Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ
Team Udayavani, Dec 31, 2024, 3:08 PM IST
ಬೀದರ: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಯ ನಿಗೂಢ ಸಾವಿನ ಬಗ್ಗೆ ತನಿಖೆ ಮತ್ತು ಮೃತ ಕುಟುಂಬಕ್ಕೆ ಪರಿಹಾರ ನೀಡಿ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಡಿ.31ರ ಮಂಗಳವಾರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿದ ಸಮಾಜದ ಮುಖಂಡರು ಪ್ರಮುಖ ವೃತ್ತಗಳ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ನಂತರ ಗೃಹ ಸಚಿವರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ಸಚಿನ್ ಪಾಂಚಾಳ್ ಆತ್ಮಹತ್ಯೆ ನಗೂಢ ಸಾವು ಘಟನೆ ವಿಷಾಧನೀಯ. ಬಡ ಸಮಾಜದಲ್ಲಿ ಹುಟ್ಟಿದ ಯುವಕ ತನ್ನ ಜೀವನಕ್ಕಾಗಿ ಮಾಡುವ ಕೆಲಸದ ವ್ಯವಹಾರದಲ್ಲಿ ಏರುಪೇರು ನಿಗೂಢ ಸಾವಿನಲ್ಲಿ ಅಂತ್ಯವಾಗಿದೆ. ಸಚಿನ್ ಮೇಲೆ ಅವಲಂಬಿತ ಕುಟುಂಬದ ಸದಸ್ಯರು ಈಗ ಅನಾಥವಾಗಿ ಬೀದಿ ಪಾಲಾಗುವ ಸ್ಥಿತಿ ಬಂದಿದೆ. ಗುತ್ತಿಗೆದಾರನ ಸಾವಿನ ಸಮಗ್ರ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಮೃತ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷ ದತ್ತಾತ್ರಿ ವಿಶ್ವಕರ್ಮ, ಯುವ ಘಟಕದ ಅದ್ಯಕ್ಷ ಪ್ರಶಾಂತ ವಿಶ್ವಕರ್ಮ, ಪ್ರಮುಖರಾದ ಸೋಮನಾಥ ಪಾಂಚಾಳ್, ಸುಲೋಚನಾ ವಿಶ್ವಕರ್ಮ, ರಾಜಕುಮಾರ ಪಾಂಚಾಳ್ ಮತ್ತು ಕೃಷ್ಣಮಚಾರಿ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Kundapura: ಟವರ್‌ನ ಬುಡದಲ್ಲೇ ನೆಟ್‌ವರ್ಕ್ ಇಲ್ಲ!
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.