Legislative Council: ಸ್ಥಳ ಮಹಜರಿಗೆ ಅನುಮತಿ ನೀಡಿಲ್ಲ: ಬಸವರಾಜ ಹೊರಟ್ಟಿ
ಯಾವ ರೀತಿ ಮಹಜರು ಎಂದು ತಿಳಿದ ಬಳಿಕ ನಿರ್ಧಾರ: ಸಭಾಪತಿ, ತನಿಖೆಗೆ ಅವಕಾಶ ಕೊಡಿ: ಪರಿಷತ್‌ಗೆ ಸಿಐಡಿ ಪತ್ರ
Team Udayavani, Dec 31, 2024, 7:15 AM IST
ಹುಬ್ಬಳ್ಳಿ/ ಬೆಂಗಳೂರು: ವಿಧಾನ ಪರಿಷತ್ ಒಳಗಡೆ ಪರಿಷತ್ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಬಗ್ಗೆ ಪ್ರಕರಣ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಜತೆ ಚರ್ಚಿಸಿದ್ದೆ. ಆದರೆ ಪ್ರಕರಣ ಈಗ ಕೈಮೀರಿ ಹೋಗಿದೆ. ಪ್ರಕರಣದ ಕುರಿತಾಗಿ ಸ್ಥಳ ಮಹಜರಿಗೆ ಪೊಲೀಸ್ ಮಹಾನಿರ್ದೇಶಕರು ಅನುಮತಿ ಕೋರಿದ್ದಾರೆ. ಸ್ಥಳ ಮಹಜರು ಯಾವ ರೀತಿ ಕೈಗೊಳ್ಳಲಾಗುತ್ತದೆ ಎಂಬುದರ ಬಗ್ಗೆ ತಿಳಿಸದ ಕಾರಣ ಅನುಮತಿ ನೀಡಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣ ನಡೆದ ಸಂದರ್ಭದಲ್ಲಿ ಅಲ್ಲಿದ್ದವರನ್ನು ಕರೆಸಿ ಸ್ಥಳ ಮಹಜರು ಮಾಡುತ್ತಾರೋ, ಖಾಲಿ ಸ್ಥಳದಲ್ಲಿ ಮಹಜರು ಮಾಡುತ್ತಾರೋ ಎಂಬುದು ಮೊದಲು ನಮಗೆ ಗೊತ್ತಾಗಬೇಕು. ಅನಂತರ ಅನುಮತಿ ನೀಡುವ ಬಗ್ಗೆ ನಿರ್ಧರಿಸಲಾಗುವುದು. ಈ ಕುರಿತು ಪರಿಷತ್ ಕಾರ್ಯದರ್ಶಿಗಳು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ ಎಂದರು.
ಪ್ರಕರಣದ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನಮಗೆ ಪತ್ರ ಬರೆದಿದ್ದು ಬಿಟ್ಟರೆ ವೀಡಿಯೋ ಸಹಿತ ಯಾವುದೇ ದಾಖಲೆ ನೀಡಿಲ್ಲ. ಯಾವ ಮಾಧ್ಯಮದವರೂ ಸಾಕ್ಷಿಯಾಗುವಂಥದ್ದನ್ನು ತೋರಿಸಿಲ್ಲ. ಎಲ್ಲರೂ ಮೊಬೈಲ್‌ನಲ್ಲಿ ತೋರಿಸುತ್ತಿದ್ದಾರೆ. ಯಾರಾದರೂ ಮಾಧ್ಯಮದವರು ದಾಖಲೆ ನೀಡಿದರೆ ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಬೇಕು.
ಸಚಿವೆ ಹೆಬ್ಬಾಳ್ಕರ್ ಅವರು, “ಸಭಾಪತಿಗಳು ಮಾಧ್ಯಮಗಳಿಗೆ ಪರಿಷತ್ ಒಳಗೆ ಬರಲು ಅವಕಾಶ ನೀಡಿದ್ದು, ಘಟನೆ ಬಗ್ಗೆ ದೃಶ್ಯ ಮಾಧ್ಯಮಗಳಲ್ಲಿ ತೋರಿಸಿದ್ದು ಸುಳ್ಳಾ’ ಎಂದು ಪ್ರಶ್ನಿಸಿದ್ದಾರೆ. ಕಲಾಪದಲ್ಲಿ ನಡೆಯುವುದು ಜನರಿಗೆ ತಿಳಿಯಲಿ ಎಂಬ ಉದ್ದೇಶದಿಂದ ದೃಶ್ಯ ಮಾಧ್ಯಮದವರಿಗೆ ಅವಕಾಶ ನೀಡಿದ್ದೆ. ಸಚಿವರು ಹೀಗೆ ಮಾತನಾಡಿದರೆ ವಿಧಾನಸಭೆ ಮಾದರಿಯಲ್ಲಿ ಪರಿಷತ್‌ನಲ್ಲೂ ದೃಶ್ಯ ಮಾಧ್ಯಮ ಪ್ರವೇಶಕ್ಕೆ ನಿಷೇಧ ವಿಧಿಸುತ್ತೇನೆ. ಪ್ರಕರಣದ ಬಗ್ಗೆ ನನ್ನ ವ್ಯಾಪ್ತಿ ಬಿಟ್ಟು ನಾನು ಬೇರೇನೂ ಮಾಡುತ್ತಿಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಆಗಲಿದೆ. ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ರಾಜ್ಯಪಾಲರನ್ನು ಭೇಟಿ ಆಗಿರುವುದು ಅವರ ವೈಯಕ್ತಿಕ ವಿಷಯ ಎಂದರು.
ತನಿಖೆಗೆ ಅವಕಾಶ ಕೊಡಿ: ಪರಿಷತ್‌ಗೆ ಸಿಐಡಿ ಪತ್ರ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಮೇಲ್ಮನೆ ಸದಸ್ಯ ಸಿ.ಟಿ.ರವಿ ನಡುವಿನ ವಾಗ್ವಾದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆ ನಡೆಸಲು ಅವಕಾಶ ಹಾಗೂ ಸಹಕಾರ ನೀಡುವಂತೆ ವಿಧಾನ ಪರಿಷತ್ ಕಾರ್ಯದರ್ಶಿಗೆ ಸಿಐಡಿ ಅಧಿಕಾರಿಗಳು ಪತ್ರ ಬರೆದಿದ್ದು, ಉತ್ತರಕ್ಕಾಗಿ ಕಾದಿದ್ದಾರೆ.
ಸೋಮವಾರವಷ್ಟೇ ಕಾರ್ಯದರ್ಶಿ ಮಹಾಲಕ್ಷ್ಮೀ ಅವರಿಗೆ ಪತ್ರ ತಲುಪಿದ್ದು, ಅವರು ಪತ್ರಕ್ಕೆ ಸಂಬಂಧಿಸಿ ಯಾವುದೇ ಉತ್ತರವನ್ನು ನೀಡಿಲ್ಲ. ಸದನದೊಳಗೆ ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಕರಣಕ್ಕೆ ಸಂಬಂಧಿಸಿ ಆದೇಶ ನೀಡಿ ಆಗಿದ್ದು, ಸಿಐಡಿ ಅಧಿಕಾರಿಗಳ ಪ್ರವೇಶಕ್ಕೆ ಅವಕಾಶ ನೀಡಬೇಕೇ ಬೇಡವೇ ಎಂಬುದನ್ನೂ ಸಭಾಪತಿ ಅವರ ಅನುಮತಿ ಮೇರೆಗೆ ನಿರ್ಧರಿಸಲು ಚಿಂತನೆ ನಡೆಸಿದ್ದಾರೆ.
ಸಚಿವೆ ಹೆಬ್ಬಾಳ್ಕರ್ ಅವರು ಸಿ.ಟಿ. ರವಿ ವಿರುದ್ಧ ನೀಡಿದ್ದ ದೂರು ಆಧರಿಸಿ ಬಾಗೇವಾಡಿ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣವನ್ನು ಸರಕಾರದ ಆದೇಶದ ಮೇರೆಗೆ ಸಿಐಡಿಗೆ ಹಸ್ತಾಂತರಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಪರಿಷತ್ ಸಭಾಂಗಣದ ಒಳಗೆ ಘಟನೆ ನಡೆದಿರುವುದರಿಂದ ಮುಂದಿನ ತನಿಖೆಗಾಗಿ ಸಿಐಡಿ ಅಧಿಕಾರಿಗಳು ಪರಿಷತ್ ಸಭಾಪತಿಯ ಸಹಕಾರ ಮತ್ತು ಅವಕಾಶ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.