Imprisonment: ಸಂಘಟನೆಗಾಗಿ ದರೋಡೆ: ಜೆಎಂಬಿ ಉಗ್ರನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ
Team Udayavani, Dec 31, 2024, 10:52 AM IST
ಬೆಂಗಳೂರು: ಅಕ್ರಮ ವಾಸವಾಗಿದ್ದಲ್ಲದೆ, ತನ್ನ ಸಂಘ ಟನೆಗಾಗಿ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಡಕಾಯಿತಿ ಮಾಡುತ್ತಿದ್ದ ಪ್ರಕರಣದಲ್ಲಿ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾ ದೇಶ (ಜೆಎಂಬಿ) ಸಂಘಟನೆ ಉಗ್ರ ಜೈದುಲ್ಲ ಇಸ್ಲಾಂ ಅಲಿಯಾಸ್ ಕೌಸರ್‌ಗೆ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಕೋರ್ಟ್ 7 ವರ್ಷ ಕಠಿಣ ಶಿಕ್ಷೆ ಹಾಗೂ 57 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಬಾಂಗ್ಲಾದೇಶದಲ್ಲಿ 2005ರಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಾಗಿದ್ದ ಕೌಸರ್, 2014ರಲ್ಲಿ ಸಂಘಟನೆ ಮುಖ್ಯಸ್ಥ ಸಲಾವುದ್ದೀನ್ ಸಲೇಹಿನ್ ಜತೆ ಸೇರಿ ಭಾರತ ಪ್ರವೇಶಿಸಿದ್ದರು. ಬಳಿಕ ಅದೇ ವರ್ಷ ಅಕ್ಟೋಬರ್‌ನಲ್ಲಿ ಕೋಲ್ಕತಾದ ಬುದ್ವಾìನ್ ಸ್ಫೋಟ ನಡೆಸಿದ್ದರು. ಬಳಿಕ ತಮ್ಮ ತಂಡಗಳನ್ನು ದಕ್ಷಿಣ ರಾಜ್ಯಗಳ ಕಡೆ ಬೇರ್ಪಡಿಸಿದ್ದ ಕೌಸರ್, ತನ್ನ ಕೆಲ ಸಹಚರರ ಜತೆ ಸೇರಿ ತುಮಕೂರು, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಪ್ಲಾಸ್ಟಿಕ್ ವಸ್ತುಗಳ ಮಾರಾಟ ಹಾಗೂ ಇತರೆ ಸಣ್ಣ-ಪುಟ್ಟ ವ್ಯಾಪಾರಸ್ಥನ ಸೋಗಿನಲ್ಲಿ ಓಡಾಡಿಕೊಂಡಿದ್ದರು.
ಅಲ್ಲದೆ, ಇಲ್ಲಿರುವ ಅಸ್ಸಾಂ ಮತ್ತು ಬಂಗಾಳ ಮೂಲದ ಮುಸ್ಲಿಂ ಯುವಕರನ್ನು ಸಂಘಟನೆಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಸಂಘಟನಾ ಕಾರ್ಯ ಮಾಡುತ್ತಿದ್ದರು. ಇದೇ ವೇಳೆ ಶಂಕಿತ ಕೌಸರ್ ತನ್ನ ತಂಡ ಕಟ್ಟಿಕೊಂಡು 2018ರ ಜನವರಿಯಲ್ಲಿ ಬಿಹಾರದ ಬೋಧ್‌ಗಯ ಸ್ಫೋಟಿಸಿದ್ದರು. ಬಳಿಕ ಮತ್ತೆ ಬೆಂಗಳೂರಿಗೆ ಬಂದು ಸಂಘಟನೆ
ಯನ್ನು ಆರ್ಥಿಕವಾಗಿ ಸದೃಢಪಡಿಸಲು ಬೆಂಗಳೂರು ನಗರ, ಗ್ರಾಮಾಂತರ ಭಾಗದಲ್ಲಿ ದರೋಡೆ, ಡಕಾಯಿತಿ ಮಾಡುತ್ತಿದ್ದರು. ಬಂದ ಹಣವನ್ನು ವಿವಿಧ ಖಾತೆಗಳ ಮೂಲಕ
ಸಂಘಟನೆ ಖಾತೆಗೆ ವರ್ಗಾವಣೆ ಮಾಡುತ್ತಿದ್ದರು. ಈ ಸಂಬಂಧ ಸ್ಥಳೀಯ ಠಾಣೆಗಳಲ್ಲಿ 4 ದರೋಡೆ ಪ್ರಕರಣಗಳು ದಾಖಲಾಗಿತ್ತು.
ಮತ್ತೂಂದೆಡೆ ರಾಜ್ಯಗುಪ್ತಚರ ಮಾಹಿತಿ ಹಾಗೂ ಎನ್‌ಐಎ ಜಂಟಿ ಕಾರ್ಯಾಚರಣೆಯಲ್ಲಿ 2018ರ ಆಗಸ್ಟ್‌ನಲ್ಲಿ ರಾಮನಗರದಲ್ಲಿ ಕೌಸರ್‌ನನ್ನು ಬಂಧಿಸಲಾಗಿತ್ತು. ಈತನ ವಿಚಾರಣೆಯಲ್ಲಿ ಶಂಕಿತ ತನ್ನ ತಂಡ ಕಟ್ಟಿಕೊಂಡು ಬೆಂಗಳೂರು ನಗರದ ಗಡಿ ಭಾಗ ಹಾಗೂ ಗ್ರಾಮಾಂತರ ಭಾಗದಲ್ಲಿ ಮನೆಗಳ ದರೋಡೆ ಮಾಡುತ್ತಿರುವುದು ಗೊತ್ತಾ ಗಿತ್ತು. ಈ ದರೋಡೆ ಮಾಡಿದ್ದ ಹಣದಲ್ಲಿ ಸಂಘಟನೆ ಬಲಪಡಿಸುವುದು ಮಾತ್ರವಲ್ಲದೆ, ಶಸ್ತ್ರಾಸ್ತ್ರಗಳ ಸಂಗ್ರಹ, ಸಂಘಟನೆಗೆ ಸೇರಿದ ಯುವಕರಿಗೆ ತರಬೇತಿಗೆ ಹಣ ವ್ಯಯಿಸುತ್ತಿದ್ದರು ಕೂಡ ಮಾಡುತ್ತಿದ್ದರು. ಒಟ್ಟಾರೆ ಇದೇ ಪ್ರಕರಣದಲ್ಲಿ ಕೌಸರ್ ಸೇರಿ 11 ಮಂದಿ ಆರೋಪಿಗಳಿಗೆ ಎನ್‌ಐಎ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ ಎಂದು ಎನ್‌ಐಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.