Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
4ನೇ ವರ್ಷದ ಮೈಸೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ "ಸಿನಿ ಸಂತೆ' ಸಮಾರೋಪ
Team Udayavani, Jan 1, 2025, 8:11 PM IST
ಮೈಸೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಪ್ರತಿಭಾವಂತ ಕಲಾವಿದರಿದ್ದರೂ, ಅವರಿಗೆ ಪ್ರತಿಭೆಯನ್ನು ಪ್ರದರ್ಶನ ಮಾಡಲು ಸೂಕ್ತ ವೇದಿಕೆ ಸಿಗುತ್ತಿಲ್ಲ ಎಂದು ನಟ ಡಾಲಿ ಧನಂಜಯ್ ಅಭಿಪ್ರಾಯಪಟ್ಟರು.
ನಗರದ ಜೆಕೆ ಮೈದಾನದಲ್ಲಿ ಮೇಕ್ ಸೊಸೈಟಿ ಸ್ಮೈಲ್ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ 4ನೇ ವರ್ಷದ ಮೈಸೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ “ಸಿನಿ ಸಂತೆ’ ಸಮಾರೋಪದಲ್ಲಿ ಅತ್ಯುತ್ತಮ ಕಿರು ಚಿತ್ರಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಹೊಸ ಪ್ರಯೋಗಗಳು, ನಿರ್ದೇಶನ, ಸಂಗೀತ ಸಾಹಿತ್ಯ ಇವೆಲ್ಲದಕ್ಕೂ ಮನ್ನಣೆ ನೀಡಲು ಸಿನಿ ಸಂತೆ ರೀತಿಯ ವಸ್ತುಪ್ರದರ್ಶನ ಉತ್ತಮ ವೇದಿಕೆ. ಅವರ ಪ್ರತಿಭೆ ಗುರುತಿಸಿ ಪ್ರಶಸ್ತಿ ನೀಡತ್ತಿರುವುದು ಉತ್ತಮ ಬೆಳವಣಿಗೆ. ಕಲಾವಿದರಾಗಿ ನಾವು ಬೆಳೆಯುವ ಜತೆಗೆ ಹೊಸ ಕಲಾವಿದರನ್ನು ಕರೆತಂದು ವೇದಿಕೆ ಕಲ್ಪಿಸಿ, ಪೋ›ತ್ಸಾಹಿಸಿದರೆ ಕಲಾವಿದನಲ್ಲಿರುವ ಕಲೆ ಸಾರ್ಥಕವಾಗುತ್ತದೆ ಎಂದರು.
ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಮಾತನಾಡಿ, ಮೈಸೂರು ಕಲಾವಿದರ ತವರೂರು. ನಾಟಕ, ನೃತ್ಯ, ಗಾಯನ, ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ಸಾವಿರಾರು ಕಲಾವಿದರು ಮೈಸೂರಿನ ಸಾಂಸ್ಕೃತಿಕ ಹಿರಿಮೆ ಶ್ರೀಮಂತಗೊಳಿಸಿದ್ದಾರೆ. ಮುಂದಿನ ದಿನಗಳಲ್ಲಿ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಬೇಸಿಗೆ ಶಿಬಿರ ಆಯೋಜಿಸಿ ಯುವ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವ ಚಿಂತನೆಯಿದೆ ಎಂದರು.
ಮೈಸೂರು ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವದ ಆಯೋಜಕಿ ರಂಜಿತಾ ಸುಬ್ರಹ್ಮಣ್ಯ, ಸಂಧ್ಯಾ ರಾಣಿ, ರೇಖಾ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.