Bengaluru: ಮಾಜಿ ಕಾರ್ಪೋರೇಟರ್ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ
Team Udayavani, Jan 1, 2025, 10:57 AM IST
ಬೆಂಗಳೂರು: ಬಿಜೆಪಿ ಮಾಜಿ ಕಾರ್ಪೋರೆಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದ 7 ಮಂದಿ ಅಪ ರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ 72ನೇ ಸಿಸಿಎಚ್ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿ ಆದೇಶಿಸಿದೆ.
ಕಾಟನ್‌ಪೇಟೆಯ ಪೀಟರ್ (46), ಸೂರ್ಯ ಅಲಿಯಾಸ್ ಸೂರಜ್ (20), ಸ್ಟೀಫನ್ (21), ಪುರುಷೋತ್ತಮ್ (22), ಅಜಯ್ (21), ಅರುಣ್‌ಕುಮಾರ್ (36) ಮತ್ತು ಸೆಲ್ವರಾಜ್ ಅಲಿಯಾಸ್ ಬುದಾನ್ (36)ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಮತ್ತೂಬ್ಬ ಆರೋಪಿ, ಕೊಲೆಯಾದ ರೇಖಾ ಕದಿರೇಶ್ ಅತ್ತಿಗೆ ಮಾಲಾ ಮೃತಪಟ್ಟಿದ್ದಾಳೆ.
ಆರೋಪಿಗಳು 2021ರ ಜೂನ್‌ನಲ್ಲಿ ಕಚೇರಿ ಬಳಿಯೇ ರೇಖಾ ಕದಿರೇಶ್ ಅವರನ್ನು ಹತ್ಯೆಗೈದು ಪರಾರಿಯಾಗಿದ್ದರು. ಬಳಿಕ ಪಶ್ಚಿಮ ವಿಭಾಗದ ಅಂದಿನ ಡಿಸಿಪಿ ಸಂಜೀವ್ ಎಂ.ಪಾಟೀಲ್ ನೇತೃತ್ವದಲ್ಲಿ ಕಾಟನ್‌ಪೇಟೆಯ ಠಾಣಾಧಿಕಾರಿ ಚಿದಾನಂದಮೂರ್ತಿ ಹಾಗೂ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ ಆಗಿತ್ತು. ಬಳಿಕ ಆರೋಪಿಗಳು ಸುಮಾರು 800ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಕೋರ್ಟ್ 7 ಮಂದಿಯೂ ಅಪರಾಧಿಗಳು ಎಂದು ಘೋಷಿಸಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.
ಸರ್ಕಾರಿ ಅಭಿಯೋಜಕರಾಗಿ ಸತ್ಯವತಿ ವಾದ ಮಂಡಿಸಿದ್ದರು. ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ಬಾಲಚಂದ್ರ ಎನ್. ಭಟ್ ಅವರು ಮಂಗಳವಾರ ಶಿಕ್ಷೆ ಪ್ರಕಟಿಸಿದ್ದಾರೆ.
ಏನಿದು ಪ್ರಕರಣ?: 2021ರ ಜೂನ್ 24ರಂದು ಕಾಟನ್‌ಪೇಟೆಯ ಆಂಜನಪ್ಪ ಗಾರ್ಡನ್‌ನಲ್ಲಿ ನೆಲೆಸಿದ್ದ ರೇಖಾ ಕದಿರೇಶ್, ಕೋವಿಡ್-19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಬಳಿ ಊಟ ಹಂಚುತ್ತಿದ್ದರು. ಹಣಕಾಸಿನ ವಿಚಾರಕ್ಕೆ ರೇಖಾ ಅವರ ಅತ್ತಿಗೆ ಮಾಲಾ, ಆಕೆಯ ಪುತ್ರ ಸೆಲ್ವರಾಜ್ ಸುಫಾರಿ ನೀಡಿದ್ದ ಹಿನ್ನೆಲೆಯಲ್ಲಿ ಇತರ ಅಪರಾಧಿಗಳು ರೇಖಾರನ್ನು ಹತ್ಯೆಗೈದಿದ್ದರು. 2018ರಲ್ಲಿ ರೇಖಾ ಪತಿ ಕದಿರೇಶ್ ಕೊಲೆ ಸಹ ನಡೆದಿತ್ತು.
ನಂತರ ಪ್ರತ್ಯೇಕವಾಗಿ ವಾಸವಿದ್ದ ರೇಖಾ, ಪತಿ ಕುಟುಂಬವನ್ನು ರಾಜಕೀಯವಾಗಿ ಕಡೆಗಣಿಸಿದ್ದರು. ಇದು ಕದಿರೇಶ್ ಅಕ್ಕ ಮಾಲಾ ಹಾಗೂ ಸಂಬಂಧಿಕರನ್ನು ಕೆರಳಿಸಿತ್ತು. ಪೀಟರ್, ಕದಿರೇಶ್ ಜತೆ ಓಡಾಡಿಕೊಂಡಿದ್ದ. ಕದಿರೇಶ್ ಕೊಲೆಯಾದ ನಂತರ, ರೇಖಾ ಅವರ ಅಂಗರಕ್ಷಕನಾಗಿ ಸುತ್ತಾಡುತ್ತಿದ್ದ. ಆತನನ್ನು ದೂರವಿಡಲು ರೇಖಾ ಯತ್ನಿಸುತ್ತಿದ್ದರು. ಅದರಿಂದ ಪೀಟರ್ ಸಿಟ್ಟಾಗಿದ್ದ. ಪೀಟರ್‌ನನ್ನು ಸಂಪರ್ಕಿಸಿದ್ದ ಮಾಲಾ ಹಾಗೂ ಅವರ ಮಗ ಅರುಣ್, ರೇಖಾ ಹತ್ಯೆಗೆ ಸಂಚು ರೂಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.