Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ
Team Udayavani, Jan 1, 2025, 11:53 PM IST
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ಕೈ ಬಿಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಧೈರ್ಯವೇ ಇಲ್ಲ. ಹೀಗಾಗಿ ದಾಖಲೆ ಇಲ್ಲ ಎಂಬ ಕಾರಣ ನೀಡುತ್ತಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಚಿನ್ ಬರೆದಿಟ್ಟ 7 ಪುಟಗಳ ಡೆತ್ ನೋಟಿನಲ್ಲಿ 2-3 ಬಾರಿ ಪ್ರಿಯಾಂಕ್ ಖರ್ಗೆ ಹೆಸರು ಪ್ರಸ್ತಾವವಾಗಿದೆ. ಎಫ್ಎಸ್‌ಎಲ್ ವರದಿಯಲ್ಲಿ ಡೆತ್‌ನೋಟ್ ಅಸಲಿ ಎಂದು ದೃಢಪಟ್ಟಿದೆ. ದಾಖಲೆ ಕೊಡಿ ಎಂದರೆ ಇನ್ನೇನು ದಾಖಲೆ ಬೇಕು ನಿಮಗೆ? ಎಂದು ಪ್ರಶ್ನಿಸಿದರು.
ದಾಖಲೆ ಇಲ್ಲದ ಕಾರಣ ಸಚಿವ ಸ್ಥಾನದಿಂದ ಕೈಬಿಡುವ ವಿಚಾರ ಉದ್ಭವಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಮುಖ್ಯಮಂತ್ರಿಗಳೇ ಇದು ನಮಗೆ ಮೊದಲೇ ಗೊತ್ತಿದೆ. ನಿಮಗೆ ಅವರ ರಾಜೀನಾಮೆ ಕೇಳುವ ಧೈರ್ಯ ಇಲ್ಲ. ಆ ಪ್ರಯತ್ನಕ್ಕೆ ನೀವು ಕೈ ಹಾಕಿದರೆ ಅವರು ನಿಮ್ಮ ಬುಡಕ್ಕೆ ಕೈ ಹಾಕುತ್ತಾರೆಂಬ ಭಯ ನಿಮ್ಮನ್ನು ಕಾಡುತ್ತಿದೆ ಎಂದರು.
ತಾಕತ್ತಿಲ್ಲವೆಂದು ಒಪ್ಪಿಕೊಳ್ಳಿ
ಸಿದ್ದರಾಮಯ್ಯನವರೇ ಅಡ್ಡಗೋಡೆಯ ಮೇಲೆ ದೀಪ ಇಡುವ ಕೆಲಸ ಮಾಡಬೇಡಿ. ಅದರ ಬದಲು ನನಗೆ ತಾಕತ್ತಿಲ್ಲವೆಂದು ನೇರವಾಗಿ ಒಪ್ಪಿಕೊಳ್ಳಿ. ನಾವು ಯಾವುದೇ ಕಾರಣಕ್ಕೆ ಈ ಹೋರಾಟವನ್ನು ಕೈಬಿಡುವುದಿಲ್ಲ. ಬೀದರ್ ಕಲಬುರಗಿ ಮಾತ್ರವಲ್ಲ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಈ ಹೋರಾಟ ವ್ಯಾಪಿಸುತ್ತದೆ ಎಂದು ಎಚ್ಚರಿಕೆ ನೀಡಿದರು.
ಪ್ರಿಯಾಂಕ್ ಖರ್ಗೆಯವರೇ, ಯಾವುದೇ ಕಾರಣಕ್ಕೂ ನಾವು ನಮ್ಮ ಬಟ್ಟೆ ಹರಿದುಕೊಳ್ಳುವುದಿಲ್ಲ. ನೀವೂ ಹರಿದು ಕೊಳ್ಳಬೇಡಿ. ಅವರವರ ಬಟ್ಟೆ ಹರಿದುಕೊಳ್ಳುವವರನ್ನು ಹುಚ್ಚರು ಎನ್ನುತ್ತಾರೆ ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.