Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ
Team Udayavani, Dec 31, 2024, 10:30 PM IST
ಚಿಕ್ಕಮಗಳೂರು: ಕೆಲವು ವರ್ಷಗಳ ಹಿಂದೆ ನಕ್ಸಲ್ ನಿಗ್ರಹ ಪಡೆ ನಡೆಸಿದ ಬರ್ಕಣ ಎನ್ಕೌಂಟರ್ ಪ್ರಕರಣದಲ್ಲಿ ಜಿಲ್ಲೆಯ ಕೊಪ್ಪ ತಾಲೂಕಿನ ನೀಲಗುಳಿ ಪದ್ಮನಾಭ ಹಾಗೂ ರಿಜ್ವಾನಬೇಗಂ ಅವರ ಮೇಲೆ ಜಿಲ್ಲೆಯಲ್ಲಿದ್ದ ತಲಾ ಒಂದು ಪ್ರಕರಣ ಮತ್ತು ಬಿ.ಜಿ. ಕೃಷ್ಣಮೂರ್ತಿ ಮೇಲಿದ್ದ ಒಂದು ಮೊಕದ್ದಮೆಯನ್ನು ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸುದೀರ್ಘ ವಿಚಾರಣೆ ನಡೆಸಿದ ಬಳಿಕ ಖುಲಾಸೆಗೊಳಿಸಿದೆ.
ನೀಲಗುಳಿ ಪದ್ಮನಾಭ ಮೇಲೆ ಜಿಲ್ಲೆಯಲ್ಲಿ 10 ಪ್ರಕರಣಗಳು ದಾಖಲಾಗಿದ್ದು, 9ರಲ್ಲಿ ಈಗಾಗಲೇ ಖುಲಾಸೆಗೊಂಡಿದ್ದಾನೆ. ಕೊನೆ ಪ್ರಕರಣದಲ್ಲೂ ನ್ಯಾಯಾಲಯ ಖುಲಾಸೆಗೊಳಿಸಿದ್ದು, ಈ ಮೂಲಕ ಆತನ ಮೇಲಿದ್ದ ಎಲ್ಲ 10 ಪ್ರಕರಣಗಳು ಖುಲಾಸೆಗೊಂಡಂತಾಗಿದೆ. ಉಡುಪಿ ಜಿಲ್ಲೆಯಲ್ಲಿ ಕೆಲ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ.
ರಿಜ್ವಾನ್ ಬೇಗಂ ಅವರ ಮೇಲಿದ್ದ 1 ಪ್ರಕರಣವನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದರೆ, ಬಿ.ಜಿ. ಕೃಷ್ಣಮೂರ್ತಿ ಮೇಲಿರುವ 40ಕ್ಕೂ ಹೆಚ್ಚು ಪ್ರಕರಣಗಳ ಪೈಕಿ ಒಂದನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.