Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್ಐಆರ್ ದಾಖಲು
13 ಬಿಜೆಪಿ ನಾಯಕರ ವಿರುದ್ಧ ದೂರು, ಒಂದೊಂದು ಜಿಲ್ಲೆಯು ಒಂದೊಂದು ರಿಪಬ್ಲಿಕ್ ಎಂದ ಸಿ.ಟಿ.ರವಿ
Team Udayavani, Jan 1, 2025, 7:41 PM IST
ಬೆಂಗಳೂರು: ಬೀದರ್ನಲ್ಲಿ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪ್ರಿಯಾಂಕ್ ಖರ್ಗೆ (priyank Kharge) ರಾಜೀನಾಮೆಗೆ ಒತ್ತಾಯಿಸಿ ವಿಪಕ್ಷ ಬಿಜೆಪಿ ಪೋಸ್ಟರ್ ಆಂದೋಲನ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ಪ್ರತ್ಯಾರೋಪದ ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪೋಸ್ಟರ್ ಅಂಟಿಸಿದ 13 ಮಂದಿ ಬಿಜೆಪಿ ನಾಯಕರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಮಂಗಳವಾರ ಬೆಳಗ್ಗೆ ರೇಸ್ ಕೋರ್ಸ್ ರಸ್ತೆಯ ಸಾರ್ವಜನಿಕ ಶೌಚಾಲಯದ ಗೋಡೆಗೆ ಸಚಿವರ ರಾಜೀನಾಮೆಗೆ ಒತ್ತಾಯಿಸುವ ಜೊತೆಗೆ, ಸುಫಾರಿ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂಬ ಪೋಸ್ಟರ್ ಅಂಟಿಸಿದ್ದರು. ಆ ಮೂಲಕ ಬೆಂಗಳೂರು ನಗರದ ಸೌಂದರ್ಯಕ್ಕೂ ಧಕ್ಕೆ ತರುವಂತೆ ಅಂಟಿಸುತ್ತಿದ್ದದ್ದು ಕಂಡು ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ನೀಡಿದ ಆರೋಪದ ಮೇಲೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯರಾದ ಸಿ.ಟಿ.ರವಿ, ಎನ್.ರವಿಕುಮಾರ್ ಸೇರಿ ಒಟ್ಟು 13 ಬಿಜೆಪಿ ನಾಯಕರ ವಿರುದ್ಧದ ದೂರು ಆಧರಿಸಿ ಪಿಎಸ್ಐ ಶಶಿಧರ ವಣ್ಣೂರ ಎಫ್ಐಆರ್ ದಾಖಲಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಕಾರಣರಾದ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ @NswamyChalavadi ಅವರ ನೇತೃತ್ವದಲ್ಲಿ ಪೋಸ್ಟರ್ ಅಭಿಯಾನ ನಡೆಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP , ಪ್ರಮುಖರಾದ ಶ್ರೀ ಜಗದೀಶ್ ಹಿರೇಮನಿ, ಶ್ರೀ ಉಮೇಶ್… pic.twitter.com/CeLIxjOz5E
— BJP Karnataka (@BJP4Karnataka) December 31, 2024
ಕಲಬುರಗಿ ರಿಪಬ್ಲಿಕ್, ಬೆಳಗಾವಿ ರಿಪಬ್ಲಿಕ್, ಕನಕಪುರ ರಿಪಬ್ಲಿಕ್ ಅಂತಾ ಒಂದೊಂದು ಜಿಲ್ಲೆಯನ್ನು ಒಂದೊಂದು ರಿಪಬ್ಲಿಕ್ ಮಾಡಿಕೊಂಡು ಬಿಟ್ಟಿದ್ದಾರೆ ಅಂತಾ ಸಿ.ಟಿ ರವಿ ಹರಿಹಾಯ್ದಿದ್ದಾರೆ. ಇನ್ನು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಲಬುರಗಿಯಲ್ಲಿ ವಿಶ್ವಕರ್ಮ ಸಮಾಜದಿಂದ ಬೃಹತ್ ಪ್ರತಿಭಟನೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kerala: ತಂಜಾವೂರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ ಅಪಘಾತ: ನಾಲ್ವರು ಮೃತ್ಯು
Kundapura: ನರೇಗಾದಿಂದ ಆಲೂರಿನ ಮಹಿಳೆಯ ಸ್ವಾವಲಂಬಿ ಬದುಕು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
Andhra: ʼಗೇಮ್ ಚೇಂಜರ್ʼ ಈವೆಂಟ್ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.