Karnataka ರಾಜ್ಯದ 5 ನಗರಗಳಲ್ಲಿ ಸೇಫ್ ಸಿಟಿ?
ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿಗಾಗಿ ಪ್ರಸ್ತಾವನೆ
Team Udayavani, Jan 2, 2025, 7:20 AM IST
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಜಾರಿಯಲ್ಲಿರುವ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ “ಸೇಫ್ ಸಿಟಿ’ (ಸುರಕ್ಷಿತ ನಗರ) ಯೋಜನೆಯನ್ನು 2ನೇ ಹಂತದಲ್ಲಿ ರಾಜ್ಯದ 5 ಪ್ರಮುಖ ನಗರಗಳಲ್ಲಿ ಜಾರಿಗೆ ತರಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.
ಕೇಂದ್ರ ಸರಕಾರದ ನಿರ್ಭಯಾ ನಿಧಿಯಡಿ ಬೆಂಗಳೂರಿನಲ್ಲಿ 2023ರಲ್ಲಿ ಯೋಜನೆ ಜಾರಿಗೆ ತರಲಾಗಿತ್ತು. ಇದೀಗ ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಜಾರಿಗೆ ರಾಜ್ಯ ಸರಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಹಸುರು ನಿಶಾನೆ ಸಿಕ್ಕಲ್ಲಿ ಶೀಘ್ರದಲ್ಲೇ ಅನುಷ್ಠಾನಕ್ಕೆ ಬರಲಿದೆ.5 ನಗರಗಳಿಗೆ ತಲಾ 200 ಕೋಟಿ ರೂ.ಗಳಂತೆ 1,000 ಕೋಟಿ ರೂ. ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು ಅವುಗಳಿಗೆ ಮಂಜೂರಾತಿ ನೀಡುವಂತೆ ಜೂನ್‌ನಲ್ಲಿ ದಿಲ್ಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಯವರು ಕೇಂದ್ರ ಗೃಹಸಚಿವರಿಗೆ ಮನವಿ ಮಾಡಿದ್ದರು.
ಬೆಂಗಳೂರು ಮುಂಚೂಣಿ : ನಿರ್ಭಯಾ ಯೋಜನೆಯಡಿ ಬೆಂಗಳೂರು, ಅಹ್ಮದಾಬಾದ್, ಚೆನ್ನೈ, ದಿಲ್ಲಿ, ಹೈದರಾಬಾದ್, ಕೋಲ್ಕತಾ, ಲಕ್ನೋ ಹಾಗೂ ಮುಂಬಯಿ ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಯಾಗುತ್ತಿದೆ. ಇತರ ನಗರಗಳಿಗೆ ಹೋಲಿಸಿದರೆ ಯೋಜನೆ ಅನುಷ್ಠಾನದಲ್ಲಿ ಬೆಂಗಳೂರು ಮುಂಚೂಣಿಯಲ್ಲಿದೆ ಎಂದು ಗೃಹ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.
ಏನಿದು ಸೇಫ್
ಸಿಟಿ ಯೋಜನೆ?
ದಿಲ್ಲಿಯಲ್ಲಿ 2012ರಲ್ಲಿ ನಡೆದ ಭಯಾನಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಮಹಿಳೆಯರ ಸುರಕ್ಷೆ ದೃಷ್ಟಿಯಿಂದ ಕೇಂದ್ರ ಸರಕಾರ ನಿರ್ಭಯಾ ನಿಧಿಯಡಿ 2016ರಲ್ಲಿ ಸೇಫ್ ಸಿಟಿ ಯೋಜನೆಯನ್ನು ಜಾರಿಗೆ ತಂದಿತು. ಕೇಂದ್ರ ಮತ್ತು ರಾಜ್ಯ ಸರಕಾರದ 60:40ರ ಅನುದಾನ ಅನುಪಾತದಲ್ಲಿ ಈ ಯೋಜನೆ ಕಾರ್ಯಗತಗೊಳ್ಳುತ್ತದೆ. ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಸ್ಥಳಗಳ ಪತ್ತೆ ಹಚ್ಚುವಿಕೆ, ಜಾಗೃತಿ ಕಾರ್ಯಕ್ರಮಗಳ ಮೂಲಕ ಮೂಲಸೌಕರ್ಯ ಕಲ್ಪಿಸುವುದು, ತಂತ್ರಜ್ಞಾನ ಅಳವಡಿಕೆ ಮತ್ತು ಸಾಮರ್ಥ್ಯ ವೃದ್ಧಿ ಸೇರಿದಂತೆ ವಿವಿಧ ಘಟಕಗಳ ನಿಯೋಜನೆಯನ್ನು ಈ ಯೋಜನೆ ಒಳಗೊಂಡಿದೆ.
ಬೆಂಗಳೂರು ರೀತಿ ಮಂಗಳೂರು,ಮೈಸೂರು, ಹುಬ್ಬಳ್ಳಿ- ಧಾರವಾಡ, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಗೆ ತರಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರದ ಪರಿಶೀಲನೆಯಲ್ಲಿದೆ.
-ಎಸ್.ಆರ್. ಉಮಾಶಂಕರ್,
ಅಪರ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.