Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
Team Udayavani, Jan 2, 2025, 4:54 PM IST
ರಾಯಚೂರು: ಶಬರಿಮಲೆ ಅಯ್ಯಪ್ಪಸ್ವಾಮಿಗೆ ಜಾತ್ಯತೀತವಾಗಿ ನಡೆದುಕೊಳ್ಳುವ ಭಕ್ತರಿಗೇನು ಕಡಿಮೆ ಇಲ್ಲ. ಈಗ ಧರ್ಮಾತೀತವಾಗಿ ಅಯ್ಯಪ್ಪಸ್ವಾಮಿಯನ್ನು ಆರಾಧಿಸುತ್ತಿದ್ದು, ಮುಸ್ಲಿಂ ವ್ಯಕ್ತಿಯೊಬ್ಬ ಮಾಲೆ ಧರಿಸುವ ಮೂಲಕ ಭಕ್ತಿ ಮೆರೆದಿದ್ದಾನೆ.
ಜಿಲ್ಲೆಯ ದೇವದುರ್ಗ ಪಟ್ಟಣದ ಬಾಬು ಗೌರಂಪೇಟ್ ಮಾಲೆ ಧರಿಸಿದ್ದಾರೆ.
ಮಕರ ಸಂಕ್ರಾಂತಿ ಪ್ರಯುಕ್ತ ಶಬರಿಮಲೆ ಅಯ್ಯಪ್ಪಸ್ವಾಮಿಗೆ ಹರಕೆ ಹೊತ್ತು ಮಾಲೆ ಧರಿಸುವವರ ಸಂಖ್ಯೆಗೇನು ಕಡಿಮೆ ಇಲ್ಲ. ಅನೇಕ ಹಿಂದು ಭಕ್ತರ ಜತೆಗೆ ಬಾಬು ಕೂಡ ಜತೆಯಾಗಿದ್ದಾರೆ.
ಪ್ರತಿ ವರ್ಷ ಮಾಲೆ ಧರಿಸಿ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಾರೆ. ಸರದಿ ಸಾಲಲ್ಲಿ ನಿಂತು ಅಯ್ಯಪ್ಪನ ದರ್ಶನ ಪಡೆದು ಪುನೀತರಾಗುತ್ತಾರೆ. ಬಾಬು ಅವರು ಎಲ್ಲರಂತೆ ಅಯ್ಯಪ್ಪ ಸ್ವಾಮಿ ಪೂಜೆ ಸಲ್ಲಿಸುತ್ತಾರೆ. ಎಲ್ಲರೊಡಗೂಡಿ ಪಾದಯಾತ್ರೆ ನಡೆಸುತ್ತಾರೆ. ಅಲ್ಲದೇ, ಶಬರಿಮಲೆಗೆ ತೆರಳಿ ಭಕ್ತಿ ಸಮರ್ಪಿಸುತ್ತಾರೆ.
ಬಾಬು ಭಕ್ತಿ ಭಾವಕ್ಕೆ ಸಾರ್ವಜನಿಕರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಿಂದೂ ಮುಸ್ಲಿಂ ಎಂದು ಕಿತ್ತಾಡುವ ಜನರಿಗೆ ಬಾಬು ಗೌರಂಪೇಟ್ ನಡೆ ಆದರ್ಶವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
ರಿಲಯನ್ಸ್ನಿಂದ ‘ರಸ್ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.