Kundapura: ಮಲಗಿದ್ದಲ್ಲಿಯೇ ವ್ಯಕ್ತಿ ಸಾವು
Team Udayavani, Jan 2, 2025, 9:45 PM IST
ಕುಂದಾಪುರ: ವಿಪರೀತ ಮದ್ಯ ಸೇವನೆಯ ಚಟ ಹೊಂದಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಿಲ್ಲಾಡಿ ಗ್ರಾಮದ ಶೇಖರ (54) ಅವರು ಇಲ್ಲಿನ ಶಾಸ್ತ್ರೀ ಸರ್ಕಲ್ನ ಬಸ್ ನಿಲ್ದಾಣ ಬಳಿ ಮಲಗಿದಲ್ಲಿಯೇ ಸಾವನ್ನಪ್ಪಿದ ಘಟನೆ ಜ. 2ರಂದು ಬೆಳಕಿಗೆ ಬಂದಿದೆ.
ಹೊಟೇಲ್ನಲ್ಲಿ ಕೆಲಸ ಮಾಡಿಕೊಂಡಿದ್ದ ಶೇಖರ ಅವರು ಕಿಡ್ನಿ ಸಮಸ್ಯೆಗೆ ಕುಂದಾಪುರದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಮದ್ಯ ಸೇವನೆಯ ಚಟ ಹೊಂದಿದ್ದ ಅವರು ಸರಿಯಾಗಿ ಆಹಾರ ಸೇವನೆ ಮಾಡದೆಯೂ ಇರುತ್ತಿದ್ದರು. ಅದೇ ಕಾರಣಕ್ಕೆ ಸಾವನ್ನಪ್ಪಿರಬಹುದು ಎಂದು ಪುತ್ರ ರಿತೇಶ್ (19) ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.