450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ


Team Udayavani, Jan 2, 2025, 6:25 PM IST

1-gil

ಸೂರತ್: 450 ಕೋಟಿ ರೂಪಾಯಿ ಪೋಂಜಿ ಹಗರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಸಿಐಡಿಯು ಕ್ರಿಕೆಟಿಗ ಶುಭಮನ್ ಗಿಲ್ ಸೇರಿ ನಾಲ್ವರು ಗುಜರಾತ್ ಟೈಟಾನ್ಸ್ ಆಟಗಾರರಿಗೆ ಸಮನ್ಸ್ ನೀಡುವ ಸಾಧ್ಯತೆಗಳಿವೆ. ವರದಿಗಳ ಪ್ರಕಾರ  ಗಿಲ್ ಜತೆಗೆ, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮ ಅವರನ್ನು ಸಿಐಡಿ ಪ್ರಶ್ನಿಸುವ ಸಾಧ್ಯತೆಯಿದೆ.

ಹಮದಾಬಾದ್ ಮಿರರ್‌ನ ವರದಿಯ ಪ್ರಕಾರ ಪೋಂಜಿ ಯೋಜನೆಯ ಹಿಂದಿನ ಮಾಸ್ಟರ್‌ಮೈಂಡ್ ಎಂದು ಹೇಳಲಾದ ಭೂಪೇಂದ್ರ ಸಿನ್ಹ ಝಾಲಾ ಅವರ ವಿಚಾರಣೆಯ ನಂತರ ಈ ಬೆಳವಣಿಗೆ ನಡೆದಿದೆ. ಕ್ರಿಕೆಟಿಗರನ್ನು ಒಳಗೊಂಡು ಮಾಡಿದ ಹೂಡಿಕೆಯನ್ನು ಹಿಂದಿರುಗಿಸಲು ವಿಫಲವಾಗಿರುವುದಾಗಿ ಝಲಾ ವಿಚಾರಣೆಯ ಸಮಯದಲ್ಲಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

450 ಕೋಟಿ ರೂ. ಚಿಟ್ ಫಂಡ್ ಹಗರಣವನ್ನು ರೂಪಿಸಿದ ಆರೋಪ ಹೊತ್ತಿರುವ ಝಾಲಾ ರನ್ನು ಪೋಂಜಿ ಕಾರ್ಯಾಚರಣೆ “ಕಿಂಗ್‌ಪಿನ್” ಎಂದು ವ್ಯಾಪಕವಾಗಿ ಪರಿಗಣಿಸಲಾಗಿದೆ.

ಗುಜರಾತ್‌ನಾದ್ಯಂತ ತಲೋದ್, ಹಿಮ್ಮತ್‌ನಗರ ಮತ್ತು ವಡೋದರಾ ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಕಚೇರಿಗಳನ್ನು ತೆರೆದಿದ್ದು ಹೂಡಿಕೆದಾರರಿಂದ ಹಣವನ್ನು ಸಂಗ್ರಹಿಸಲು ಏಜೆಂಟ್‌ಗಳನ್ನು ನೇಮಿಸಿಕೊಂಡು ಬ್ಯಾಂಕ್‌ಗಳ ಮೂಲಕ ಝಾಲಾ 6,000 ಕೋಟಿ ರೂ.ಗಳ ಹಣಕಾಸು ವಹಿವಾಟು ನಡೆಸಿರುವುದು ಕಂಡು ಬಂದಿದೆ.

ಐಪಿಎಲ್‌ 2024 ರಲ್ಲಿ ಗುಜರಾತ್ ಟೈಟಾನ್ಸ್ ನಾಯಕರಾಗಿದ್ದ ಗಿಲ್ ಈ ಯೋಜನೆಯಲ್ಲಿ ರೂ 1.95 ಕೋಟಿ ಹೂಡಿಕೆ ಮಾಡಿದ್ದಾರೆ ಎಂದು ವರದಿಗಳು ಹೇಳಿವೆ. ಆದರೆ ಮೋಹಿತ್ ಶರ್ಮ, ತೆವಾಟಿಯಾ ಮತ್ತು ಸುದರ್ಶನ್ ಸಣ್ಣ ಮಟ್ಟದ ಹೂಡಿಕೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಗಿಲ್ ಪ್ರಸ್ತುತ ಆಸ್ಟ್ರೇಲಿಯದಲ್ಲಿ ಭಾರತದ ಟೆಸ್ಟ್ ತಂಡದ ಭಾಗವಾಗಿರುವುದರಿಂದ, CID ಎಲ್ಲಾ ಆಟಗಾರರನ್ನು ನಂತರದ ದಿನಾಂಕದಲ್ಲಿ ಕರೆಸಿಕೊಳ್ಳಲು ಯೋಜಿಸಿದೆ. ಪ್ರತಿಕ್ರಿಯೆಗಾಗಿ ಮೋಹಿತ್ ಶರ್ಮ ಅವರನ್ನು ಸಂಪರ್ಕಿಸುವ ಪ್ರಯತ್ನಗಳು ವಿಫಲವಾಗಿವೆ.

ನಡೆಯುತ್ತಿರುವ ತನಿಖೆಯಲ್ಲಿ ಆಟಗಾರರ ಸಹಕಾರ ನಿರ್ಣಾಯಕವಾಗಲಿದೆ ಎಂದು ಗುಜರಾತ್ ಸಿಐಡಿ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಪ್ರಕರಣ ಮುಂದುವರಿದಂತೆ ಮುಂದಿನ ಬೆಳವಣಿಗೆಗಳ ಮೇಲೆ ಕುತೂಹಲ ಮೂಡಿದೆ.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-Y-J

Yashasvi Jaiswal ವಿಶ್ವಾಸ; ನಾವು ಬಲಿಷ್ಠರಾಗಿ ಬರುವೆವು…

1-SA

Test; ಪಾಕಿಸ್ಥಾನಕ್ಕೆ 10 ವಿಕೆಟ್‌ ಸೋಲು :ದಕ್ಷಿಣ ಆಫ್ರಿಕಾ 2-0 ಕ್ಲೀನ್‌ಸ್ವೀಪ್‌

1-aff

Test; ಅಫ್ಘಾನಿಸ್ಥಾನಕ್ಕೆ ಒಲಿಯಿತು 1-0 ಸರಣಿ

mandhana (2)

ODI; ಐರ್ಲೆಂಡ್‌ ಸರಣಿ: ಕೌರ್‌, ರೇಣುಕಾ ಸಿಂಗ್‌ಗೆ ರೆಸ್ಟ್‌

Bumrah’s injury worries Team India: Out of England series

Team India; ಬುಮ್ರಾ ಗಾಯದಿಂದ ಟೀಂ ಇಂಡಿಯಾಗೆ ಆತಂಕ: ಪ್ರಮುಖ ಸರಣಿಯಿಂದ ಔಟ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.