Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್‌ ಆಗಿ ಪರಿವರ್ತಿಸಿದ ಬಾಲಕ!

ಕಡೇಶ್ವಾಲ್ಯ ಸರಕಾರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿಯ ಸಾಧನೆ | 9,000 ರೂಪಾಯಿ ಖರ್ಚು

Team Udayavani, Jan 1, 2025, 12:59 PM IST

1

ಬಂಟ್ವಾಳ: ಕಡೇಶ್ವಾಲ್ಯ ಸರಕಾರಿ ಶಾಲೆಯ ವಿದ್ಯಾರ್ಥಿಯೋರ್ವ ತನ್ನಲ್ಲಿರುವ ಸಾಮಾನ್ಯ ಸೈಕಲನ್ನು ಎಲೆಕ್ಟ್ರಿಕ್‌ ಸೈಕಲಾಗಿ ಪರಿವರ್ತಿಸಿ ತನ್ನ ಪ್ರತಿಭೆಯನ್ನು ಮೆರೆದಿದ್ದಾನೆ.
ಕೆದಿಲ ಗ್ರಾಮದ ಗುಡ್ಡಕೋಡಿ ನಿವಾಸಿ ಲಿಂಗಪ್ಪ ನಾಯ್ಕ-ಆಶಾ ದಂಪತಿಯ ಪುತ್ರ, ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮೋಕ್ಷಿತ್‌ ನಾಯ್ಕ ಈಗ 2 ಕಿ.ಮೀ.ದೂರದ ಶಾಲೆಗೆ ಇದೇ ಸೈಕಲ್‌ನಲ್ಲಿ ಹೋಗುತ್ತಾನೆ.

9 ಸಾವಿರ ರೂ. ವೆಚ್ಚ
ಮೋಕ್ಷಿತ್‌ಗೆ ಶಾಲೆಗೆ ಹೋಗಲು ಹೆತ್ತವರು ಸೈಕಲ್‌ ತೆಗೆದುಕೊಟ್ಟಿದ್ದರು. ಅದನ್ನು ಎಲೆಕ್ಟ್ರಿಕ್‌ ಸೈಕಲಾಗಿ ಪರಿವರ್ತಿಸುವುದು ಹೇಗೆ ಎಂಬುದನ್ನು ಯುಟ್ಯೂಬ್‌ ನೋಡಿ ಕಲಿತು, ಬಳಿಕ ಆನ್‌ಲೈನ್‌ ಮೂಲಕ ಅದಕ್ಕೆ ಬೇಕಾದ ಎಕ್ಸಲೇಟರ್‌, ಬ್ರೇಕ್‌, ಬ್ಯಾಟರಿ, ಮೋಟಾರ್‌, ಪವರ್‌ ಬ್ಯಾಂಕ್‌ಗಳನ್ನು ಖರೀದಿಸಿದ್ದಾನೆ. ಅನಂತರ ಒಂದಕ್ಕೊಂದು ಜೋಡಿಸಿ, ಬ್ಯಾಟರಿ ಶಕ್ತಿಯಿಂದ ಸೈಕಲ್‌ ಚಲಿಸುವಂತೆ ಮಾಡಿದ್ದಾನೆ. ಇದಕ್ಕೆ ಒಟ್ಟು 9 ಸಾವಿರ ರೂ. ವೆಚ್ಚವಾಗಿದೆ. ಇಷ್ಟು ಮಾಡಲು ಆತ ತೆಗೆದುಕೊಂಡ ಸಮಯ ಕೇವಲ ಎರಡು ದಿನ.

ನಾಲ್ಕು ವಾರಗಳಿಂದ ಈ ಸೈಕಲನ್ನು ಬಳಸುತ್ತಿದ್ದರೂ ಈತನಕ ಯಾವುದೇ ತಾಂತ್ರಿಕ ತೊಂದರೆ ಕಂಡುಬಂದಿಲ್ಲ. ಈತನ ಸಾಧನೆಗೆ ಹಲವರು ಬೆನ್ನು ತಟ್ಟಿದ್ದಾರೆ. ಒಂದೆರಡು ಗಂಟೆ ಚಾರ್ಜ್‌ಗೆ ಇಟ್ಟರೆ ಇಡೀ ದಿನ ಓಡಾಡಬಹುದು ಎಂದು ಮೋಕ್ಷಿತ್‌ ವಿವರಿಸುತ್ತಾನೆ.

ಎಲೆಕ್ಟ್ರಾನಿಕ್ಸ್‌ ಕ್ಷೇತ್ರದಲ್ಲಿ ಆಸಕ್ತಿ
ಬಾಲ್ಯದಿಂದಲೇ ಎಲೆಕ್ಟ್ರಾನಿಕ್ಸ್‌ ಕ್ಷೇತ್ರದಲ್ಲಿ ಮೋಕ್ಷಿತ್‌ಗೆ ವಿಶೇಷ ಆಸಕ್ತಿ. ಯಾವುದೇ ಎಲೆಕ್ಟ್ರಾನಿಕ್ಸ್‌ ವಸ್ತು ಇದ್ದರೂ ಅದು ಹೇಗೆ ಕಾರ್ಯಾಚರಿಸುತ್ತದೆ ಮತ್ತು ಕೆಟ್ಟು ಹೋದರೆ ಏನು ಮಾಡಬಹುದು ಎಂಬುದನ್ನು ತಿಳಿದುಕೊಳ್ಳುವ ಕುತೂಹಲ. ತಂದೆಯಲ್ಲಿರುವ ಸ್ಕೂಟರ್‌, ಆಟೋರಿಕ್ಷಾ, ಪಿಕ್‌ಅಪ್‌ ವಾಹನಗಳ ಎಲೆಕ್ಟ್ರಿಕ್‌ – ಎಲೆಕ್ಟ್ರಾನಿಕ್‌ ವ್ಯವಸ್ಥೆ ಕೆಟ್ಟು ಹೋದರೆ ಅದನ್ನು ಮೋಕ್ಷಿತ್‌ ದುರಸ್ತಿ ಮಾಡಿಕೊಡುತ್ತಾನೆ. ಇದೆಲ್ಲವನ್ನೂ ಆತ ಸ್ವಯಂ ಕಲಿತುಕೊಂಡಿದ್ದಾನೆ!

ಹೊಸ ವಸ್ತು ಕಂಡರೆ ಅಧ್ಯಯನ
ಯಾವುದೇ ಹೊಸ ವಸ್ತು ಕಂಡರೂ ಅದನ್ನು ಅಧ್ಯಯನ ಮಾಡುತ್ತಾನೆ. ನಾವೇ ವಿದ್ಯುತ್‌ ಉಪಕರಣ ಮುಟ್ಟಬೇಡ ಅನ್ನುತ್ತಿದ್ದೆವು. ನನ್ನ ವಾಹನಗಳ ಯಾವುದೇ ಎಲೆಕ್ಟ್ರಿಕ್‌ ವಸ್ತು ಕೆಟ್ಟು ಹೋದರೂ ಆತನೇ ದುರಸ್ತಿ ಮಾಡುತ್ತಾನೆ. ಈಗ ಸ್ವಂತ ಆಸಕ್ತಿ, ಜ್ಞಾನದಿಂದ ಎಲೆಕ್ಟ್ರಿಕ್‌ ಸೈಕಲ್‌ ಸಿದ್ಧಪಡಿಸಿದ್ದಾನೆ.
-ಲಿಂಗಪ್ಪ ನಾಯ್ಕ ಗುಡ್ಡಕೋಡಿ, ಮೋಕ್ಷಿತ್‌ನ ತಂದೆ

ಸ್ಪರ್ಧೆಗೆ ಅಣಿಗೊಳಿಸುತ್ತೇವೆ
ನಮ್ಮ ವಿದ್ಯಾರ್ಥಿ ಮೋಕ್ಷಿತ್‌ನ ಸಾಧನೆ ಕುರಿತು ನಮಗೆ ಹೆಮ್ಮೆ ಇದೆ. ಆತನಿಗೆ ಎಲೆಕ್ಟ್ರಾನಿಕ್‌ ಕ್ಷೇತ್ರದಲ್ಲಿ ಇರುವ ಆಸಕ್ತಿ ನಮಗೆ ತಡವಾಗಿ ತಿಳಿದುಬಂದಿದೆ. ಮುಂದೆ ಆತನಿಗೆ ವಿಶೇಷ ಪ್ರೋತ್ಸಾಹ ನೀಡಿ ವಿಜ್ಞಾನ ವಿಭಾಗದಲ್ಲಿ ಗುಂಪು ಅಥವಾ ವೈಯಕ್ತಿಕ ವಿಭಾಗದಲ್ಲಿ ಯಾವುದಾದರೊಂದು ಮಾದರಿಯನ್ನು ಸಿದ್ಧಪಡಿಸಿ ಸ್ಪರ್ಧೆಗೆ ಅಣಿಗೊಳಿಸುವ ಕಾರ್ಯ ಮಾಡುತ್ತೇವೆ.
-ಗೀತಾಕುಮಾರಿ, ಗಣಿತ ಶಿಕ್ಷಕಿ, ಕಡೇಶ್ವಾಲ್ಯ ಸರಕಾರಿ ಪ್ರೌಢಶಾಲೆ

-ಕಿರಣ್‌ ಸರಪಾಡಿ

ಟಾಪ್ ನ್ಯೂಸ್

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ

India Cricket: The star all-rounder announced his retirement from limited over cricket

India Cricket: ಸೀಮಿತ ಓವರ್‌ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ ಸ್ಟಾರ್‌ ಆಲ್‌ ರೌಂಡರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Sullia: ಮಹಿಳೆ ಶೌಚಾಲಯದಲ್ಲಿದ್ದ ವೇಳೆ ಫೋಟೋ ತೆಗೆದು ಕಿಡಿಗೇಡಿ ಪರಾರಿ

1-idpp

Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್‌ ಕಪಾಡಿಯಾ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

India’s first case of HMPV infection detected in Bangalore

HMPV Virus: ಭಾರತದ ಮೊದಲ ಎಚ್‌ಎಂಪಿವಿ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ಪತ್ತೆ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Koppala: ಬಂದ್ ಕರೆಗೆ ಅಂಗಡಿ- ಮುಂಗಟ್ಟು ಬಂದ್

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.