಿತುಗಾಂವ್‌ಗೆ ಭೇಟಿ ನೀಡಿ ಅವರ ಸಹೋದರಿಯರು ಮತ್ತು ಸಚಿನ್ ಆಪ್ತರಿಂದ ಪ್ರಕರಣದ ಮಾಹಿತಿ ಕಲೆಹಾಕಿದ್ದಾರೆ. ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿರುವ ಟೆಂಡರ್ ವಂಚಕರನ್ನು ಕಲಬುರಗಿಯಲ್ಲಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.