Mangaluru: ಖಾಸಗಿ ಬಸ್‌ನಲ್ಲಿ ತಿಗಣೆ ಕಡಿತ: ಮಹಿಳೆಗೆ 1.29 ಲಕ್ಷ ರೂ. ಪರಿಹಾರ ನೀಡಿ

ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಆದೇಶ

Team Udayavani, Dec 30, 2024, 11:55 PM IST

Consumer-Court

ಮಂಗಳೂರು: ನಗರದಿಂದ ಬೆಂಗಳೂರಿಗೆ ಖಾಸಗಿ ಬಸ್‌ನಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದಾಗ ಮಹಿಳೆಯೊಬ್ಬರಿಗೆ ತಿಗಣೆ ಕಚ್ಚಿ, ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರಿದ್ದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಮಹಿಳೆಗೆ 1.29 ಲಕ್ಷ ರೂ. ಅನ್ನು ಶೇ.6 ಬಡ್ಡಿ ವಿಧಿಸಿ ಪರಿಹಾರವಾಗಿ ನೀಡುವಂತೆ ಬಸ್‌  ಮಾಲಕರಿಗೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

ಮಹಿಳೆ ನೀಡಿದ ದೂರನ್ನು ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಸೋಮಶೇಖರಪ್ಪ ಕೆ.ಹಂಡಿಗೋಲ್‌ ಮತ್ತು ಶಾರದಮ್ಮ ಎಚ್‌.ಜಿ. ಈ ಆದೇಶ ನೀಡಿದ್ದಾರೆ.
ಸೀ ಬರ್ಡ್‌ ಟೂರಿಸ್ಟ್‌ ಕೊಡಿಯಾಲ್‌ಬೈಲು ಮಂಗಳೂರು, ಸೀ ಬರ್ಡ್‌ ಟೂರಿಸ್ಟ್‌  ಬೆಂಗಳೂರು ಮತ್ತು ರೆಡ್‌ ಬಸ್‌ ಆನ್‌ಲೈನ್‌ ಆ್ಯಪ್‌ ವಿರುದ್ಧ ನಟ ಶೋಭರಾಜ್‌ ಪಾವೂರು ಪತ್ನಿ ಹಾಗೂ ಕಲಾವಿದೆ ದೀಪಿಕಾ ಸುವರ್ಣ ಆಯೋಗಕ್ಕೆ ದೂರು ನೀಡಿದ್ದರು. ಅವರ ಪರವಾಗಿ ಚಿದಾನಂದ ಕೆದಿಲಾಯ ವಾದಿಸಿದ್ದರು.

2022ರ ಆ.16ರಂದು ರಾತ್ರಿ ದೀಪಿಕಾ ಅವರಿಗೆ ಬಸ್‌ನಲ್ಲಿ ತಿಗಣೆ ಕಾಟ ನೀಡಿತ್ತು. ವಿಚಾರಣೆ ಕೈಗೆತ್ತಿಕೊಂಡ ಆಯೋಗವು ದೀಪಿಕಾ ಅವರಿಗೆ ಮೆಡಿಕಲ್‌ ಬಿಲ್‌ ಮೊತ್ತ 18,650 ರೂ. ಮತ್ತು ಶೇ.6ರ ವಾರ್ಷಿಕ ಬಡ್ಡಿ ಪಾವತಿಸಬೇಕು. ಬಸ್ಸಿನ ಟಿಕೆಟ್‌ನ ಮೊತ್ತ 840 ರೂ. ಜತೆ ದೂರು ನೀಡಿನ ದಿನಾಂಕದಿಂದ ಇಲ್ಲಿಯವರೆಗೆ ಶೇ.6ರ ವಾರ್ಷಿಕ ಬಡ್ಡಿಯೊಂದಿಗೆ ಮರು ಪಾವತಿಸಬೇಕು. ಮಾನಸಿಕ ಕಿರಿಕಿರಿ, ಆರ್ಥಿಕ ನಷ್ಟ ಮತ್ತು ಇತರ ಕಾರಣಗಳಿಗಾಗಿ 1 ಲಕ್ಷ ರೂ. ಮತ್ತು ಶೇ.6ರ ಬಡ್ಡಿ ಪಾವತಿಸಬೇಕು. ದೂರು, ವ್ಯಾಜ್ಯದ ಮೊತ್ತವಾಗಿ 10 ಸಾವಿರ ರೂ. ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

45 ದಿನದಲ್ಲಿ ಈ ಮೊತ್ತವನ್ನು ಪಾವತಿ ಮಾಡದಿದ್ದಲ್ಲಿ ಶೇ.8 ಹೆಚ್ಚುವರಿ ಬಡ್ಡಿಯೊಂದಿಗೆ ಪಾವತಿ ಮಾಡಬೇಕು. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಿವಿಲ್‌ ಅಥವಾ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಅವಕಾಶವಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-car

Mangaluru: ಚಲಿಸುತ್ತಿದ್ದ ಕಾರಿಗೆ ಹೊತ್ತಿಕೊಂಡ ಬೆಂಕಿ

Bajpe: ಮರವೂರು ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

Bajpe: ಮರವೂರು ನದಿಯಲ್ಲಿ ವ್ಯಕ್ತಿಯ ಶವ ಪತ್ತೆ

12-chowta

Brijesh Chowta: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್‌ ಚೌಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.