Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ
Team Udayavani, Jan 2, 2025, 12:03 AM IST
ಬೆಂಗಳೂರು: ರೇವ್ ಪಾರ್ಟಿ ನಡೆಸಿದ್ದ ಆರೋಪ ಸಂಬಂಧ ತೆಲುಗು ನಟಿ ಕೊಲ್ಲ ಹೇಮಾ ಅವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ಈ ವಿಚಾರವಾಗಿ ಹೇಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿ ಸಹ ಆರೋಪಿಗಳ ಹೇಳಿಕೆಗಳನ್ನು ಆಧರಿಸಿ ಎನ್ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಅರ್ಜಿದಾರರು ಮಾದಕ ವಸ್ತುಗಳನ್ನು ಸೇವಿಸಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೂ ವಿಚಾರಣ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.