Bengaluru: ಸಿನಿಮೀಯವಾಗಿ ಬೈಕ್ ಕಳ್ಳನನ್ನು ಹಿಡಿದ ಜಲಮಂಡಳಿ ಅಧಿಕಾರಿ
Team Udayavani, Dec 31, 2024, 10:21 AM IST
ಬೆಂಗಳೂರು: ಮದ್ಯ ರಾತ್ರಿ ಬೈಕ್ ಕಳವು ಮಾಡಲು ಬಂದಿದ್ದ ಕಳ್ಳನನ್ನು ಮಾಲೀಕರೇ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೊಪ್ಪಿಸಿರುವ ಘಟನೆ ಜೆ.ಪಿ.ನಗರದಲ್ಲಿ ನಡೆದಿದೆ.
ಯಶವಂತ್ ಎಂಬಾತನ್ನು ಬಂಧಿಸಲಾಗಿದೆ. ಈತನ ಸಹಚರ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಘಟನೆ ಸಂಬಂಧ ಜಲಮಂಡಳಿ ಅಧಿಕಾರಿ ರಾಕೇಶ್ ಯಾದವ್ ಎಂಬುವರು ದೂರು ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಶನಿವಾರ ತಡರಾತ್ರಿ 12.30ರ ಸುಮಾರಿಗೆ ಯಶವಂತ್ ತನ್ನ ಸಹಚರರ ಜತೆ ಬೈಕ್ ಕಳವು ಮಾಡಲು ಜೆ.ಪಿ.ನಗರದ 1ನೇ ಹಂತದ 34ನೇ ಮುಖ್ಯರಸ್ತೆಗೆ ಬಂದಿದ್ದು, ಯಮಹಾ ಬೈಕ್ ಕಳವು ಮಾಡಲು ಯತ್ನಿಸಿದ್ದಾರೆ. ಆಗ ದೂರುದಾರ ರಾಕೇಶ್ ಯಾದವ್ ಪತ್ನಿ ಕಿಟಕಿ ಮೂಲಕ ನೋಡಿ, ಪತಿ ರಾಕೇಶ್‌ಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಎಚ್ಚರಗೊಂಡ ರಾಕೇಶ್, ಕಳ್ಳ ಕಳ್ಳ ಎಂದು ಕೂಗಿಕೊಂಡು ಮನೆಯಿಂದ ಹೊರಗಡೆ ಬಂದಿದ್ದಾರೆ. ಆದರೂ ಆರೋಪಿಗಳು ಬೈಕ್ ಸ್ಟಾರ್ಟ್ ಮಾಡಿಕೊಂಡು ಮುಂದೆ ಸಾಗಿದ್ದರು. ಬಳಿಕ ಬೈಕ್‌ನಲ್ಲಿ ಸುಮಾರು ಒಂದು ಕಿಲೋ ಮೀಟರ್‌ವರೆಗೂ ಆರೋಪಿಗಳ ಹಿಂಬಾಲಿಸಿದ ರಾಕೇಶ್, ಸ್ಥಳೀಯರ ನೆರವಿನೊಂದಿಗೆ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಂತರ ಆತನನ್ನು ಮರಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಜೆ.ಪಿ.ನಗರ ಠಾಣೆಯ ಹೊಯ್ಸಳ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ. ಈ ಬೈಕ್ ಅನ್ನು ರಾಕೇಶ್ ಅವರಿಗೆ ತಾಯಿ ಗಿಫ್ಟ್ ಆಗಿ ನೀಡಿದ್ದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.